ಬಹಿರಂಗದ ಸೌಂದರ್ಯಕ್ಕಿಂತ ಅಂತರಂಗದ ಸೌಂದರ್ಯತೆ ಮುಖ್ಯ

ಕಲಬುರಗಿ: ಬಹಿರಂಗದ ಸೌಂದರ್ಯಕ್ಕಾಗಿ ಸೀರೆ, ಆಭರಣ ಎಷ್ಟು ಮುಖ್ಯವೋ ಅಂತರಂಗದ ಆನಂದ ಅನುಭವಿಸಲು ಕದಳಿ ಮಹಿಳಾ ಸಂಘಟನೆ ಕೂಡ ಅಷ್ಟೇ ಅಗತ್ಯ ಎಂದು ಬೆಳಗಾವಿಯ ಪ್ರೇಮಕ್ಕ ಅಂಗಡಿ ಹೇಳಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ ವತಿಯಿಂದ ನಗರದ ಜೈಭವಾನಿ ಕನ್ವೆನ್ಷನ್‌ ಹಾಲ್ ನಲ್ಲಿ ಶನಿವಾರದಿಂದ ನಡಡಯುತ್ತಿರುವ 12ನೇ ರಾಜ್ಯ ಮಟ್ಟದ ಕದಳಿ ಮಹಿಳಾ ಸಮಾವೇಶದಲ್ಲಿ ‘ಕದಳಿ ಮಹಿಳಾ ವೇದಿಕೆ ಸಂಘಟನೆ ಮತ್ತು ಸವಾಲುಗಳು ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಸಂಘಟನೆಯಿಂದ ಏನು ಲಾಭ ಎನ್ನುವುದಕ್ಕಿಂತ ಮಹಿಳೆಯಾಗಿ ನಾವೆಷ್ಟು ಸಾರ್ಥಕವಾಗಿದ್ದೇವೆ ಎಂಬುದರ ಬಗ್ಗೆ ಆತ್ಮಾವಲೋಕನ ಅಗತ್ಯ ಎಂದು ತಿಳಿಸಿದರು.

ಅಕ್ಕ ಕೌಶಿಕನ ಮುಖಕ್ಕೆ ಎಸೆದ ದಿನ, ಬಂಗಾರದ ಒಡವೆಯನ್ನು ಕಸದಲ್ಲಿ ದಬ್ಬಿದ ಸತ್ಯಕ್ಕ ಮುಂತಾದವರು ನಮಗೆ ವಾರಸುದಾರರಾಗಬೇಕು ಎಂದು ಹೇಳಿದರು.

ಹೆಣ್ತನದ ಕಹಳೆ ಊದುವುದು ನಮ್ಮೆದುರಿಗಿರುವ ಸವಾಲು ಎಂದು ತಿಳಿಸಿದರು.

ರಾಯಚೂರಿನ ಸರ್ವ ಮಂಗಳಾ ಸಕ್ರಿ, ಡಾ. ಫರ್ವಿನ್ ಸುಲ್ತಾನ, ಡಾ. ಮೀನಾಕ್ಷಿ ಬಾಳಿ ಉಪಸ್ಥಿತರಿದ್ದರು. ಮೈಸೂರಿನ ಎಚ್.ಟಿ. ಶೈಲಜಾ ಅಧ್ಯಕ್ಷತೆ ವಹಿಸಿದ್ದರು.

ಡಾ.‌ ಶಿವಶರಣಪ್ಪ ಮೋತಕಪಲ್ಲಿ ನಿರೂಪಿಸಿದರು. ಡಾ. ಚಿತ್ಕಳಾ ಮಠಪತಿ ಸ್ವಾಗತಿಸಿದರು.‌ ಶರಣಗೌಡ ಪಾಟೀಲ ಪಾಳಾ ವಂದಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago