ಕಲಬುರಗಿ : ವಕ್ಫ ಆಸ್ತಿ ಹೆಸರಿನಲ್ಲಿ ರೈತರ ಮೇಲೆ ದಬ್ಬಾಳಿಕೆ ನಡೆಸಿ ಈ ನೆಲದ ಮಣ್ಣಿನ ಮಕ್ಕಳ ಭೂಮಿಯ ಹಕ್ಕು ಕಸಿಯಲು ಹೊರಟಿರುವ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ವಕ್ಫ್ ಬೋರ್ಡ್ ನಿಂದ ರೈತರ ಭೂಮಿಗಳನ್ನು ಕಬಳಿಸಲು ಷಡ್ಯಂತ್ರ ನಡೆದಿದೆ ಆರೋಪಿಸಿ ಸೋಮವಾರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ತರಾತುರಿಯಲ್ಲಿ ನೀಡಲಾಗಿರುವ ವಕ್ಫ್ ಬೋರ್ಡ್‌ನ ನೋಟಿಸ್‌ನಿಂದ ರಾಜ್ಯದ ಸಾವಿರಾರು ರೈತರು ಮತ್ತು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ದೇಶದಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಜಾರಿಯಾಗುವುದಕ್ಕೂ ಮುಂಚಿತವಾಗಿ ಕರ್ನಾಟಕದಲ್ಲಿ ಈ ವಕ್ಫ್ ಕಾನೂನು ಬದಲಾಗುವುದಕ್ಕೂ ಸಾಧ್ಯವಾದಷ್ಟು ಜಾಗವನ್ನು ವಕ್ಫ್ ಹೆಸರಿಗೆ ನೋಂದಣಿಗೊಳಿಸಬೇಕು ಎನ್ನುವ ಹುನ್ನಾರದಲ್ಲಿ ಪ್ರಯತ್ನ ನಡೆಸುತ್ತಿರುವುದು ಅಕ್ಷ್ಯಮ್ಯ ಎಂದು ಪ್ರತಿಭಟನಾಕಾರರು ದೂರಿದರು.
ಸಚಿವ ಜಮೀರ್ ಅಹ್ಮದ್ ರಾಜ್ಯದ ಕೆಲವು ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳಿಗೆ ಮತ್ತು ಮುಸ್ಲಿಂ ಸಮಾಜದ ಮುಖಂಡರ ಜೊತೆ ಸಭೆ ನಡೆಸಿ ವಕ್ಫ್ ಬೋರ್ಡ್ ಹೆಸರಿಗೆ ರಿಜಿಸ್ಟರ್ ಮಾಡಿಸಲು ಸೂಚನೆ ನೀಡಿದ್ದಾರೆ. ಸಚಿವರ ಅದೇಶದ ಮೇರೆಗೆ ಜಿಲ್ಲಾಧಿಕಾರಿಗಳು, ತಲೆಮಾರುಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರ ಜಮೀನಿನ ಪಹಣಿಗಳನ್ನು ರಾತ್ರೋರಾತ್ರಿ ಬದಲಾವಣೆ ಮಾಡಿದ್ದಾರೆ. 1920ರಿಂದ ಇಲ್ಲಿ ರೈತರು ಸಾಗುವಳಿ ಮಾಡಿಕೊಂಡು ಬಂದಿರುವ ದಾಖಲೆಗಳಿದ್ದರೂ ಸಹ ರೈತರ ಜಮೀನು ಮಾತ್ರವಲ್ಲದೇ ಹಿಂದೂಗಳ ರುದ್ರಭೂಮಿ , ದೇವಸ್ಥಾನಗಳಿಗೂ ಸಹ ವಕ್ಫ್ ಆಸ್ತಿಯನ್ನು ಅಕ್ರಮವಾಗಿ ಕಬಳಿಕೆ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಜಮೀರ್ ಅಹ್ಮದ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ, ಶಾಸಕರಾದ ಶಶೀಲ ನಮೋಶಿ, ಡಾ.ಅವಿನಾಶ ಜಾಧವ, ಮುಖಂಡರಾದ ಗಿರಿರಾಜ ಯಳಮೇಲಿ, ದಯಾನಂದ ಧಾರವಾಡಕರ್, ಅಮರನಾಥ ಪಾಟೀಲ, ಶಿವಾನಂದ ಪಿಸ್ತಿ,ಸಚಿನ್ ಕಡಗಂಚಿ, ಡಾ. ಸುಧಾ ಹಾಲಕಾಯಿ, ದೇವೀಂದ್ರದೇಸಾಯಿ ಕಲ್ಲೂರ, ಶ್ರೀನಿವಾಸ ದೇಸಾಯಿ, ನಾಮದೇವ ರಾಠೋಡ,ಶಿವಯೋಗಿ ನಾಗನಹಳ್ಳಿ, ಉಮೇಶ ಪಾಟೀಲ, ರವಿರಾಜ ಕೊರವಿ, ಮಲ್ಲಿನಾಥ ಜಿನಕೇರಿ ಅವರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…