ಕಲಬುರಗಿ: ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿಯಲ್ಲಿ ರಸಗೊಬ್ಬರ ಮಾರಾಟಗಾರರಿಗೆ ಸಮಗ್ರ ಪೋಷಕಾಂಶ ನಿರ್ವಹಣೆ ಕುರಿತ 15 ದಿನಗಳ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಡಾ. ಶಿವಶಂಕರ ಎನ್. ವಿಸ್ತರಣಾ ನಿರ್ದೇಶಕರು, ಕೃ.ವಿ.ವಿ, ರಾಯಚೂರು ಕಾರ್ಯಕ್ರಮ ಉದ್ಘಾಟಿಸಿದರು, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ರಾಜು ಜಿ. ತೆಗ್ಗಳ್ಳಿರವರು ಪ್ರಾಸ್ತಾವಿಕ ನುಡಿಯಲ್ಲಿ ಈ ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವ ಶಿಬಿರಾರ್ಥಿಗಳು ಕೃಷಿ ಇಲಾಖೆ ಮುಖಾಂತರ ಸಂಬಂಧಪಟ್ಟ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮುಖಾಂತರ ಕೃಷಿ ವಿ.ವಿಗೆ ಅರ್ಜಿ ಸಲ್ಲಿಸಿದ್ದಲ್ಲಿ ಈ 15 ದಿನಗಳ ಸರ್ಟಿಫಿಕೇಟ್ ಕೋರ್ಸ್‍ಗೆ ಸೇರ್ಪಡೆಯಾಗಲು ಅವಕಾಶವಿದೆ. ರಸಗೂಬ್ಬರ ಮಾರಾಟ ಮಾಡಲು ಈ ಕೋರ್ಸ್ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಕೇಂದ್ರದ ಮಣ್ಣು ವಿಜ್ಞಾನಿ ಡಾ. ಶ್ರೀನಿವಾಸ, ಬಿ. ವಿ ಮಾತನಾಡಿ, ರೈತರು ಮಣ್ಣಿನ ಗುಣಲಕ್ಷಣಗಳ ಬಗ್ಗೆ ಅರಿವು ಮೂಡಿಸಿಕೊಂಡರೆ, ಬೆಳೆ ವಿಫಲವಾಗುವುದನ್ನು ತಡೆಯಬಹುದು ಹಾಗೂ ಮಣ್ಣು ಪರೀಕ್ಷೆ ಆಧಾರದ ಮೇಲೆ ರಸಗೊಬ್ಬರಗಳನ್ನು ಬಳಸಿ, ಸಮಗ್ರ ಪೋಷಕಾಂಶಗಳ ನಿರ್ವಹಣೆ ಕೈಗೊಂಡಾಗ ಕಡಿಮೆ ಖರ್ಚಿನಲ್ಲಿ ಉತ್ತಮ ಇಳುವರಿ ಜೊತೆಗೆ ಮಣ್ಣಿನ ಆರೋಗ್ಯವನ್ನೂ ಸಹ ಕಾಪಾಡಬಹುದು ಎಂದರು.
ಶಿಬಿರಾರ್ಥಿಗಳಿಗೆ ಕರ್ನಾಟಕದ ಕೃಷಿ ಪರಿಚಯ, ಮಣ್ಣಿನ ಉತ್ಪತ್ತಿ, ಮಣ್ಣಿನ ಪಾಶ್ರ್ವದೃಶ್ಯ, ಪದರ, ಮಣ್ಣಿನ ಜೈವಿಕ, ಭೌತಿಕ ಹಾಗೂ ರಾಸಾಯನಿಕ ಗುಣ ಕರ್ನಾಟಕದ ವಿವಿಧ ರೀತಿಯ ಮಣು,್ಣ ಕೃಷಿ ಬೆಳೆಗಳಲ್ಲಿ ಪೋಷಕಾಂಶಗಳ ಪಾತ್ರ, ಪೋಷಕಾಂಶ ಪೊರೈಕೆ ಮಾಡಲು ಬೇಕಾಗುವ ಎಲ್ಲಾ ರೀತಿಯ ಸಾವಯವ ಗೊಬ್ಬರ, ರಾಸಾಯನಿಕ ಗೊಬ್ಬರ, ರಾಸಾಯನಿಕ ಗೊಬ್ಬರಗಳ ಲೆಕ್ಕಾಚಾರ, ನಿರ್ವಹಣೆ ಹಾಗೂ ಮಣ್ಣಿನ ಆರೋಗ್ಯ ಕುರಿತು ಮಾಹಿತಿ ನೀಡಲಾಗುವುದು.
ಕಾರ್ಯಕ್ರಮ ಮುಖ್ಯ ಅತಿಥಿಗಳಾಗಿ ಡಾ. ಬಿ. ಎಮ್. ದೊಡಮನಿ, ಸಹ ಸಂಶೋಧನಾ ನಿರ್ದೇಶಕರು, ವಲಯ ಕೃಷಿ ಸಂಶೋಧನಾ ಕೇಂದ್ರ, ಅಧ್ಯಕ್ಷರಾಗಿ ಡಾ. ಎಮ್. ಎಮ್. ಧನೋಜಿ, ಡೀನï, ಕೃಷಿ ಮಹಾವಿದ್ಯಾಲಯ, ಕಲಬುರಗಿ, ಡಾ. ಡಿ.ಕೆ. ಹಾದಿಮನಿ ಮತ್ತು 60 ಶಿಬಿರಾರ್ಥಿಗಳು ಭಾಗವಹಿಸಿದರು. ಕಾರ್ಯಕ್ರಮವನ್ನು ಡಾ. ಸನ್ಮತಿ ನಾಯಕ್ ಅವರು ಸ್ವಾಗತಿಸಿದರೆ, ಕು. ಅಕ್ಷಿತಾ, ಕು. ಅಕ್ಷತಾ ನಿರೂಪಿಸಿದರು. ಕೊನೆಗೆ ಡಾ. ಯಸುಫ್ ಅಲಿ ನಿಂಬರಗಿ ಅವರು ವಂದಿಸಿದರು.
ಬಿ.ಆರ್. ಪಾಟೀಲರ 76ನೇ ಹುಟ್ಟುಹಬ್ಬದ ಆಚರಣೆ ನಿಮಿತ್ತ ಕಲಬುರಗಿ: ಮನುಷ್ಯನ ಹುಟ್ಟು ಆಕಸ್ಮಿಕ ಸಾವು ನಿಶ್ಚಿತ. ಹುಟ್ಟು ಸಾವುಗಳ ನಡುವಿನ…
ಸುಳ್ಳು ದೂರು ಕೊಟ್ಟಲ್ಲಿ 3 ವರ್ಷ ಜೈಲು ಶಿಕ್ಷೆ ಕಲಬುರಗಿ: ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಬೇಕಾದರೆ…
ಕಲಬುರಗಿ: ಕಲಬುರಗಿ ಜಿಲ್ಲೆ ಶರಣರ ಹೆಬ್ಬಾಗಿಲು. ಇಲ್ಲಿ ಅನೇಕ ಶರಣರು, ದಾಸರು ಬಾಳಿ ಬದುಕಿದ ನೆಲ. ಶಿಕ್ಷಣ ಮತ್ತು ದಾಸೋಹ…
ಧಾರವಾಡ: ಉತ್ತರ ಕರ್ನಾಟಕದಾದ್ಯಂತ ನಾಟಕ ಚಟುವಟಿಕೆಗಳನ್ನು ನಿರಂತರ ನಡೆಸಿ ರಂಗಲೋಕವನ್ನು ಜೀವಂತವಾಗಿರಿಸಲು ಬದ್ಧವಾಗಿದ್ದೇನೆಂದು ಖ್ಯಾತ ನಟ, ನಿರ್ದೇಶಕ ರಾಜು ತಾಳಿಕೋಟೆ…
ಕಲಬುರಗಿ : ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುವುದರಿಂದ ಪಾಲಕರು ತಮ್ಮ ಮಕ್ಕಳನ್ನು ಕೇವಲ ಅಂಕದ ಬೆನ್ನ ಹಿಂದೆ…
ಕಲಬುರಗಿ; ನಗರದ ಶ್ರೀ ಶರಣಬಸವೇಶ್ವರ ಪುಣ್ಯಕ್ಷೇತ್ರದ ದಾಸೋಹ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ…