ಕಲಬುರಗಿ; ನವೆಂಬರ್ 14ರಂದು ನಡೆಯಲಿರುವ ಶರಣಬಸವೇಶ್ವರ ಸಂಸ್ಥಾನದ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅವರ 90ನೇ ಜನ್ಮದಿನಾಚರಣೆ, ನವೆಂಬರ್ 22ರಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿಯವರ 55ನೇ ಜನ್ಮದಿನಾಚರಣೆ ಹಾಗೂ ನವೆಂಬರ್ 01 ರಂದು ಸಂಸ್ಥಾನದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿಯವರ 8ನೇ ಜನ್ಮದಿನಾಚರಣೆಯ ನಿಮಿತ್ಯದಂಗವಾಗಿ ಬುಧವಾರ ಶರಣಬಸವ ವಿಶ್ವವಿದ್ಯಾಲಯದ ಸಭಾಮಂಟಪದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಪಾಲ್ಗೊಂಡಿದ್ದರು.
ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಶರಣಬಸವ ವಿಶ್ವವಿದ್ಯಾಲಯ ಮತ್ತು ಬಸವೇಶ್ವರ ಟೀಚಿಂಗ್ ಆ್ಯಂಡ್ ಜನರಲ್ ಹಾಸ್ಪಿಟಲ್ ಹಾಗೂ ಶರಣಬಸವ ವಿಶ್ವವಿದ್ಯಾಲಯದ ವ್ಯವಹಾರ ಅಧ್ಯಯನ ನಿಕಾಯದ ಸಂಯುಕ್ತಾಶ್ರಯದಲ್ಲಿ ನಡೆದ ರಕ್ತದಾನ ಶಿಬಿರವನ್ನು ಡಾ. ಶ್ವೇತಾ ದೇಶಮುಖ ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಡಾ. ಅಲ್ಲಮಪ್ರಭು ದೇಶಮುಖ ಸೇರಿದಂತೆ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪೆÇ್ರ. ಅನಿಲಕುಮಾರ ಬಿಡವೆ, ಕುಲಸಚಿವ ಡಾ. ಎಸ್.ಜಿ.ಡೊಳ್ಳೇಗೌಡರ್, ಡೀನ್ ಡಾ. ಲಕ್ಷ್ಮೀ ಪಾಟೀಲ್ ಮಾಕಾ, ಕುಲಸಚಿವ (ಮೌಲ್ಯಮಾಪನ) ಡಾ. ಎಸ್.ಎಚ್.ಹೊನ್ನಳ್ಳಿ, ನಿರ್ದೇಶಕ ಪೆÇ್ರ. ವಿ.ಡಿ.ಮೈತ್ರಿ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…