ಭ್ರಷ್ಟಾಚಾರ ವಿರುದ್ಧ ಜಾಗೃತಿ ಮೂಡಿಸಲು ಮುಖ್ಯಮಂತ್ರಿಗಳಿಂದ ಪ್ರತಿಜ್ಞಾವಿಧಿ ಬೋಧನೆ

0
17

ಬೆಂಗಳೂರು; ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಸಚಿವಾಲಯ ಸಿಬ್ಬಂದಿಗಳಿಗೆ ವಿಧಾನಸೌಧದ 3ನೇ ಮಹಡಿ ಸಮ್ಮೇಳನ ಸಭಾಂಗಣದಲ್ಲಿ “ಜಾಗೃತಿ ಅರಿವು ಸಪ್ತಾಹ-2024”ರ ಆಚರಣೆಯ ಪ್ರತಿಜ್ಞಾವಿದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೋಧಿಸಿದರು.

ನಮ್ಮ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವು ಒಂದು ಪ್ರಮುಖ ಆಡಚಣೆಯಾಗಿದೆಯೆಂದು ನಾನು ನಂಬುತ್ತೇನೆ. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸರ್ಕಾರ, ನಾಗರಿಕರು ಮತ್ತು ಖಾಸಗಿ ವಲಯದ ಎಲ್ಲಾ ಪಾಲುದಾರರು ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ.
ಪ್ರತಿ ನಾಗರಿಕನು ಜಾಗರೂಕನಾಗಿದ್ದು, ಎಲ್ಲಾ ಸಮಯದಲ್ಲೂ ಉನ್ನತ ಗುಣಮಟ್ಟದ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ದನಾಗಿರಬೇಕೆಂದು ಹಾಗೂ ಭ್ರಷ್ಟಾಚಾರದ ವಿರುದ್ದ ಹೋರಾಟವನ್ನು ಬೆಂಬಲಿಸಬೇಕೆಂದು ತಾನು ಅರಿತಿರುವುದರಿಂದ ಈ ರೀತಿ ಪ್ರತಿಜ್ಞೆ ಮಾಡುತ್ತೇನೆ.

Contact Your\'s Advertisement; 9902492681

ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳನ್ನು ಅನುಸರಿಸುತ್ತೇನೆ. ಲಂಚವನ್ನು ಪಡೆಯುವುದಿಲ್ಲ ಹಾಗೂ ನೀಡುವುದೂ ಇಲ್ಲ. ಎಲ್ಲಾ ಕಾರ್ಯಗಳನ್ನು ಪ್ರಾಮಾಣಿಕ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ವಹಿಸುತ್ತೇನೆ. ಸಾರ್ವಜನಿಕ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸುತ್ತೇನೆ. ವೈಯಕ್ತಿಕ ನಡವಳಿಕೆಯಲ್ಲಿ ನಿಷ್ಠೆ ಪ್ರದರ್ಶಿಸುವ ಮೂಲಕ ಮಾದರಿಯಾಗುತ್ತೇನೆ. ಯಾವುದೇ ಭ್ರಷ್ಟಾಚಾರದ ಘಟನೆಯನ್ನು ಸೂಕ್ತ ಸಂಸ್ಥೆಗೆ ವರದಿ ಮಾಡುತ್ತೇನೆ ಎಂದು ಪ್ರತಿಜ್ಞಾವಿಧಿ ಬೋಧಿಸಿದರು.

ಈ ವೇಳೆ, ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಜಿ. ಸತ್ಯವತಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ನೌಕರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here