ಕಲಬುರಗಿ:ರೈತರ, ದಲಿತರ ಹಾಗೂ ದೇವಸ್ಥಾನ, ದರ್ಗಾ, ಚರ್ಚ್ ಗಳ ಆಸ್ತಿಗಳನ್ನು ವಕ್ಫ್ ಗೆ ಬರೆಯಿಸಿಕೊಳ್ಳುವ ಮೂಲಕ ರಾಜ್ಯದ ಜನರ ಆಸ್ತಿಗೆ ಕೈ ಹಾಕಿರುವ ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ನ.4ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಹಾಗೂ ಮಾಜಿ ಸಂಸದ ಡಾ. ಉಮೇಶ ಜಾಧವ ತಿಳಿಸಿದರು.
ವಕ್ಫ ಆಸ್ತಿ ನೆಪದಲ್ಲಿ ಜನಸಾಮನ್ಯರ ಆಸ್ತಿ ಲೂಟಿ ಮಾಡುತ್ತಿರುವ ಮತಾಂಧ ಸಚಿವ ಝಡ್. ಎನ್.ಜಮೀರ್ ಅಹ್ಮದ್ ಖಾನ್ ರಾಜೀನಾಮೆ ಪಡೆಯಬೇಕೆಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ವಕ್ಫ್ ಬೋರ್ಡ್ ನಿಂದ ಸಮುದಾಯಕ್ಕೆ ಯಾವುದೇ ಲಾಭ ಸಿಗುತ್ತಿಲ್ಲ. ಕೆಲವರು ಕುಟುಂಬ ನಿರ್ವಹಣೆ ಬಳಕೆ ಆಗುತ್ತಿದ್ದರೆ ರಾಜಕೀಯ ನಾಯಕರು ಆಸ್ತಿ ಕಬಳಿಸುವ ಕೆಲಸವಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿ ಅಧಿಕಾರದಲ್ಲಿಯೂ ರೈತರ ಪಹಾಣಿಯಲ್ಲಿ ವಕ್ಫ್ ಆಸ್ತಿ ಎಂದು ಸೇರಿಸಲಾಗಿರುವ ಕಾಂಗ್ರೆಸ್ ನವರ ಹೇಳಿಕೆ ಸತ್ಯಕ್ಕೆ ದೂರ ಮತ್ತು ರಾಜಕೀಯ ಗಿಮಿಕ್. ಅಂತಹದೇನಾದರೂ ನಡೆದರೆ ಅದನ್ನು ನಾವು ಖಂಡಿಸುತ್ತೇವೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದರು.
ಉಪ ಚುನಾವಣೆ ಮತ್ತು ಮಹಾರಾಷ್ಟ್ರ ಚುನಾವಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಿಮಿಕ್ ಮಾಡುವ ಹೇಳಿಕೆ ನೀಡುತ್ತಿದ್ದಾರೆ. ದೇಶದಲ್ಲಿ ವಕ್ಫ್ ಕಾನೂನು ಜಾರಿಯಾಗಲು ವಿರೋಧಿಗಳು ತಡೆಯುತ್ತಿದ್ದಾರೆ. ಇದರ ವಿರುದ್ಧ ಇಡಿ, ಸಿಬಿಐ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ಇದೆಲ್ಲ ವೋಟ್ ಬ್ಯಾಂಕ್ ಪಾಲಿಟಿಕ್ಸ್, 1974ರಲ್ಲಿ ಅಪಿಲ್ ಮೆಂಟ್ ಕಾನೂನು ಜಾರಿ ಮಾಡಿತ್ತು. ಪಾರ್ಲಿಮೆಂಟ್ ನಲ್ಲಿ ಕಾನೂನು ತಿದ್ದುಪಡಿ ಆಗುವ ಮುಂಚೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜಮೀನು ಜಪ್ತಿ ಮಾಡುವ ಕೆಲಸ ನಡೆಯುತ್ತಿದೆ. ಜಿಲ್ಲೆಯ ಆಳಂದ, ಚಿತ್ತಾಪುರ, ಚಿಂಚೋಳಿ, ಸೇಡಂ, ಜಮೀನು ಗಳು ವಕ್ಫ್ ವಶಕ್ಕೆ ಪಡೆಯುತ್ತಿದೆ. ರೈತರು ಎಚ್ಚರ ವಹಿಸಬೇಕು. ರೈತರ ಸಮಸ್ಯೆಗಳಿಗೆ ನಮ್ಮ ಕಚೇರಿ ಕಿವಿಯಾಗುತ್ತದೆ, ಯಾವಾಗ ಬೇಕಾದರೂ ರೈತರಿಗೆ ಕಾನೂನು ಸಹಾಯ ಪಡೆದುಕೊಳ್ಳಬಹುದು ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಶಿವರಾಜ್ ಪಾಟೀಲ್ ರದ್ದೇವಾಡಗಿ, ಸಂತೋಷ ಹಾದಿಮನಿ ಸೇರಿದಂತೆ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…