ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಉಚಿತ ಕಾನೂನಿನ ಅರಿವು

ಕಲಬುರಗಿ; ಕೇಂದ್ರ ಕಾರಾಗೃಹದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧೀಕಾರ ಮತ್ತು ಕೇಂದ್ರ ಕಾರಾಗೃಹ ಕಲಬುರಗಿರವರ ಸಹಯೋಗದೊಂದಿಗೆ ಶಿಕ್ಷಾ ಮತ್ತು ವಿಚಾರಣಾ ಬಂದಿಗಳಿಗೆ ಕಾನೂನಿನ ಅರಿವು ಮತ್ತು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಹಾಗೂ ಉದ್ಘಾಟಕರಾಗಿ ಆಗಮಿಸಿದ ನ್ಯಾಯಾಧೀಶರಾದ ಶ್ರೀನಿವಾಸ ನವಲೆ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಲಬುರಗಿರವರು ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದರು.

ಪ್ರತಿಯೊಬ್ಬ ಬಂದಿಗಳೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಉಚಿತವಾಗಿ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು, ಯಾವ ಬಂದಿಗೆ ವಕೀಲರನ್ನು ನೇಮಿಸುವ ಆರ್ಥಿಕವಾಗಿ ಶಕ್ತಿ ಇಲ್ಲವೋ ಅಂತಹ ಬಂದಿಗಳೀಗೆ ನಾವುಗಳು ಉಚಿತ ವಕೀಲರನ್ನು ಒದಗಿಸಿಕೊಡುತ್ತೇವೆ. ಅಲ್ಲದೇ ಪ್ರತ್ಯೇಕವಾಗಿ ಬಂದಿಗಳಿಗೊಸ್ಕರವಾಗಿ ಪೂರ್ಣ ಪ್ರಮಾಣದ ವಕೀಲರನ್ನು ನೇಮಿಸಲಾಗುವುದು, ಅವರು ನಿಮ್ಮ ಪ್ರಕರಣವನ್ನು ಬಿಟ್ಟು ಬೇರೆ ಪ್ರಕರಣಗಳನ್ನು ತೆಗೆದುಕೊಳ್ಳುವುದಿಲ್ಲ.

ಆರ್ಥಿಕವಾಗಿ ಶಕ್ತಿ ಇಲ್ಲದಿರುವ ಕಾರಾಗೃಹದಲ್ಲಿರುವ ಬಂದಿಗಳಿಗೆ ಜಾಮೀನು ದೊರೆತ ಅಪರಾಧ ಪ್ರಕರಣಗಳಲ್ಲಿ ಜಾಮೀನುದಾರರನ್ನು ಒದಗಿಸಲು ಸಾದ್ಯವಾಗದ ಹಿನ್ನೆಲೆಯಲ್ಲಿ ಯುಟಿಆರ್‍ಸಿ ಕಮೀಟಿ ವತಿಯಿಂದ ಗೌ|| ನ್ಯಾಯಾಲಯಗಳು ವಿಧಿಸಿರುವ ಷರತ್ತು ಮತ್ತು ನಿಬಂಧನೆಗಳನ್ನು ಸಡಿಲಗೊಳಿಸಲು ಪ್ರಯತ್ನಿಸುತ್ತೇವೆ. ಅಲ್ಲದೇ, ಕೆಲವೊಂದು ಪ್ರಕರಣಗಳಲ್ಲಿ ಸ್ವಯಂ ಮುಚ್ಚಳಿಕೆ ಪತ್ರದ ಮುಖಾಂತರ ಬಿಡುಗಡೆ ಮಾಡಲು ಶಿಫಾರಸ್ಸು ಮಾಡುತ್ತೇವೆ ಎಂದು ತಿಳಿಸಿದರು.

ಕಾರಾಗೃಹ ಇಲಾಖೆಯು ಬಂದಿಗಳ ಸುಧಾರಣೆ ಮಾಡಲು ಹಲವಾರು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಬಂದಿಗಳು ಗಲಾಟೆ ಮಾಡದೇ ಇಲ್ಲಿ ನೀಡುವ ಸುಧಾರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾನೂನಿನ ನೆರವು ಪಡೆದು ಇಲ್ಲಿಂದ ಬಿಡುಗಡೆ ಹೊಂದಿ ಉತ್ತಮ ಜೀವನ ನಡೆಸಿ ಎಂದು ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಮುಖ್ಯ ಅಧೀಕ್ಷಕರಾದ ಡಾ|| ಅನಿತಾ ಆರ್ .ರವರು ಮಾತನಾಡುತ್ತಾ ಜಿಲ್ಲಾ ಕಾನೂನು ಸೇವಾ ಪ್ರಾಧೀಕಾರ ಕಲಬುರಗಿ ವತಿಯಿಂದ ಸಿಗುವ ಸೌಲಭ್ಯಗಳನ್ನು ನಿಮಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು, ಅಲ್ಲದೆ ತಾವುಗಳು ಒಳ್ಳೆಯ ನಡತೆಯೊಂದಿಗೆ ಉತ್ತಮ ಸಹಕಾರ ನೀಡಿದ್ದಲ್ಲಿ ಕಾನೂನಾತ್ಮಕವಾಗಿ ತಮಗೆ ದೊರೆಯುವ ಸೌಲಭ್ಯಗಳನು ನೀಡಲಾಗುವುದು ಅವುಗಳ ಲಾಭ ಪಡೆದು ಆದಷ್ಟು ಬೇಗ ಇಲ್ಲಿಂದ ಬಿಡುಗಡೆ ಹೊಂದಿ ಸಮಾಜದಲ್ಲಿ ಒಳ್ಳೆಯ ಸಮಾಜಮುಖಿಯಾಗಿ ಕೆಲಸವನ್ನು ನಿರ್ವಹಿಸುತ್ತಾ ಕುಟುಂಬದವರೊಡನೆ ಉತ್ತಮ ಬಾಳ್ವೆಯನ್ನು ನಡೆಸುವಂತೆ ಹೇಳಿದರು.

ಈ ಸಂಸ್ಥೆಯ ಪ್ರಭಾರಿ ಅಧೀಕ್ಷಕರಾದ ಬಿ.ಸುರೇಶರವರು ಸ್ವಾಗತ ಕಾರ್ಯಕ್ರಮ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶ್ರೀ ಚನ್ನಪ್ಪ ಸಹಾಯಕ ಅಧೀಕ್ಷಕರು, ಜೈಲರ್‍ಗಳಾದ ಶ್ರೀಮತಿ ಸುನಂದಾ ವಿಆರ್ ಶ್ರೀ ಸಾಗರ್ ಪಾಟೀಲ್, ಸಿಬ್ಬಂದಿಗಳು ಹಾಗೂ ಬಂದಿಗಳು ಭಾಗವಹಿಸಿದ್ದರು.

ಈ ಸಂಸ್ಥೆಯ ಶಿಕ್ಷಕರಾದ ನಾಗರಾಜ ಮೂಲಗೆ ನಿರೂಪಣೆ ಮತ್ತು ವಂದನಾರ್ಪಣೆ ನಡೆಸಿಕೊಟ್ಟರು.ಪ್ರಾರ್ಥನಾ ಗೀತೆಯನ್ನು ಶಿಕ್ಷಾಬಂದಿಯಾದ ರಾಮಣ್ಣ ತಂದೆ ನರಸಪ್ಪ ನೀರಮಾನ್ವಿ ಹಾಡಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago