ಬಿಸಿ ಬಿಸಿ ಸುದ್ದಿ

ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

ಚಿತ್ತಾಪುರ: ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದಲ್ಲಿ ಸಂಭವಿಸಿದೆ.

ಕೋಲಿ ಕಬ್ಬಲಿಗ ಸಮುದಾಯಕ್ಕೆ ಸೇರಿದ ಮರಲಿಂಗಪ್ಪ ತೆಳಗೇರಿ (67) ಕೊಲೆಯಾದ ದುರ್ದೈವಿ. ಮಂಗಳವಾರ ಸಂಜೆ 7 ಗಂಟೆಗೆ ಪುತ್ರ ಮರೆಪ್ಪ ತೆಳಗೇರಿ (28) ಜೊತೆ ಮೃತ ಮರಲಿಂಗಪ್ಪ ವಾಡಿಯಿಂದ ಚಾಮನೂರು ಗ್ರಾಮಕ್ಕೆ ತೆರಳುತ್ತಿದ್ದರೂ ಎನ್ನಲಾಗಿದ್ದು, ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಮರಲಿಂಗಪ್ಪ ಅವರ ಸೊಸೆಯ ಕುಟುಂಬ ಸಂಬಂಧಿಕರು ಬೈಕಿಗೆ ಡಿಕ್ಕಿ ಹೊಡೆದಿದ್ದಾರೆ. ತಂದೆ ಮಗ ಇಬ್ಬರೂ ಬೈಕ್ ನಿಂದ ರಸ್ತೆ ಮೇಲೆ ಬೀಳುತ್ತಿದ್ದಂತೆ ಕಾರಿನಿಂದ ಇಳಿದ ಹಂತಕರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಿಂದ ಬೆಚ್ಚಿ ಮರೆಪ್ಪ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾನೆ. ಇತ್ತ ಕೈಗೆ ಸಿಕ್ಕ ಮರಲಿಂಗಪ್ಪನ ಎದೆಯ ಮೇಲೆ ಕಲ್ಲು ಬಂಡೆ ಎತ್ತಿ ಹಾಕಿ ಹಂತಕರು ಕೊಲೆ ಮಾಡಿದ್ದಾರೆ.

ಕೆಲವು ತಿಂಗಳ ಹಿಂದೆ ಮರಲಿಂಗಪ್ಪನ ಸೊಸೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎನ್ನಲಾಗಿದ್ದು, ನಮ್ಮ ಮಗಳು ಇವರ ಕಿರುಕುಳಕ್ಕೆ ಬೇಸತ್ತು ಮೃತಪಟ್ಟಿದ್ದಾಳೆ ಎಂಬ ದ್ವೇಷ ಹೊತ್ತ ಕುಟುಂಬಸ್ಥರು ಈ ಕೃತ್ಯ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಮರೆಪ್ಪ ಅವರನ್ನು ಕಲಬುರ್ಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಸ್ಥಳಕ್ಕೆ ಭೇಟಿ ನೀಡಿದ ಶಹಬಾಲ್ ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್ಐ ಕೆ.ತಿರುಮಲೇಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಡಿ ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಸೇರಿಸಿ ಶವ ಪರೀಕ್ಷೆ ನಡೆಸಲಾಗುತ್ತಿದೆ.

ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕರ ಪತ್ತೆಗೆ ಪೊಲೀಸರು ಜಾಲಬೀಸಿದ್ದಾರೆ.

emedialine

Recent Posts

ಕೋವಿಡ್‌ನಿಂದ ಮಂಕಾಗಿದ್ದ ರಂಗ ಚಟುವಟಿಕೆಗಳು ಚೇತರಿಸಿಕೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆ

ರಂಗದಂಗಳದಲ್ಲಿ ಮಾತುಕತೆಯಲ್ಲಿ ರಂಗಕರ್ಮಿ ಸಾಂಬಶಿವ ದಳವಾಯಿ ಹೇಳಿಕೆ ಕಲಬುರಗಿ: ಕೋವಿಡ್‌ನಿಂದ ರಂಗ ಚಟುವಟಿಕೆಗಳು ಮಂಕಾಗಿದ್ದವು. ಇದೀಗ ನಿಧಾನಗತಿಯಲ್ಲಿ ಅವು ಚೇತರಿಕೆ…

5 hours ago

ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಪತ್ರಿಕಾ ರಂಗದ ಪಾತ್ರ ಅನನ್ಯ: ಡಾ.ಶಿವರಂಜನ ಸತ್ಯಂಪೇಟೆ

ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಸಾಧಕ-ಬಾಧಕಗಳನ್ನು ನಾಗರಿಕರಿಗೆ ಮುಟ್ಟಿಸುವ ಕಾರ್ಯ ಮಾಡುವ ಪತ್ರಿಕಾ ರಂಗವು ನಾಲ್ಕನೇ ರಂಗವಾಗಿ ಕಾರ್ಯನಿರ್ವಹಿಸುತ್ತಿದ್ದೆ.…

5 hours ago

ರಾಸಯೋ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ : ಪ್ರೊ. ಬಾಬಣ್ಣ ಹೂವಿನಬಾವಿ

ಕಲಬುರಗಿ : ಭಾರತ ದೇಶ ಪ್ರಗತಿಯಲ್ಲಿ ಯುವಶಕ್ತಿ ಸಹಭಾಗಿತ್ವ ಬಹಳ ಮುಖ್ಯ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸಾಗಿತ್ತು.…

7 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮ

ಕಲಬುರಗಿ: ನಗರದ ಪತ್ರಿಕಾ ಭವನದಲ್ಲಿ ಜ್ಞಾನದೀಪ ನೃತ್ಯ ಕಲಾ ಸಂಸ್ಥೆ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮದಲ್ಲಿ…

8 hours ago

ಜಾನಪದ ನೃತ್ಯೋತ್ಸವ ಕಾರ್ಯಕ್ರಮ

ಕಲಬುರಗಿ: ನಗರದ ಮಾತಾ ಮಾಣಿಕೇಶ್ವರಿ ಕಾಲೋನಿಯಲ್ಲಿರುವ ಶ್ರೀ ಕೋಕಿಲ ಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ನವಚೇತನ ಸಾಂಸ್ಕøತಿಕ ಕಲಾ ಸಂಸ್ಥೆ ವತಿಯಿಂದ …

8 hours ago

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸಾಹಿತಿ ಡಾ.ಹನುಮಂತರಾವಗೆ ಅಭಿನಂದನ ಸಮಾರಂಭ

ಕಲಬುರಗಿ: ನಮ್ಮ ತಾಲೂಕಿನ ಹೆಮ್ಮೆಯ ಹೋರಾಟಗಾರ,ಕವಿ,ಸಾಹಿತಿಯಾದ ಡಾ.ಹನುಮಂತರಾವ ಅವರಿಗೆ ಪ್ರಶಸ್ತಿ ಲಭಿಸಿದ್ದು ಸಂತೋಷ ತಂದಿದೆ ಅವರಿಗೆ ಪ್ರಶಸ್ತಿ ದೊರಕಿದ್ದು ಸರ…

8 hours ago