ಸಂಡೂರು ವಿಧಾನಸಭೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಅಭ್ಯರ್ಥಿ ಪರ ಡಾ. ಅಜಯಸಿಂಗ್ ಬಿರುಸಿನ ಪ್ರಚಾರ

0
22

ಸಂಡೂರು: ಸಂಡೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ  ಅನ್ನಪೂರ್ಣ ತುಕಾರಾಮ ಅವರ ಪರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಜೇವರ್ಗಿ ಶಾಸಕ ಡಾ. ಅಜಯಸಿಂಗ್ ಅವರು ಬಿರುಸಿನ ಪ್ರಚಾರ ನಡೆಸಿದರು.

ಕಳೆದ ಒಂದು ವಾರದಿಂದಲೂ ಸಂಡೂರು ಕ್ಷೇತ್ರದಲ್ಲಿ ಬೀಡು ಬಿಟ್ಟಿರುವ ಡಾ. ಅಜಯಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ವಿವಿಧ ಹಳ್ಳಿಗಳಲ್ಲಿ ಪ್ರಚಾರ ಕೈಗೊಂಡಿದ್ದಾರೆ.

Contact Your\'s Advertisement; 9902492681

ಸಂಡೂರಿನ ಕುಡುತಿನಿಯಲ್ಲಿ ಮತದಾರರ ಮನೆ ಮನೆಗೆ ಭೇಟಿ ನೀಡಿ ಮಾತನಾಡಿದ ಡಾ. ಅಜಯಸಿಂಗ್ ಅವರು, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪಂಚ ಗ್ಯಾರಂಟಿ ನೀಡಿದೆ. ಇದರಿಂದ ಜನರ ಒಲವು ಕಾಂಗ್ರೆಸ್ ಪರ ಇದೆ. ಕಾಂಗ್ರೆಸ್ ಸರಕಾರ ಇತಿಹಾಸದಲ್ಲಿ ಮೊದಲ ಬಾರಿಗೆ ಕೆಕೆಆರ್ ಡಿಬಿಗೆ ದಾಖಲೆಯ 5,000 ಕೋಟಿ ರೂ.ಗಳ ಅನುದಾನ ನೀಡಿದೆ. ಇದು ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ನಮ್ಮ ಕಾಂಗ್ರೆಸ್ ಸರಕಾರದ ಬದ್ಧತೆಯನ್ನು ತೋರಿಸಿತ್ತದೆ.

ಇದೇ ನವೆಂಬರ್ 13ರ ಬುಧವಾರದಂದು ನಡೆಯಲಿರುವ ಮತದಾನದಲ್ಲಿ ಕ್ರಮ ಸಂಖ್ಯೆ 1ರ ಹಸ್ತದ ಗುರುತಿಗೆ ಮತ ನೀಡುವ ಮೂಲಕ ನಮ್ಮ ಅಭ್ಯರ್ಥಿಯನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ, ಅವರಿಗೆ ಕ್ಷೇತ್ರದ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕೆಂದು ಜನತೆಯಲ್ಲಿ ವಿನಂತಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಹಾಗೂ ಕ್ಷೇತ್ರಕ್ಕೆ ನೀಡಿರುವ ವಿವಿಧ ಕೊಡುಗೆಗಳನ್ನು ಮೆಚ್ಚಿರುವ ಜನತೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತಪಡಿಸುತ್ತಿರುವುದು ಸಂತಸ ತಂದಿದೆ ಎಂದಿದ್ದಾರೆ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here