ಬಿಸಿ ಬಿಸಿ ಸುದ್ದಿ

ಗೃಹ ಸಚಿವ ಹೆಸರಲ್ಲಿ ನಕಲಿ ಪತ್ರ ವೈರಲ್ ವಿಚಾರ,  ವೆಬ್ ಪೋರ್ಟಲ್ ಸಂಪಾದಕನ ಬಂಧನ

ಬೆಂಗಳೂರು: ಲಿಂಗಾಯತ ಸ್ವತಂತ್ರ ಧರ್ಮ ವಿಚಾರವಾಗಿ ಗೃಹ ಸಚಿವರ ಹೆಸರಲ್ಲಿ ನಕಲಿ ಪತ್ರ ವೈರಲ್ ಆರೋಪಕ್ಕೆ ಸಂಬಂಧಿಸಿದಂತೆ ಪೋಸ್ಟ್ಕಾರ್ಡ್ ವೆಬ್ ಪೋರ್ಟಲ್ ಸಂಪಾದಕರನ್ನು ಪೊಲೀಸರು ಬಂಧಿಸಿದ್ದಾರೆ.

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ ಎಂದು ನಕಲಿ ಪತ್ರವನ್ನು ವೈರಲ್ ಮಾಡಿದ ಆರೋಪದ ಮೇಲೆ ಪೋಸ್ಟ್ ಕಾರ್ಡ್ ವೆಬ್ ಪೋರ್ಟಲ್ ಸಂಪಾದಕ ಮಹೇಶ್ ಹೆಗ್ಡೆ ಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧ ಗೃಹ ಸಚಿವ ಎಂ.ಬಿ.ಪಾಟೀಲ ಅವರು ವಿಜಯಪುರದ ಅದರ್ಶನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನಂತರ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ದೂರು ಆಧರಿಸಿ,  ಸಿಐಡಿ ಸೈಬರ್ ವಿಂಗ್ ಪೊಲೀಸರು ಆರೋಪಿ ಮಹೇಶ್ ಹೆಗ್ಡೆನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

2018ರ ಮಾರ್ಚ್ 29ರಂದು ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟಿಸಿದ ಆರೋಪದಲ್ಲಿ  ಜೈಲು ಸೇರಿದ್ದರು. ಕೋಮು ಗಲಭೆ ಸೃಷ್ಠಿಸುವ ಸುದ್ದಿ ಪ್ರಕಟ ಮಾಡಿದ್ದ ಆರೋಪದ ಮೇಲೆ ಮಹೇಶ್ ಹೆಗ್ಡೆ ಒಮ್ಮೆ ಜೈಲುವಾಸ ಅನುಭವಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಬಿಜೆಪಿ ಗ್ರಾಮೀಣ ಉಪಾಧ್ಯಕ್ಷ ಪರಮೇಶ ಉಳವಣ್ಣನವರ್ ಪತ್ನಿ ಶ್ರುತಿ ಬೆಳ್ಳಕ್ಕಿಯವರನ್ನು ಬಂಧಿಸಿದ್ದಾರೆ.

ಮಾಜಿ ಕೇಂದ್ರ ಸಚಿವ ಕಪಿಲ್ ಸಿಬ್ಬಲ್ ಪತ್ರಿಕಾ ಗೋಷ್ಠಿ ಕರೆದು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರತಿಷ್ಠಿತ ಪತ್ರಿಕೆ ಮತ್ತು ಚಾನಲ್ ವಿರುದ್ಧ ನಕಲಿ ದಾಖಲೆ ಪ್ರಸರಾದ ಆರೋಪ ಚುನಾವಣೆ ಆಯೋಗಕ್ಕೆ ಅವರು ದೂರು ನೀಡಿ ಕ್ರಿಮಿನಲ್ ಮುಕದ್ದಮೆ ದಾಖಲಿಸುವಂತೆ ಅವರು ಆಗ್ರಹಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago