ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮ ಚಾಲನೆ

ಕಲಬುರಗಿ: ನಗರದ ಹೈಕೋರ್ಟ್ ಹತ್ತಿರ ಡಿವೈನ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ  ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಘಟಕ ಕೇಂದ್ರ ಚೈಲ್ಡ್ ರೈಡ್ ಟ್ರಸ್ಟ್  ಯುನಿಸೆಫ್ ಬೆಂಗಳೂರು ಹಾಗೂ ಮಾರ್ಗದರ್ಶಿ ಸಂಸ್ಥೆ ಇವರುಗಳ ಸಯುಕ್ತ ಆಶ್ರಯದಲ್ಲಿ  ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ಈ ಕಾರ್ಯಕ್ರಮವನ್ನು  ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ  ಮಂಜುಳಾ ಪಾಟೀಲ್ ಉದ್ಘಾಟಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಕ್ಕಳು ಸುರಕ್ಷಿತವಾಗಿರಬೇಕು ಎಲ್ಲಾ ಮಕ್ಕಳಿಗೆ ಬದುಕುವ ಹಕ್ಕಿದೆ ರಕ್ಷಣೆ ಹೊಂದುವ ಹಕ್ಕಿದೆ ವಿಕಾಸ ಹೊಂದುವ ಹಕ್ಕಿದೆ ಹಾಗೂ ಭಾಗವಹಿಸುವ ಹಕ್ಕಿದೆ ಎಂಬುದಾಗಿ ಮನವರಿಕೆ ಮಾಡಿದರು ಕಲ್ಬುರ್ಗಿ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚು ಹೆಚ್ಚು ಆಗುವುದರಿಂದ ನಿಮ್ಮಂತ ಮಕ್ಕಳು ಬಾಲ್ಯ ವಿವಾಹವನ್ನು ತಡೆಯಬೇಕು ನೀವು ಕೂಡ ಬಾಲ್ಯ ವಿವಾಹಕ್ಕೆ ಒಳಗಾಗಬಾರದು ಎಂದು ಹೇಳಿದರು.

ಮಾರ್ಗದರ್ಶಿ ಸಂಸ್ಥೆ ನಿರ್ದೇಶಕ  ಆನಂದ್ ರಾಜ್ ಇವರು ಪ್ರಸ್ತಾವಿಕವಾಗಿ ಮಾತನಾಡಿ ಜಿಲ್ಲಾ ಮಕ್ಕಳ ಜಿಲ್ಲಾಮಟ್ಟದ ಮಕ್ಕಳ ಹಕ್ಕುಗಳ ಸಂಸತ್ 2024 ಕಾರ್ಯಕ್ರಮದ ಕುರಿತು ವಿವರಿಸಿದರು.

ಮಕ್ಕಳಿಗೆ ಕಲ್ಬುರ್ಗಿ ಜಿಲ್ಲೆಯಲ್ಲಿ ಇರತಕ್ಕಂತ ಸಮಸ್ಯೆಗಳು ಕುರಿತು ಅಂಕಿ ಸಂಖ್ಯೆಗಳ ಸಮೇತ ತಿಳಿಸಲಾಯಿತು ಮತ್ತು ಕಲ್ಬುರ್ಗಿ ಜಿಲ್ಲೆಯಲ್ಲಿ ಇರುವ ಸಮಸ್ಯೆಗಳಾದ ಬಾಲ್ಯ ವಿವಾಹ ಬಾಲ್ಯ ಕಾರ್ಮಿಕತೆ ಮಕ್ಕಳ ಮೇಲಿನ ದೌರ್ಜನ್ಯ ಮಕ್ಕಳ ಹಕ್ಕಿನ ಉಲ್ಲಂಘನೆಗಳ ಕುರಿತು ಪಿಪಿಟಿ ಮೂಲಕ ಮಕ್ಕಳಿಗೆ ತಿಳಿಸಲಾಯಿತು ತದನಂತರ ಮಕ್ಕಳನ್ನು ಗುಂಪು ಗುಂಪಾಗಿ ಮಾಡಿ ಮಕ್ಕಳೇ ಪ್ರಶ್ನೆಗಳನ್ನು ತಯಾರು ಮಾಡುವಂತೆ ಸಿದ್ಧತೆ ಮಾಡಲಾಯಿತು ಅದರಂತೆ ಮಕ್ಕಳು ಪ್ರತಿಯೊಂದು ಗುಂಪಿನಿಂದ 10 ಪ್ರಶ್ನೆಗಳನ್ನು ಸಮಸ್ಯೆಗಳನ್ನು ವೇದಿಕೆ ಮೇಲೆ ಪ್ರಸ್ತುತಪಡಿಸಿದರು .

ಪ್ರಸ್ತುತಪಡಿಸಿದಾ ಮಕ್ಕಳಲ್ಲಿ ಹತ್ತು ಮಕ್ಕಳಲ್ಲಿ ಇಬ್ಬರು ಮಕ್ಕಳನ್ನು ರಾಜ್ಯಮಟ್ಟಕ್ಕೆ ನವಂಬರ್ ತಿಂಗಳಲ್ಲಿ ನಡೆಯುವ ವಿಧಾನಸಭೆಯಲ್ಲಿ ಮಕ್ಕಳ ಸಂಸತ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಕುಮಾರಿ ಚೈತ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಣದಾಳ ಹಾಗೂ ಕುಮಾರಿ ಸಿಂಧು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಣಿ ಈ ಮಕ್ಕಳನ್ನು ರಾಜ್ಯಮಟ್ಟಕ್ಕೆ ಆರಿಸಿ ಕಳುಹಿಸಲಾಯಿತು.

ನಂತರ  ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಮಾಣಪತ್ರವನ್ನು ಮಂಜುಳಾ ಪಾಟೀಲ್ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಪ್ರೇಮ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಲ್ಬುರ್ಗಿ ಗ್ರಾಮೀಣ,  ವಿಜಯಕುಮಾರ್ ಜಮಖಂಡಿ ಬಿಇಒ ದಕ್ಷಿಣ ವಲಯ,  ಅನ್ನಪೂರ್ಣ ಏ. ಬಿ ಆರ್ ಪಿ ಕಲ್ಬುರ್ಗಿ ದಕ್ಷಿಣ ವಲಯ,  ಯಶೋಧ ಉಪ ನಿರ್ದೇಶಕರು ಮಾರ್ಗದರ್ಶಿ ಸಂಸ್ಥೆ ಅವರು ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದರು ಈ ಕಾರ್ಯಕ್ರಮದಲ್ಲಿ ಶಾಲಾ ಗುರು ವೃಂದದವರು ಹಾಗೂ ಮಾರ್ಗದರ್ಶಿ ಸಂಸ್ಥೆಯ ಸಿಬ್ಬಂದಿಯವರು ಹಾಜರಿದ್ದರು.

ಜಿಲ್ಲೆಯ ಹತ್ತು ಶಾಲೆಯ ಮಕ್ಕಳು ಪ್ರತಿಯೊಂದು ಶಾಲೆಯಿಂದ ಐದು ಮಕ್ಕಳು ಜಿಲ್ಲಾಮಟ್ಟದ ಸಂಸತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ಕುಮಾರಿ ಪ್ರಿಯಾಂಕ ನಿರೂಪಿಸಿದರು. ಶೀತಲ್ ಅವರು ಸ್ವಾಗತಿಸಿದರು ಕುಮಾರಿ ರತ್ನ ರವರು ವಂದನಾರ್ಪಣೆ ನೆರವೇರಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

45 mins ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

3 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

10 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

10 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

10 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

21 hours ago