ಕಲಬುರಗಿ: ಲೋಕಪಯೋಗಿ ಇಲಾಖೆ 2023-24ನೇ ಸಾಲಿನ 5054 ಹೆಚ್ ಎ ಅಪೆಂಡಿಕ್ಸ್-ಇ ಅನುದಾನದಲ್ಲಿ 5. ಕೋಟಿ ರೂ ವೆಚ್ಚದ್ ದಕ್ಷಿಣ ವಿಧಾನಸಭಾ ಕ್ಷೇತ್ರದ ನಗರದ ಹೊರವಲಯದ ರಿಂಗ್ ರಸ್ತೆಯಿಂದ ಸೈಯದ್ ಚಿಂಚೋಳಿ ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು, ರಿಂಗ್ ರಸ್ತೆಯಿಂದ ಸೈಯದ್ ಚಿಂಚೋಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟ ಹಿನ್ನಲೆ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ 5 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ, ಮುಖಂಡರಾದ ಹಣಮಂತರಾವ್ ಉದನೂರ್, ಭೀಮರಾವ್ ಮೆಳಕುಂದಿ, ಶಂಕರ್ ಸಿಂಗ್, ಅಂಬರಾಯ ಕಾಂಬಳಿ, ಕಾಶಿನಾಥ, ಸೈದಪ್ಪ, ಸೈಯದ್ ಪಟೇಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್…
ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ…
ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…
ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…
ವಾಡಿ: ಮಾಜಿ ಪ್ರಧಾನಿ ಪಂಡೀತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಪ್ರಯುಕ್ತ ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.…