ಕಲಬುರಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿರುವ ಮೆ. ಸಿದ್ದಸಿರಿ ಸೌಹಾರ್ದ ಸಹಕಾರಿ ನಿಯಮಿತ ಎಥೆನಾಲ್ ಕಾರ್ಖಾನೆಯು ಸ್ಥಗಿತಗೊಂಡಿದ್ದರಿಂದ ರೈತರ ಹಿತದೃಷ್ಠಿಯಿಂದ ಪ್ರಸಕ್ತ 2024-25ನೇ ಸಾಲಿನ ಹಂಗಾಮಿಗೆ ಸೀಮಿತವಾಗಿ ಸದರಿ ಕಾರ್ಖಾನೆ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಬೆಳೆಯಲಾದ ಕಬ್ಬನ್ನು ಸಮೀಪದ ಇತರೆ ಕಾರ್ಖಾನೆಗಳಿಗೆ ಮಾರಾಟ ಮಾಡಲು ತಾತ್ಕಲಿಕವಾಗಿ ಹಂಚಿಕೆ ಮಾಡಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.
ಮೆ.ಸಿದ್ದಸಿರಿ ಕಾರ್ಖಾನೆಗೆ ಹಂಚಿಕೆ ಮಾಡಲಾಗಿದ್ದ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ 111, ಚಿತ್ತಾಪೂರ ತಾಲೂಕಿನ 77 ಹಾಗೂ ಸೇಡಂ ತಾಲೂಕಿನ 112 ಗ್ರಾಮಗಳು ಸೇರಿ ಒಟ್ಟು 300 ಗ್ರಾಮಗಳಲ್ಲಿ ರೈತರು ಬೆಳೆದ ಕಬ್ಬನ್ನು ಜಿಲ್ಲೆಯ ಅಫಜಲಪೂರ ತಾಲೂಕಿನ ಚಿಣಮಗೇರಾದ ಕೆ.ಪಿ.ಆರ್. ಶುಗರ್ ಆ್ಯಂಡ್ ಅಪರೇಲ್ಸ್ ಲಿ. ಸಕ್ಕರೆ ಕಾರ್ಖಾನೆಗೆ 189 ಗ್ರಾಮ ಹಾಗೂ ನೆರೆಯ ಬೀದರ ತಾಲೂಕಿನ ಮಲ್ಲೂರು ಕಿಸಾನ್ ಸಕ್ಕರೆ ಕಾರ್ಖಾನೆಗೆ 111 ಗ್ರಾಮಗಳನ್ನು ಪ್ರಸಕ್ತ ಹಂಗಾಮಿಗೆ ಸೀಮಿತವಾಗಿ ಹಂಚಿಕೆ ಮಾಡಿ ಆದೇಶಿಸಲಾಗಿದೆ.
ಹೀಗಾಗಿ ಜಿಲ್ಲೆಯ ಚಿಂಚೋಳಿ, ಕಾಳಗಿ, ಸೇಡಂ ಮತ್ತು ಚಿತ್ತಾಪೂರ ತಾಲೂಕುಗಳ ಕಬ್ಬು ಬೆಳೆಗಾರರು ಹಂಚಿಕೆಯಂತೆ ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳಿಗೆ ತಾವು ಬೆಳೆದ ಕಬ್ಬನ್ನು ಮಾರಾಟ ಮಾಡಬಹುದಾಗಿದೆ ಎಂದು ಡಿ.ಸಿ. ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಇದಲ್ಲದೆ ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಿಂದ ಹಂಚಿಕೆ ಮಾಡಲಾದ ಸಕ್ಕರೆ ಕಾರ್ಖಾನೆಗಳ ಮೀಸಲು ಪ್ರದೇಶದಿಂದ ಬೇರೆ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಬೆಳೆಗಾರರು ಕಬ್ಬು ಸಾಗಾಣಿಕೆ ಮಾಡಲು ಇಚ್ಛಿಸಿದಲ್ಲಿ ನಿಗಧಿತ ನಮೂನೆ-2 ರಲ್ಲಿ ವಿವರಗಳೊಂದಿಗೆ 100 ರೂ. ಗಳ ಭದ್ರತಾ ಠೇವಣಿ ಹಾಗೂ ನಿಗಧಿತ ಶುಲ್ಕ 5 ರೂ. ಗಳನ್ನು ಲೆಕ್ಕ ಶೀರ್ಷಿಕೆ 0070-6-8000-3-04-000 ಗೆ ಸಂದಾಯ ಮಾಡಿ ಸಂಬಂಧಪಟ್ಟ ಕಲಬುರಗಿ ಮತ್ತು ಸೇಡಂ ಉಪ-ವಿಭಾಗಗಳ ಸಹಾಯಕ ಆಯುಕ್ತರುಗಳಿಗೆ ಅರ್ಜಿ ಸಲ್ಲಿಸಿ ಕಬ್ಬು ಸಾಗಾಣಿಕೆ ಪರವಾನಗಿ ಪಡೆಯಬಹುದಾಗಿದೆ.
ಇನ್ನು ಕಾರ್ಖಾನೆವಾರು ಹಂಚಿಕೆ ಮಾಡಲಾದ ಗ್ರಾಮಗಳ ವಿವರವನ್ನು ತಹಶೀಲ್ದಾರ ಕಚೇರಿ, ನಾಡ ಕಚೇರಿ, ಗ್ರಾಮ ಪಂಚಾಯತ್ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ವೀಕ್ಷಿಸಬಹುದಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…