ಸುರಪುರ: ಇದೇ ತಿಂಗಳ ೨೩ನೇ ತಾರೀಖು ಬೆಳಿಗ್ಗೆ ಹತ್ತು ಗಂಟೆಗೆ ತಹಸೀಲ್ ಸಭಾಂಗಣದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಗುವುದು ಎಂದು ತಹಸೀಲ್ದಾರ ನಿಂಗಣ್ಣ ಬಿರೆದಾರ ತಿಳಿಸಿದರು.
ನಗರದ ತಹಸೀಲ್ ಕಾರ್ಯಲಯದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಅಂದು ಬೆಳಿಗ್ಗೆ ಎಂಟು ಗಂಟೆಗೆ ತಾಲ್ಲೂಕಿನ ಎಲ್ಲಾ ಕಚೇರಿಗಳಲ್ಲಿ ಮತ್ತು ಗ್ರಾಮ ಪಂಚಾಯತಿ ಕಚೇರಿಗಳು ಹಾಗು ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು.ನಂತರ ಹತ್ತು ಗಂಟೆಗೆ ತಾಲ್ಲೂಕು ಆಡಳಿತದಿಂದ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಮುಖ್ಯಾಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ತಿಳಿಸಿದರು.
ಪೂರ್ವಭಾವಿ ಸಭೆಗೆ ಕೆಲವೇ ಕೆಲವು ಇಲಾಖೆಗಳು ಹೊರತು ಪಡಿಸಿ ಇನ್ನುಳಿದ ಅನೇಕ ಇಲಾಖೆಗಳ ಯಾವೊಬ್ಬ ಅಧಿಕಾರಿಯೂ ಸಭೆಗೆ ಬಾರದಿರುವುದಕ್ಕೆ ಬೇಸರ ವ್ಯಕ್ತಪಡಿಸಿ ಸಭೆಗೆ ಬಾರದಿರುವ ಇಲಾಖೆಗಳ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ತಿಳಿಸಿದರು.
ಸಭೆಯಲ್ಲಿ ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನ,ತಾಲ್ಲೂಕು ಆರೋಗ್ಯ ಅಧಿಕಾರಿ ಡಾ:ಆರ್.ವಿ. ನಾಯಕ,ನಗರಸಭೆ ನೈರ್ಮಲ್ಯ ನಿರೀಕ್ಷಕ ಲಕ್ಷ್ಮಣ ಕಟ್ಟಿಮನಿ,ಸಿಡಿಪಿಒ ಲಾಲಸಾಬ್,ಸಮಾಜ ಕಲ್ಯಾಣಾಧಿಕಾರಿ ಸತ್ಯನಾರಾಯಣ ದರಬಾರಿ,ತಾಲ್ಲೂಕು ಉಪ ಖಜಾನೆ ಅಧಿಕಾರಿ ಮೊನಪ್ಪ ಶಿರವಾಳ,ಶುಭಾಸ ಖಣದಾಳ,ಶಿವಪುತ್ರ,ರಂಗನಾಥ,ಶಶಿಧರ ಹಿರೇಮಠ,ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ ವಿಶ್ವನಾಥ ಎಂ.ವೈ,ಮಹೇಥರ್ಭ,ಮಹ್ಮದ ಆಸಾದ,ಯಮನಪ್ಪ ಆರ್,ಕೊಂಡಲನಾಯಕ,ರವಿ ನಾಯಕ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…