ಕಲಬುರಗಿ: ‘ರಾಜ್ಯದಲ್ಲಿ ವಕ್ಸ್ ಅಸ್ತಿ ಅತಿಕ್ರಮಣ ಮತ್ತು ಕಬಳಿಕೆ ಆಗಿದ್ದು ವಕ್ಸ್ ಆಸ್ತಿಯನ್ನು ಉಳಿಸಿಕೊಳ್ಳಬೇಕಾದದ್ದು ಸರ್ಕಾರದ ಕರ್ತವ್ಯವಾಗಿದೆ. ವಕ್ಸ್ ಬಗ್ಗೆ ಜ್ಞಾನವಿಲ್ಲದ ಸಚಿವರು, ವಕ್ಸ್ ಬೋರ್ಡ್ ಚುನಾವಣಾ ಪ್ರಚಾರಕ್ಕಾಗಿ ವಕ್ಸ್ ಅದಾಲತ್ ನಡೆಸುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ. ಇದನ್ನು ಗಮನಿಸಿದರೆ ಸರ್ಕಾರವೇ ಸಾರ್ವಜನಿಕರ ಆಸ್ತಿ ಅತಿಕ್ರಮಣ ಮಾಡಿದಂತಾಗಿದೆ’ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಸಂಯೋಜಿಕರು ಭೀಮು ನೆಲೋಗಿ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ವಕ್ಸ್ ಮಂಡಳಿಯಿಂದ ಸಾರ್ವಜನಿಕರಿಗೆ ತೊಂದರೆ ಆಗಿದ್ದಲ್ಲಿ ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಸಮಿತಿ ರಚಿಸಿ ರಾಜ್ಯದಲ್ಲಿ ಕಬಳಿಕೆಯಾದ ಆಸ್ತಿಯ ವಿವರದ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಅದನ್ನು ಬಿಟ್ಟು ವೋಟ್ ಬ್ಯಾಂಕ್ ರಾಜಕಾರಣ ಮಾಡುವುದು ಸರಿಯಲ್ಲ. ತಮ್ಮ, ತಮ್ಮ ರಾಜಕೀಯ ಪಕ್ಷಗಳ ಭೂಗಳ್ಳರನ್ನು ಉಳಿಸುವ ಸಲುವಾಗಿ ಈ ರೀತಿಯ ತಪ್ಪು ಮಾಹಿತಿ ಸಾರ್ವಜನಿಕರಲ್ಲಿ ಬಿಂಬಿಸುವುದು ಒಳ್ಳೆಯದಲ್ಲ ಎಂದಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಾಯಕರಿಗೆ ನೈತಿಕತೆ ಇದ್ದರೆ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾನಪಾಡಿ ವರದಿ ಜಾರಿಗೆ ತರಲಿ, ಜಾರಿಗೆ ತರಲು ಹೋರಾಟ ಮಾಡಲಿ. ವಿಶೇಷವಾಗಿ ರಾಜ್ಯದಲ್ಲಿ ಬಿಜೆಪಿ ನಾಯಕರು ಜನರನ್ನು ದಾರಿ ತಪ್ಪಿಸುವ ಕಾರ್ಯ ಹಾಗೂ ಕೋಮುಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡುವುದು ಬಿಡ್ಲಿ ಎಂದು ಕೀವಿಹಿಂಡಿದ್ದ ಅವರು ವಕ್ಫ್ ವಿವಾದ ಬಗಿಹರಿಸಲು ಸರಕಾರ ವಕ್ಫ್ ಸಮಿತಿ ರಚಸಬೇಕೆಂದು ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…