ಕಲಬುರಗಿ; ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ಖಾಜಾ ಬಂದೇ ನವಾಜ್ ವಿಶ್ವವಿದ್ಯಾಲಯದ ಕುಲಪತಿಯೂ ಆಗಿರುವ ಪ್ರಸಿದ್ಧ ಖಾಜಾ ಬಂದಾ ನವಾಜ ದರ್ಗಾದ ಡಾ. ಸೈಯದ್ ಶಾಹಾ ಗೆಸೋದರಾಜ್ ಖುಸ್ರೋ ಹುಸೇನಿ ಅವರ ನಿಧನವು ವೈಯಕ್ತಿಕವಾಗಿ ತುಂಬಲಾರದ ನಷ್ಟವಾಗಿದೆ. ಜಗತ್ತು ಒಬ್ಬ ಮಹಾನ್ ಮಾನವತಾವಾದಿ ಹಾಗೂ ಶಿಕ್ಷಣ ತಜ್ಞರನ್ನು ಕಳೆದುಕೊಂಡಂತಾಗಿದೆ ಎಂದರು.
ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ. ಅಪ್ಪಾಜಿ ಹಾಗೂ ಪೂಜ್ಯ ಡಾ. ಅವ್ವಾಜಿ ಅವರು ತಮ್ಮ ಶೋಕ ಸಂದೇಶದಲ್ಲಿ ಕಲಬುರಗಿಯ ಎರಡು ಕಣ್ಣುಗಳಂತಿರುವ ಶರಣಬಸವೇಶ್ವರ ಸಂಸ್ಥಾನ ಹಾಗೂ ಖಾಜಾ ಬಂದಾ ನವಾಜ ದರ್ಗಾದ ನಡುವಿನ ಬಾಂಧವ್ಯವನ್ನು ಸ್ಮರಿಸಿದರು ಹಾಗೂ ಡಾ. ಖುಸ್ರೂ ಹುಸೇನಿ ಅವರ ನಿಧನದಿಂದ, ಜಾತ್ಯತೀತ ತತ್ವಗಳಿಗೆ ದೃಢವಾಗಿ ಬದ್ಧರಾಗಿರುವ ವೈಯಕ್ತಿಕ ಸ್ನೇಹಿತರನ್ನು ಕಳೆದುಕೊಂಡಿದ್ದೇವೆ. ಡಾ. ಅಪ್ಪಾಜಿ ಮಾತನಾಡಿ, ಸಂಸ್ಥಾನದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿಯವರ ಜನನದ ನಂತರ ಡಾ. ಹುಸೇನಿ ಅವರು ಸಂಸ್ಥಾನಕ್ಕೆ ಭೇಟಿ ನೀಡಿ ಅವರನ್ನು ಆಶೀರ್ವದಿಸಿದ್ದರು ಎಂದರು.
ಶಿಕ್ಷಣ ಕ್ಷೇತ್ರದಲ್ಲಿ ಡಾ. ಖುಸ್ರೂ ಹುಸೇನಿ ಅವರ ಕೊಡುಗೆ ಅಪಾರವಾಗಿದೆ ಮತ್ತು ಶೈಕ್ಷಣಿಕ ಸಂಸ್ಥೆಗಳ ಸರಪಳಿಯನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಖಾಜಾ ಬಂದಾ ನವಾಜ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಪ್ರಾಥಮಿಕವಾಗಿ ಕಾರಣರಾಗಿದ್ದಾರೆ ಎಂದು ಅವರು ಹೇಳಿದರು. ಸಮೃದ್ಧ ಬರಹಗಾರರಾಗಿದ್ದ ಅವರು ಧರ್ಮ ಮತ್ತು ಸಾಮಾಜಿಕ ಅಂಶಗಳ ಕುರಿತು ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ ಎಂದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪೆÇ್ರ. ಅನಿಲಕುಮಾರ ಬಿಡವೆ, ಡೀನ್ ಡಾ. ಲಕ್ಷ್ಮೀ ಪಾಟೀಲ್ ಮಾಕಾ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಇತರ ಪದಾಧಿಕಾರಿಗಳು ಡಾ. ಹುಸೇನಿ ಅವರ ನಿಧನಕ್ಕೆ ಸಂತಾಪ ಸೂಚಿಸಿದರು.
ಹುಸೇನಿ ಅವರ ಸ್ಮರಣಾರ್ಥ ಶರಣಬಸವ ವಿಶ್ವವಿದ್ಯಾಲಯದಲ್ಲಿ ಸಂತಾಪ ಸೂಚಕ ಸಭೆ ಏರ್ಪಡಿಸಲಾಗಿದ್ದು, ಶರಣಬಸವ ವಿಶ್ವವಿದ್ಯಾಲಯಕ್ಕೆ ರಜೆ ಘೋಷಿಸಲಾಗಿದೆ.
ಬಿ.ಆರ್. ಪಾಟೀಲರ 76ನೇ ಹುಟ್ಟುಹಬ್ಬದ ಆಚರಣೆ ನಿಮಿತ್ತ ಕಲಬುರಗಿ: ಮನುಷ್ಯನ ಹುಟ್ಟು ಆಕಸ್ಮಿಕ ಸಾವು ನಿಶ್ಚಿತ. ಹುಟ್ಟು ಸಾವುಗಳ ನಡುವಿನ…
ಸುಳ್ಳು ದೂರು ಕೊಟ್ಟಲ್ಲಿ 3 ವರ್ಷ ಜೈಲು ಶಿಕ್ಷೆ ಕಲಬುರಗಿ: ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಬೇಕಾದರೆ…
ಕಲಬುರಗಿ: ಕಲಬುರಗಿ ಜಿಲ್ಲೆ ಶರಣರ ಹೆಬ್ಬಾಗಿಲು. ಇಲ್ಲಿ ಅನೇಕ ಶರಣರು, ದಾಸರು ಬಾಳಿ ಬದುಕಿದ ನೆಲ. ಶಿಕ್ಷಣ ಮತ್ತು ದಾಸೋಹ…
ಧಾರವಾಡ: ಉತ್ತರ ಕರ್ನಾಟಕದಾದ್ಯಂತ ನಾಟಕ ಚಟುವಟಿಕೆಗಳನ್ನು ನಿರಂತರ ನಡೆಸಿ ರಂಗಲೋಕವನ್ನು ಜೀವಂತವಾಗಿರಿಸಲು ಬದ್ಧವಾಗಿದ್ದೇನೆಂದು ಖ್ಯಾತ ನಟ, ನಿರ್ದೇಶಕ ರಾಜು ತಾಳಿಕೋಟೆ…
ಕಲಬುರಗಿ : ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುವುದರಿಂದ ಪಾಲಕರು ತಮ್ಮ ಮಕ್ಕಳನ್ನು ಕೇವಲ ಅಂಕದ ಬೆನ್ನ ಹಿಂದೆ…
ಕಲಬುರಗಿ; ನಗರದ ಶ್ರೀ ಶರಣಬಸವೇಶ್ವರ ಪುಣ್ಯಕ್ಷೇತ್ರದ ದಾಸೋಹ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ…