ಶಹಾಬಾದ: ಕನ್ನಡ ಭಾಷೆ ವಿಶ್ವದಲ್ಲಿಯೇ ಅತ್ಯಂತ ಶ್ರೀಮಂತಿಕೆ ಮತ್ತು ಸಾಕಷ್ಟು ಉತ್ತಮ ಸಂಸ್ಕøತಿ ಹೊಂದಿದೆ ಎಂದು ಕರವೇ ತಾಲೂಕಾಧ್ಯಕ್ಷ ಯಲ್ಲಾಲಿಂಗ ಹೈಯ್ಯಾಳಕರ್ ಹೇಳಿದರು.
ಅವರು ಶುಕ್ರವಾರ ನಗರದ ವಾಡಿ-ಶಹಾಬಾದ ವೃತ್ತದಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದರು.
ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ವಚನ ಸಾಹಿತ್ಯ ಮತ್ತು ಕಲೆಗಳ ಬೀಡನ್ನು ನೀಡಿದದವರು ಕನ್ನಡಿಗರು ಎಂದು ನಾವು ಹೆಮ್ಮೆಯಿಂದ ಹೇಳಬೇಕು.ಹನ್ನೇರಡನೇ ಶತಮಾನದ ಶರಣರು ರಚಿಸಿದ ವಚನ ಸಾಹಿತ್ಯ ಇಡೀ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದೆ.ಇಂತ ಕನ್ನಡ ನಾಡಿನಲ್ಲಿ ಹುಟ್ಟಿದ ನಾವುಗಳೇ ಪುಣ್ಯವಂತರು.ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಕವಿಗಳು ಕನ್ನಡಿಗರು.ಅಂತ ಮೇರು ಪರ್ವದಂತಿರುವ ಕವಿಗಳು ಮತ್ತು ಆದಿಕವಿಗಳಾದ ಪಂಪ,ರನ್ನ,ಜನ್ನರು ಅತ್ಯಂತ ಉತ್ಕøಷ್ಟವಾದ ಸಾಹಿತ್ಯವನ್ನು ನಮಗೆಲ್ಲರಿಗೂ ಊಣ ಬಡಿಸಿದ್ದಾರೆ.ಅವರ ಸೇವೆ ಅನನ್ಯವಾದುದು.ಭಾಷೆ ಯಾವುದಾದರೂ ಮಾತನಾಡಿ ಅದರ ಬಗ್ಗೆ ಅಸೂಯೆ,ದ್ವೇಷ ಮಾಡದೇ, ಕನ್ನಡ ಬಳಸುವ ಹಾಗೂ ಉಳಿಸುವ ನಿಟ್ಟಿನಲ್ಲಿ ಸ್ವಾಭಿಮಾನಿ ಕನ್ನಡಿಗರಾಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕ ಉಪಾಧ್ಯಕ್ಷರಾದ ಮಹೇಶ್ ಕಾಂಬ್ಳೆ ಮತ್ತು ಮಹೆಬೂಬ್ ಮಾದ್ರಿ . ಪ್ರಧಾನ ಕಾರ್ಯದರ್ಶಿ ಮಹೇಶ ಹಲಕಟ್ಟಿ ,ಯುವ ಘಟಕ ಅಧ್ಯಕ್ಷರು ಶಿವಕುಮಾರ ದೊರೆ, ಸಾಗರ್ ಬಂದೂಕ . ಲಕ್ಷ್ಮಣ್ ಚವ್ಹಾಣ, ಶ್ರೀಧರ್ ಧನ್ನಾ, ಮಂಜುನಾಥ, ಮರಲಿಂಗ ದೊರೆ, ಸುರೇಶ ಹೈಯ್ಯಳಕರ. ಸದಾಶಿವ ಕಾಚಾಪುರ, ಲಕ್ಷ್ಮಿಪುತ್ರ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…