ಬಿಸಿ ಬಿಸಿ ಸುದ್ದಿ

ಸೈಯದ್ ಷಾ ಖುಸ್ರೋ ಹುಸೇನಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡು ನಮನ ಸಲ್ಲಿಸಿದ ಡಾ. ಅಜಯ್ ಧರ್ಮಸಿಂಗ್

ಕಲಬುರಗಿ; ಬಳ್ಳಾರಿ ಜಿಲ್ಲೆ ಸಂಡೂರ ಉಪ ಚುನಾವಣೆಯ ಕಣದಲ್ಲಿ ಇದ್ದ ಕೆಕೆ ಆರ್ ಡಿ ಬಿ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರಾದ ಡಾ. ಅಜಯ್ ಧರ್ಮಸಿಂಗ್ ಅವರು ಅಲ್ಲಿಂದ ನೇರವಾಗಿ ಕಲಬುರಗಿಗೆ ಧಾವಿಸಿ ಬಂದು ಗುರುವಾರ ರಾತ್ರಿ ನಡೆದ ಹಜರತ್ ಖಾಜಾ ಬಂದಾ ನವಾಜ್ ದರ್ಗಾದ ಪೀಠಾಧಿಪತಿ ಹಾಗೂ ಕೆಬಿಎನ್ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿಡ್ಡ ಡಾ. ಸೈಯದ್ ಷಾ ಖ್ರುಸ್ರೋ ಹುಸೈನಿ ಅವರ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡು ಅಗಲಿದ ಆತ್ಮಕ್ಕೆ ಶೃದ್ಧಾಂಜಲಿ ಅರ್ಪಿಸಿದರು.

ದರ್ಗಾ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ಧಾರ್ಮಿಕ ವಿಧಿಗಳೊಂದಿಗೆ ನಡೆದ ಅಂತಿಮ ಯಾತ್ರೆಯ ಪ್ರಕ್ರಿಯೆಗಳಿಗೆ ಡಾ. ಅಜಯ್ ಸಿಂಗ್ ಸಾಕ್ಷಿ ಆದರು. ಸೈಯದ್ ಷಾ ಖ್ರುಸ್ರೋ ಹುಸೈನಿ ಅವರು, ಪ್ರಸಿದ್ಧ ಸೂಫಿ ಸಂತ ಹಜರತ್ ಖಾಜಾ ಬಂದಾ ನವಾಜ್ ಅವರ 23ನೇ ವಂಶಸ್ಥರಾಗಿದ್ದರು. ತಮ್ಮ ಆಳವಾದ ಆಧ್ಯಾತ್ಮಿಕತೆಗೆ ಮಾತ್ರವಲ್ಲದೆ ಬೌದ್ಧಿಕ ಕೊಡುಗೆಗಳಿಗಾಗಿಯೂ ಕಲ್ಯಾಣ ಕರ್ನಾಟಕ ಹಾಗೂ ಇಡೀ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದನ್ನು ಡಾ. ಅಜಯ್ ಸಿಂಗ್ ಸ್ಮರಿಸಿದರು.

ದಿವಂಗತ ಖುಸ್ರೋ ಹುಸೇನಿ ಅವರ ಪರಿವಾರದ ಸದಸ್ಯರನ್ನು ಕಂಡು ಡಾ ಅಜಯ್ ಸಿಂಗ್ ಅವರು ಸಾಂತ್ವನ ಹೇಳಿದರು. ಮಹಾನ್ ವಿದ್ವಾಂಸರಾಗಿದ್ದ ಡಾ. ಖುಸ್ರೋ ಹುಸೇನಿ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಅರ್ಪಿಸಿದರು.

ಕೆಕೆಆರ್‌ಡಿಬಿ ಅಧ್ಯಕ್ಷರಾದ ಡಾ ಅಜಯ್ ಧರ್ಮಸಿಂಗ್ ಅವರು ಮತ್ತೆ ಗುರುವಾರದ ರಾತ್ರಿಯೇ ಸಂಡೂರ್ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿ ನ. 8 ಹಾಗೂ ನ. 9* ರಂದು ಸಂಡೂರು ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

emedialine

Recent Posts

ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಫಾರೂಕ್ ಮನ್ನೂರ್ ಮಕ್ಕಳೊಂದಿಗೆ ಜನ್ಮದಿನಾಚರಣೆ

ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್…

11 hours ago

ಜಾನಪದದಲ್ಲಿ ಮಾನವೀಯ ಮೌಲ್ಯಗಳು ಒಳಗೊಂಡಿದೆ: ಯಲ್ಲಪ್ಪ ನಾಯ್ಕೋಡಿ

ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…

12 hours ago

ಕಲಬುರಗಿ ಸ್ಮಾರ್ಟ್ ಸಿಟೀ ಎನ್ನುವುದು ಸಿಎಂ ತೋರಿಸುವ ಹಗಲ ನಕ್ಷತ್ರ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ…

12 hours ago

ರವಿ ಎನ್ ದೇಗಾಂವ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ

ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…

12 hours ago

ಕಲಬುರಗಿ; 10 ಕೃತಿಗಳಿಗೆ `ಅಮ್ಮ ಪ್ರಶಸ್ತಿ’

ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…

12 hours ago

ವಾಡಿ; ಮಕ್ಕಳ ದಿನಾಚರಣೆ ಸಂಭ್ರಮ

ವಾಡಿ: ಮಾಜಿ ಪ್ರಧಾನಿ ಪಂಡೀತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಪ್ರಯುಕ್ತ ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.…

13 hours ago