ಕಲಬುರಗಿ: ನಗರದ ಶಿವಾಜಿ ನಗರ ಬಡಾವಣೆಯ ಶ್ರೀ ಅಂಬಾಭವಾನಿ ದೇವಸ್ಥಾನ ಆವರಣದಲ್ಲಿ ಶ್ರೀ ಸದ್ಗುರು ಕಲಾ ಸಂಸ್ಥೆ (ರಿ), ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರದಲ್ಲಿ ಜಾನಪದ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕನ್ನಡ ಪುಸ್ತಕ ಪ್ರಾಧಿಕಾರ ಸದಸ್ಯ ಬಿ.ಎಚ್.ನಿರಗುಡಿ ಸಸಿಗೆ ನೀರುಣಿಸುವ ಮೂಲಕ ಶರಣೆ ದಾನಮ್ಮ ದೇವಿಯ ಪೇಟಿಂಗ್ ಬಿಡುಗಡೆ ಮಾಡುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ದಿವ್ಯಸಾನಿಧ್ಯ ಪ್ರರಮಪೂಜ್ಯ ಶ್ರೀ ಸದ್ಗುರು ಬಸವಪ್ರಭು ಮಹಾಸ್ವಾಮೀಜಿ ರವರು ವಹಿಸಿದರು.
ಸಂಸ್ಥೆ ಅಧ್ಯಕ್ಷ ಶಿವಲಿಂಗಪ್ಪ,ಎಂ.ಕೆಂಗನಾಳ, ಅತಿಥಿಗಳಾದ ಡಾ. ಶಿವರಾಜ ಪಾಟೀಲ್, ಶಿವಾನಂದ ಬಿಲಗುಂದಿ, ಮುಂತಾದ ಅತಿಥಿ ಮತ್ತು ನಾಡಿನ ಹೆಸರಾಂತ ಆಕಾಶವಾಣಿ ದೂರದರ್ಶನ ಕಲಾವಿದರು ಕಾರ್ಯಕ್ರಮಕ್ಕೆ ಭವ್ಯ ಮೇರುಗನ್ನು ತಂದರು. ಪರಮ ಪೂಜ್ಯರು ಕನ್ನಡ ಭಾಷೆ ಉಳಿಯಬೇಕೆಂದರೆ ಸರ್ಕಾರ ಸಂಘ ಸಂಸ್ಥೆಗಳಿಂದ ಕನ್ನಡ ಭಾಷೆಯ ಗೀತೆಗಳಿಂದ ಮತ್ತು ವಚನಗಳಿಂದ ಜನರಿಗೆ ಅರಿವು ಮೂಡಿಸಬೇಕು ಎಂದರು. ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರಿಗೆ ಅಭಿನಂದನೆಯನ್ನು ಹೇಳಿದರು.
ಬಿ.ಎಚ್.ನಿರಗುಡಿ ರವರು ಸಂಸ್ಥೆಯವರಿಂದ ಅದ್ಭುತವಾದ ಕಾರ್ಯಕ್ರಮವನ್ನು ನೋಡಿ ಮನಸ್ಸಿಗೆ ತುಂಬಾ ಸಂತೋಷವಾಗಿದೆ ಕನ್ನಡ ನೆಲದಲ್ಲಿ ಹೀಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ ಕನ್ನಡ
ಗೀತೆಗಳ ನಾದ ಎಲ್ಲೆಲ್ಲೂ ಹರಡಲಿ ಎಂದರು.
ಮುಖ್ಯ ಅತಿಥಿಗಳಾದ ಶಿವರಾಜ ಪಾಟೀಲ ರವರು ಸಹ ಮಾತನಾಡಿದರು ನನಗೆ ಮಾತನಾಡುವುದಕ್ಕಿಂದ ಸಂಗೀತ ಕೇಳಲು ಇಷ್ಟಪಡುತ್ತೇನೆ ಎಂದರು. ಅಧ್ಯಕ್ಷರು ಎಲ್ಲರನ್ನೂ ಸ್ವಾಗತಿಸಿದರು. ನಾಗಲಿಂಗಯ್ಯ ರವರು ನಿರೂಪಣೆ ಮಾಡಿದರು ಮತ್ತು ಬಸವಕುಮಾರ ರವರು ವಂದನಾರ್ಪಣೆ ಮಾಡಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…