ಕಲಬುರಗಿ: ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಹಾಗೂ ವಿಶ್ವನಾಥ್ ರೆಡ್ಡಿ ಮುದ್ನಾಳ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜು ಇವುಗಳ ಸಂಯುಕ್ತಾಶ್ರಯದಲ್ಲಿ ನನ್ನ ಮೆಚ್ಚಿನ ಪುಸ್ತಕ ಕುವೆಂಪು ಅವರು ರಚಿಸಿದ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯ ಕುರಿತು ವಿಶೇಷ ಉಪನ್ಯಾಸ ಅ.30ರಂದು ಮಧ್ಯಾಹ್ನ 2 ಗಂಟೆಗೆ ಅನ್ನಪೂರ್ಣ ಕ್ರಾಸ್ ಹತ್ತಿರ ಇರುವ ಮುದ್ನಾಳ ಕಾಲೇಜಿನಲ್ಲಿ ಜರುಗಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಮಾಡಲಿದ್ದಾರೆ. ಶರಣಬಸವ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಚಿದಾನಂದ್ ಚಿಕ್ಕಮಠ ಅವರು ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ಕುರಿತು ವಿಶೇಷ ಉಪನ್ಯಾಸ ವಿಶೇಷ ಉಪನ್ಯಾಸ ನೀಡಲ್ಲಿದ್ದಾರೆ.
ಅಧ್ಯಕ್ಷತೆಯನ್ನು ಪತ್ರಕರ್ತ, ಲೇಖಕ ಡಾ. ಶಿವರಂಜನ ಸತ್ಯಂಪೇಟೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪತ್ರಕರ್ತ ಸಂಗಮನಾಥ್ ರೇವತಗಾಂವ ಹಾಗೂ ಡಾ. ಶರಣಬಸಪ್ಪ ವಡ್ಡನಕೇರಿ ಭಾಗವಹಿಸಿವರು.
ಕಾರ್ಯಕ್ರಮದ ಸಂಚಾಲಕರು ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ. ಎಚ್ ನಿರಗುಡಿ ಆಶಯ ಭಾಷಣ ಮಾಡಲಿದ್ದಾರೆ ಎಂದು ಡಾ ಬಸವರಾಜ ಮಠಪತಿ ತಿಳಿಸಿದ್ದಾರೆ.