ವಾಡಿ: ಹೊಸದಾಗಿ ರೈಲು ಹಳಿ ಜೋಡಣೆ ಕಾರ್ಯ ಪ್ರಗತಿಯಲ್ಲಿರುವುದರಿಂದ ಅ.27 ಹಾಗೂ 28 ರಂದು ಎರಡು ದಿನ ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿ-150 ವಾಹನ ಸಂಚಾರ ಬಂದ್ ಘೋಷಿಸಲಾಗಿದೆ ಎಂದು ಸೌತ್ ಸೆಂಟ್ರಲ್ ರೈಲ್ವೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಪುರಸಭೆ ಮುಖ್ಯಾಧಿಕಾರಿ ಸಿ.ಫಕೃದ್ಧಿನ್ ಸಾಬ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ವಾಡಿ-ಸಿಕಿಂದ್ರಾಬಾದ್ ನಡುವೆ ಎರಡು ಹೊಸ ರೈಲು ಹಳಿ ಮಾರ್ಗಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಆದ್ದರಿಂದ ವಾಡಿ ಪಟ್ಟಣದಲ್ಲಿರುವ ಕಲಬುರಗಿ-ರಾಯಚೂರ ರಾಷ್ಟ್ರೀಯ ಹೆದ್ದಾರಿ ಮಾರ್ಗದ ನಿಜಾಮ್ ಗೇಟ್ ಹತ್ತಿರ ಎರಡು ದಿನ ಮಧ್ಯರಾತ್ರಿ 12:00 ರಿಂದ ಬೆಳಗಿನ 6:00 ಗಂಟೆ ವರೆಗೆ ರೈಲ್ವೆ ಗೇಟ್ ಬಂದ್ ಮಾಡಲಾಗುತ್ತಿದೆ. ಹಗಲು ಹೊತ್ತಿನಲ್ಲಿ ಸಂಚಾರಕ್ಕೆ ತೊಂದರೆಯಿರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…