ವಾಂತಿ, ಭೇದಿಗೆ ಸೇಡಂಜನ ಕಂಗಾಲು; ಜಿಲ್ಲಾ ಆಸ್ಪತ್ರೆಗೆ ಮಾಜಿ ಶಾಸಕ ತೇಲ್ಕೂರ ಭೇಟಿ

0
24

ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಹೂಡಾ (ಬಿ) ಗ್ರಾಮದಲ್ಲಿ ಗ್ರಾಪಂ ಉಪಾಧ್ಯಕ್ಷ, ಸದಸ್ಯರು ಸೇರಿದಂತೆ ಹಲವು ಮಕ್ಕಳು ವಾಂತಿ ಭೇದಿ ಮತ್ತು ಅಸ್ವಸ್ಥತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಾಲೂಕು ಆಡಳಿತದ ದಿವ್ಯ ನಿರ್ಲಕ್ಷವೇ ಇದಕ್ಕೆ ಕಾರಣವಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆರೋಪಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಳಖೇಡ ಗ್ರಾಪಂ ಉಪಾದ್ಯಕ್ಷರು ಸೇರಿದಂತೆ ವಾಂತಿ, ಭೇದಿಯಿಂದ ಆಸ್ಪತ್ರೆಗೆ ದಾಖಲಾದವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ತೆಲ್ಕೂರ ಜಿಮ್ಸ್ ನ ವಿದ್ಯಾಧಿಕಾರಿ ಡಾ.ಶಿವಕುಮಾರ ಅವರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸೆ ನೀಡುವಂತೆ ತಿಳಿಸಿದರು.

Contact Your\'s Advertisement; 9902492681

ಸೇಡಂ ತಾಲೂಕಿನ ಭೀಮನಗರದ ಮಮತಾ ಎಂಬ ಐದು ವರ್ಷದ ಮಗು ಸಾವನ್ನಪ್ಪಿದೆ. ಕುಡಿಯುವ ನೀರಿನಿಂದ ಈ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ. ಗ್ರಾಮೀಣ ಭಾಗದ ಜನರ ಆರೋಗ್ಯದ ಕುರಿತು ಸರಕಾರಕ್ಕಾಗಲಿ ತಾಲೂಕು ಆಡಳಿತಕ್ಕಾಗಲಿ ಯಾವುದೇ ಕಾಳಜಿ ಇಲ್ಲದಂತೆ ಕಾಣುತ್ತಿದೆ. ತಾಪಂ ಇಒ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಪಿಡಿಒ ಈ ಬಗ್ಗೆ ಮುಂಜಾಗೃತೆ ವಹಿಸದೇ ಇರುವುದು ಘಟನೆಗೆ ಕಾರಣವಾಗಿದ್ದು, ಅಧಿಕಾರಿಗಳ ಬೇಜವಾಬ್ದಾರಿತನ ಎತ್ತಿ ತೋರುತ್ತಿದೆ ಎಂದು ಕಿಡಿ ಕಾರಿದರು.

ಕ್ಷೇತ್ರದ ಶಾಸಕ, ಸಚಿವರ ನಾಪತ್ತೆ; ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ಜನರು ಅನಾರೋಗ್ಯದಿಂದ ಆತಂಕಪಡುತ್ತಾ ಆಸ್ಪತ್ರೆಗೆ ದಾಖಲಾಗುತ್ತಿದ್ದರೆ. ಕ್ಷೇತ್ರದ ಶಾಸಕರು, ಸಚಿವರು ಈ ಬಗ್ಗೆ ತಲೆ ಕೆಡಿಸಿಕೊಳ್ಳದಂತೆ ಕಾಗುತ್ತಿದೆ. ಕೂಡಲೇ ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ವಾಂತಿ, ಭೇದಿಯಿಂದ ಬಳಲುತ್ತಿರುವವರಿಗೆ ಸೂಕ್ತ ಚಿಕಿತ್ಸೆ ದೊರಕುವಂತೆ ಮಾಡಬೇಕು. ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಶುದ್ಧ ನೀರು ಸರಬರಾಜು ಮಾಡುವ ನಿಟ್ಟಿನಲ್ಲ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here