ಸಂಡೂರು: ಸಂಡೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ ಅವರ ಪರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಜೇವರ್ಗಿ ಶಾಸಕ ಡಾ. ಅಜಯಸಿಂಗ್ ಅವರು ಬಿರುಸಿನ ಪ್ರಚಾರ ನಡೆಸಿದರು.
ಕಳೆದ ಒಂದು ವಾರದಿಂದಲೂ ಸಂಡೂರು ಕ್ಷೇತ್ರದಲ್ಲಿ ಬೀಡು ಬಿಟ್ಟಿರುವ ಡಾ. ಅಜಯಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ವಿವಿಧ ಹಳ್ಳಿಗಳಲ್ಲಿ ಪ್ರಚಾರ ಕೈಗೊಂಡಿದ್ದಾರೆ.
ಸಂಡೂರಿನ ಕುಡುತಿನಿಯಲ್ಲಿ ಮತದಾರರ ಮನೆ ಮನೆಗೆ ಭೇಟಿ ನೀಡಿ ಮಾತನಾಡಿದ ಡಾ. ಅಜಯಸಿಂಗ್ ಅವರು, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪಂಚ ಗ್ಯಾರಂಟಿ ನೀಡಿದೆ. ಇದರಿಂದ ಜನರ ಒಲವು ಕಾಂಗ್ರೆಸ್ ಪರ ಇದೆ. ಕಾಂಗ್ರೆಸ್ ಸರಕಾರ ಇತಿಹಾಸದಲ್ಲಿ ಮೊದಲ ಬಾರಿಗೆ ಕೆಕೆಆರ್ ಡಿಬಿಗೆ ದಾಖಲೆಯ 5,000 ಕೋಟಿ ರೂ.ಗಳ ಅನುದಾನ ನೀಡಿದೆ. ಇದು ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ನಮ್ಮ ಕಾಂಗ್ರೆಸ್ ಸರಕಾರದ ಬದ್ಧತೆಯನ್ನು ತೋರಿಸಿತ್ತದೆ.
ಇದೇ ನವೆಂಬರ್ 13ರ ಬುಧವಾರದಂದು ನಡೆಯಲಿರುವ ಮತದಾನದಲ್ಲಿ ಕ್ರಮ ಸಂಖ್ಯೆ 1ರ ಹಸ್ತದ ಗುರುತಿಗೆ ಮತ ನೀಡುವ ಮೂಲಕ ನಮ್ಮ ಅಭ್ಯರ್ಥಿಯನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ, ಅವರಿಗೆ ಕ್ಷೇತ್ರದ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕೆಂದು ಜನತೆಯಲ್ಲಿ ವಿನಂತಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಹಾಗೂ ಕ್ಷೇತ್ರಕ್ಕೆ ನೀಡಿರುವ ವಿವಿಧ ಕೊಡುಗೆಗಳನ್ನು ಮೆಚ್ಚಿರುವ ಜನತೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತಪಡಿಸುತ್ತಿರುವುದು ಸಂತಸ ತಂದಿದೆ ಎಂದಿದ್ದಾರೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…