ಕಲಬುರಗಿ: ಭಾರತ ದೇಶ ಅನೇಕ ಧರ್ಮ, ಸಮುದಾಯ, ಭಾಷೆ, ಪ್ರದೇಶಗಳು, ಅಪರೂಪದ ವಾಸ್ತುಶಿಲ್ಪಗಳು, ಕಲಾಕೃತಿಗಳು, ಐತಿಹಾಸಿಕ ಸ್ಮಾರಕಗಳನ್ನು ಹೊಂದಿದ್ದು ದೊಡ್ಡ ಮ್ಯೂಸಿಯಂ ಆಗಿದೆ. ವಿಶ್ವದ ಯಾವುದೇ ಕಲಾವಿದನಿಗೆ ನಮ್ಮ ದೇಶವೇ ಆಧಾರವಾಗಿದ್ದು, ಇಲ್ಲಿಗೆ ಆಗಮಿಸಿ ಅಧ್ಯಯನ ಮಾಡುತ್ತಿದ್ದಾರೆ. ದೇಶದಲ್ಲಿರುವ ಅಪರೂಪದ ಕಲಾಕೃತಿಗಳು, ಐತಿಹಾಸಿಕ ಸ್ಥಳಗಳು, ಸ್ಮಾರಕಗಳನ್ನು ರಕ್ಷಿಸಿ, ಮುಂದಿನ ಜನಾಂಗಕ್ಕೆ ಮುಟ್ಟಿಸುವ ಕಾರ್ಯವಾಗಬೇಕಾಗಿದೆ ಎಂದು ಅಂತಾರಾಷ್ಟ್ರೀಯ ಖ್ಯಾತ ಚಿತ್ರ ಕಲಾವಿದ ಮಹಮ್ಮದ್ ಅಯಾಜುದ್ದೀನ್ ಪಟೇಲ್ ಅಭಿಪ್ರಾಯಪಟ್ಟರು.
ನಗರದ ಕುವೆಂಪು ನಗರದ ಬ್ಯಾಂಕ್ ಕಾಲನಿಯಲ್ಲಿರುವ ‘ಆಕೃತಿ ಕಲಾ ಗ್ಯಾಲರಿ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ಅಂತಾರಾಷ್ಟ್ರೀಯ ಕಲಾವಿದರ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಜನಸಾಮಾನ್ಯರಿಗೆ ಕಲೆಯನ್ನು ತಲುಪಿಸುವ ಕೆಲಸವಾಗಬೇಕು. ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು. ನೈಜ ಕಲಾವಿರನ್ನು ಗುರ್ತಿಸಬೇಕು. ದೃಶ್ಯಕಲೆಯು ಅತ್ಯಂತ ಪರಿಣಾಮಕಾರಿಯಾದ ಮಾಧ್ಯಮವಾಗಿದ್ದು, ಇದು ಮನುಷ್ಯರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಸಮಾಜದಲ್ಲಿರುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಮೂಲಕ, ಅವುಗಳಿಗೆ ಪರಿಹಾರವನ್ನು ಸೂಚಿಸಿ ಸಮಾಜದ ಸಮತೋಲನ ಸ್ಥಿತಿಯನ್ನು ಕಾಪಾಡುವ ಶಕ್ತಿ ದೃಶ್ಯಕಲೆಗಿದೆ ಎಂದರು.
ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡಿ, ಚಿತ್ರಕಲೆಯು ಘಟನೆ, ಸಂದರ್ಭದ ನೈಜತೆಯನ್ನು ಕಟ್ಟಿಗೆ ಕಟ್ಟುವ ಹಾಗೆ ನೀಡುತ್ತದೆ. ಇದು ಶಾಶ್ವತವಾದ ದಾಖಲೆಯಾಗಿದೆ. ‘ಒಂದು ಚಿತ್ರ ಸಾವಿರ ಶಬ್ದಗಳಿಗೆ ಸಮಾನ’ ಎಂಬ ಮಾತು ಚಿತ್ರಕಲೆಯ ಮಹತ್ವವನ್ನು ಸಾರುತ್ತದೆ. ಚಿತ್ರ ಕಲಾವಿದರಲ್ಲಿರುವ ಕಲ್ಪನಾ ಶಕ್ತಿ ಅದ್ಭುತವಾಗಿದೆ. ಇಂದಿನ ಯಾಂತ್ರಿಕೃತ ಬದುಕಿನಲ್ಲಿ ಸಂಬಂಧಗಳ ಹುಡುಕಾಟ ಮಾಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಕಲೆಯೆಂಬುದು ಜೀವಂತಿಕೆಯನ್ನು ಒದಗಿಸಿಕೊಡುತ್ತದೆ. ಕಲೆಯು ಮುಂದಿನ ಪೀಳಿಗೆಯಲ್ಲಿ ಸಂಸ್ಕøತಿಯನ್ನು ಪ್ರತಿಬಿಂಬಿಸುತ್ತದೆ. ಜಾತಿ, ಧರ್ಮ, ವ್ಯಾಪ್ತಿ, ಪ್ರದೇಶಗಳನ್ನು ಮೀರಿದ್ದಾಗಿದ್ದು, ಮೌನ ಭಾಷೆಯಾಗಿದೆ ಎಂದರು.
ಅಂತಾರಾಷ್ಟ್ರೀಯ ಚಿತ್ರ ಕಲಾವಿದರಾದ ಡಾ.ಸುಬ್ಬಯ್ಯ ಎಂ.ನೀಲಾ, ಮಹಮ್ಮದ್ ಅಯಾಜುದ್ದೀನ್ ಪಟೇಲ್, ಡಾ.ರೆಹಮಾನ ಪಟೇಲ್, ರಾಜಶೇಖರ ಎಸ್.ಕೊಡೆಕಲ್, ಡಾ.ಶಹೀದ್ ಪಾಶಾ ಅವರಿಗೆ ಸತ್ಕರಿಸಿ, ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಕ್ಸಸ್ ಕಂಪ್ಯೂಟರ ತರಬೇತಿ ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಕರ್ನಾಟಕ ಹಿಂದಿ ಪ್ರಚಾರ ಸಭಾದ ಅಧ್ಯಕ್ಷ ಅಶೋಕ ಗುರುಜಿ, ಪ್ರಮುಖರಾದ ಧರ್ಮಗಿರಿ, ಭರತ ನಾಯಕ, ಎ.ಡಿ.ಪತ್ತಾರ, ರಾಜು ಸಾಂಗ್ವಿಕರ್, ವಿಜಯಲಕ್ಷ್ಮೀ ಆರ್.ಕೊಡೆಕಲ್, ಸಂಭ್ರಮ ಆರ್.ಕೊಡೆಕಲ್ ಸೇರಿದಂತೆ ಇನ್ನಿತರರಿದ್ದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…