ಮರಕಂಬಿ ದಲಿತ ದೌರ್ಜನ್ಯ ಪ್ರಕರಣದ ತೀರ್ಪು; ಸಂವಿಧಾನಕ್ಕೆ ಸಂದ ಜಯ: ಮಾವಳ್ಳಿ ಶಂಕರ್

ಕಲಬುರಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‍ವಾದ) ಕಲಬುರಗಿ ಜಿಲ್ಲಾ ಸಮಿತಿಯ ಸರ್ವ ಸದಸ್ಯರ ಸಭೆ ಹಾಗೂ ಜಿಲ್ಲಾ ಸಮಿತಿ ಪುನರ್ ರಚನಾ ಸಭೆ ಸೋಮವಾರ ನಗರದ ಕನ್ನಡಭವನದಲ್ಲಿ ನಡೆಯಿತು.

ಸಭೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಎಲ್ಲೆಡೆ ಕಂಬಾಲಿಪಲ್ಲಿಯಂತಹ ದಲಿತ ನರಮೇಧ ಪ್ರಕರಣಗಳನ್ನು ಮುಚ್ಚಿಹಾಕಲಾಗುತ್ತಿದೆ. ಕೋರ್ಟ್‍ಗಳಲ್ಲಿ ಪ್ರಕರಣಗಳು ಖುಲಾಸೆಗೊಳ್ಳುತ್ತಿವೆ. ಇಂತಹ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಮರಕಂಬಿ ದಲಿತ ದೌರ್ಜನ್ಯ ಪ್ರಕರಣ ತೀರ್ಪು ದೇಶದಲ್ಲಿಯೇ ಸಂವಿಧಾನ ಹಾಗೂ ನ್ಯಾಯಕ್ಕೆ ದೊರೆತ ಜಯವಾಗಿದೆ ಎಂದು ಹೇಳಿದರು.

ಮರಕಂಬಿಯ ಐತಿಹಾಸಿಕ ತೀರ್ಪನ್ನು ದಲಿತ ಸಂಘರ್ಷ ಸಮಿತಿಯು ಅತ್ಯಂತ ಹೆಮ್ಮೆಯಿಂದ ಸ್ವಾಗತಿಸುತ್ತದೆ. ಈ ದೇಶದ ಕೋಮುವಾದಿ ಹಾಗೂ ಜಾತಿವಾದಿ ಶಕ್ತಿಗಳು ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾಶಮಾಡುವ ಹುನ್ನಾರ ನಡೆಸುತ್ತಿವೆ. ಈ ಸವಾಲಿನ ವಿರುದ್ಧ ದೇಶದ ಹಾಗೂ ರಾಜ್ಯದ ದಮನಿತ ವರ್ಗಗಳು, ಶೋಷಿತ ಸಮುದಾಯಗಳು ಒಗ್ಗಟ್ಟಾಗಿ ಹೋರಾಟ ನಡೆಸಬೇಕಿದೆ. ಯುವ ಸಮುದಾಯ ಮತೀಯ ಶಕ್ತಿಗಳಿಗೆ ಹಾಗೂ ಅವರ ಸಂಚುಗಳಿಗೆ ಬಲಿಯಾಗದೆ ಎಚ್ಚರವಹಿಸಬೇಕು ಎಂದು ಕರೆ ನೀಡಿದರು.

ಈ ನಾಡಿನ ಖ್ಯಾತ ಕವಿ ಸಿದ್ದಲಿಂಗಯ್ಯ ಅವರ ‘ಹೊಲೆ–ಮಾದಿಗರ ಹಾಡು’ ನಾಡಿನ ಉದ್ದಗಲಕ್ಕೂ ಸಮುದಾಯವನ್ನು ಜಾಗೃತಗೊಳಿಸಿ, ಹೋರಾಟಕ್ಕೆ ಸ್ಪೂರ್ತಿ, ನೈತಿಕ ಬಲವನ್ನು ತಂದುಕೊಟ್ಟಿತು ಎಂದು ಹೇಳಿದರು.

ಸಭೆಯಲ್ಲಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ,ರಾಮಣ್ಣ ಕಲ್ಲದೇವನಹಳ್ಳಿ, ಮುಖಂಡರಾದ ನಾಗಣ್ಣ ಬಡಿಗೇರ, ಅರ್ಜುನ ಗೊಬ್ಬೂರ, ವಿಭಾಗೀಯ ಸಂಚಾಲಕ ಶ್ರೀನಿವಾಸ ಖೇಳಗಿ,ಸಂಜುಕುಮಾರ ಕೆಂಬಾಗಿ,ಇತರ ಪ್ರಮುಖರು ಪಾಲ್ಗೊಂಡಿದ್ದರು.

ಪದಾಧಿಕಾರಿಗಳ ಆಯ್ಕೆ: ಇದೇ ವೇಳೆ ದಸಂಸ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸಂಜುಕುಮಾರ್ ಜೇವಳಕರ್ (ಜಿಲ್ಲಾ ಸಂಚಾಲಕ), ಬಾಬುರಾವ ಶೆಳಿ, ಶ್ರೀಹರಿ ಕರಕಳ್ಳಿ, ವಿಜಯಕುಮಾರ ಸಜ್ಜನ್,ಮಹಾಂತೇಶ ದೊರೆ, ಸತೀಶ ಕೋಬಾಳ್ಕರ್,ಮಾರುತಿ ಹುಳಗಳಕರ್, ಸೋಮಶೇಖರ ಬೆಡರಪಳ್ಳಿ (ಜಿಲ್ಲಾ ಸಂಘಟನಾ ಸಂಚಾಲಕರು), ದೇವೇಂದ್ರಪ್ಪ ಕುಮಂಸಿ (ಜಿಲ್ಲಾ ಖಜಾಂಚಿ), ದಲಿತ ವಿದ್ಯಾರ್ಥಿ ಒಕ್ಕೂಟದ ಸಂಚಾಲಕರಾಗಿ ಶಿವಪುತ್ರಪ್ಪ ಮಾವಿನ್ ಅವರನ್ನು ನೇಮಕ ಮಾಡಲಾಯಿತು ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ತಿಳಿಸಿದ್ದಾರೆ.

ನಾಗರಿಕ ಜಾರಿ ದಳವು ಪ್ರತಿ ಜಿಲ್ಲೆಯಲ್ಲಿ ವಿಶೇಷ ಪೆÇಲೀಸ್ ಠಾಣೆಗಳನ್ನು ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಸಭೆಯ ತೆಗೆದುಕೊಂಡ ನಿರ್ಣಯವನ್ನು ದಸಂಸ ಸ್ವಾಗತಿಸುತ್ತದೆ. ದಲಿತ ಚಳವಳಿಯ ದೀರ್ಘಕಾಲದ ಹೋರಾಟಕ್ಕೆ ಇದು ಸಂದ ಜಯವಾಗಿದೆ. ಜಾರಿಗೆ ಹೆಚ್ಚಿನ ಒತ್ತು ಕೊಡಬೇಕು. ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ದೌರ್ಜನ್ಯಗಳನ್ನು ತಡೆಗಟ್ಟಲು ಇದೊಂದು ಉಪಶಮನವಾಗಲಿದೆ. -ಮಾವಳ್ಳಿ ಶಂಕರ್, ರಾಜ್ಯ ಪ್ರಧಾನ ಸಂಚಾಲಕರು, ದಸಂಸ

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago