ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಜಿಲ್ಲಾ ಮಟ್ಟದ ರಾಜ್ಯೋತ್ಸವ ಗೌರವ ಪುರಸ್ಕಾರಕ್ಕೆ ಸಮಾಜದ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಮುಖರಾದ ತೊನಸನಹಳ್ಳಿ ಅಲ್ಲಮಪ್ರಭು ಪೀಠದ ಶ್ರೀ ಡಾ. ಮಲ್ಲಣ್ಣಪ್ಪ ಮಹಾಸ್ವಾಮಿಗಳು, ಶೈಕ್ಷಣಿಕ ಚಿಂತಕ ಡಾ. ಭುರ್ಲಿ ಪ್ರಹ್ಲಾದ, ಸಮಾಜ ಸೇವಕರಾದ ಗುರಣ್ಣ ಪಡಶೆಟ್ಟಿ ಉಡಚಣ, ಹಣಮಂತರಾಯ ಕಣ್ಣಿ, ಆಕಾಶವಾಣಿ ಕೇಂದ್ರದ ಸೋಮಶೇಖರ ರೂಳಿ, ಕಾರ್ಯನಿರ್ವಾಹಕ ಅಭಿಯಂತರಾದ ಮಹ್ಮದ್ ಇಬ್ರಾಹಿಂ, ಹಿರಿಯ ಚಿತ್ರಕಲಾವಿದೆ ಮಂಜುಳಾ ಬಸವರಾಜ ಜಾನೆ, ಹಿರಿಯ ಕವಿ ಅಮೃತಪ್ಪ ಅಣೂರ, ಬನ್ನಪ್ಪ ಬಿ.ಕೆ. ಸೇಡಂ, ಶಾರದಾಮಣಿ ಪಾಟೀಲ, ರಂಗ ಶಿಕ್ಷಕ ಅಶೋಕ ತೊಟ್ನಳ್ಳಿ, ಅಮೃತ ಪೂಜಾರಿ, ಜಟಿಂಗರಾಯ ಶಾಖಾಪುರೆ, ಖಾಜಾ ಫರಿದೋದ್ದೀನ್, ಪತ್ರಕರ್ತ ಧರ್ಮೇಂದ್ರ ಪೂಜಾರಿ, ಉದ್ಯಮಿ ಮಹೇಶ ಚಿಂಚೋಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ. 3 ರಂದು ಬೆಳಗ್ಗೆ 10.45 ಕ್ಕೆ ನಗರದ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾದ ರವೀಂದ್ರ ಢಾಕಪ್ಪ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಇಂದುಮತಿ ಪಾಟೀಲ, ಪ್ರಾಧ್ಯಾಪಕ ಡಾ. ಬಾಬುರಾವ ಶೇರಿಕಾರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ ಜಾಗೂ ಧರ್ಮಣ್ಣ ಎಚ್ ಧನ್ನಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…