ಕಲಬುರಗಿ: ಪ್ರಸಕ್ತ 2024-25ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳು ಖರೀದಿಗೆ ರೈತರು ಹೆಸರು ನೊಂದಾಯಿಸಲು ಸರ್ಕಾರ ನವೆಂಬರ್ 18ರ ವರೆಗೆ ದಿನಾಂಕ ವಿಸ್ತರಿಸಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ರಾಜ್ಯಕ್ಕೆ 22,215 ಮೆಟ್ರಿಕ್ ಟನ್ ರಿಂದ 38,320 ಮೆಟ್ರಿಕ್ ಟನ್ ಹೆಚ್ಚಿಸಿ ಹೆಸರು ಕಾಳು ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದರಿಂದ ಇದೇ ನವೆಂಬರ್ 7 ರಿಂದ 18ರ ವರೆಗೆ ರೈತರು ನೋಂದಣಿ ಮಾಡಿಕೊಳ್ಳಲು ವಿಸ್ತರಿಸಿದಲ್ಲದೆ ನೊಂದಣಿ ಜೊತೆಗೆ ಈಗಾಗಲೆ ಜಿಲ್ಲೆಯಾದ್ಯಂತ ತೆರೆಯಲಾದ ಖರೀದಿ ಕೇಂದ್ರದಲ್ಲಿ ರೈತರಿಂದ ಹೆಸರು ಕಾಳು ಸಹ ಖರೀದಿಸಲಾಗುತ್ತದೆ ಎಂದಿದ್ದಾರೆ.
ಸೋಯಾಬೀನ್ ಖರೀದಿಗೂ ಕಾಲಾವಧಿ ವಿಸ್ತರಣೆ: ಅದೇ ರೀತಿ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಸೋಯಾಬೀನ್ ಖರೀದಿಸಲು ನಿಗದಿಪಡಿಸಿರುವ ನೋಂದಣಿ ಕಾಲಾವಧಿಯನ್ನು ಸಹ ಅಕ್ಟೋಬರ್ 20 ರಿಂದ ನವೆಂಬರ್ 20ರ ವರೆಗೆ ವಿಸ್ತರಿಸಿದೆ. ನೊಂದಣಿ ಜೊತೆಗೆ ಖರೀದಿ ಪ್ರಕ್ರಿಯೆ ಸಹ ನಡೆಯಲಿದ್ದು, ಜಿಲ್ಲೆಯ ರೈತರು ಇದರ ಲಾಭ ಪಡೆಯುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಆನೇಕಲ್: ಮಂಡ್ಯ ಟೈಮ್ಸ್ ಪತ್ರಿಕೆ ಸಂಪಾದಕರಾದ ಎಸ್. ಎಂ ಕುಮಾರಸ್ವಾಮಿ ರವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ರಾಜ್ಯ ಬೆಂಗಳೂರು…
ಕಲಬುರಗಿ: ಪ್ರವಾಸದಲ್ಲಿರುವ ಕರ್ನಾಟಕ ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ ಅವರು ಶುಕ್ರವಾರ ದಿನವಿಡೀ ಸಾರ್ವಜನಿಕರ ಅಹವಾಲು ಸ್ಚೀಕರಿಸಿದದ ನಂತರ ರಾತ್ರಿ…
ಕಲಬುರಗಿ: ಕಳೆದ 2023-24ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ನುರಿಸಿದ ಕಬ್ಬನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿಯ ಆಧಾರದ ಮೇಲೆ ಪ್ರಸಕ್ತ 2024-25ನೇ…
ಕಲಬುರಗಿ: ಸಂತ ಶ್ರೇಷ್ಠ ಕನಕದಾಸರ 537ನೇ ಜಯಂತಿಯನ್ನು ನವೆಂಬರ್ 18ರಂದು ಕಲಬುರಗಿಯಲ್ಲಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ಪ್ರದೇಶ…
ಕಲಬುರಗಿ: ಇಲ್ಲಿನ ಎಸ್ ಆರ್ ಎನ್ ಮೆಹೆತಾ ಶಾಲೆಯ ವಿದ್ಯಾರ್ಥಿಗಳು ನೂತನ ಆವಿಷ್ಕಾರವೊಂದನ್ನು ಮಾಡುವ ಮೂಲಕ ಗೋವಾದಲ್ಲಿ ನಡೆದ ವಾರ್ಷಿಕ…
ಶಹಾಬಾದ: ತಾಲೂಕ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಿಸೆಂಬರ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಶಹಾಬಾದ ತಾಲೂಕ ಪ್ರಥಮ ಕನ್ನಡ ಸಾಹಿತ್ಯ…