ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ, ಅನುಮಾನಸ್ಪದ ಸಾವಿನ ಪ್ರಕರಣದ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ರಾಯಚೂರಿನಲ್ಲಿ ವಿವಿಧ ಜನಪರ ಸಂಘಟನೆ ಹಾಗೂ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ನ್ಯಾಯಕಾಗಿ ಒತ್ತಾಯಿಸಿದ್ದರು.
ವಿದ್ಯಾರ್ಥಿನಿ ಶವ ದೊರೆತ ಸ್ಥಳ ದೇವಸ್ಥಾನದ ಹಿಂಭಾಗದಿಂದ ಆರಂಭವಾದ ಮೆರವಣಿಗೆಯಲ್ಲಿ ವಿವಿಧ ಸ್ವಾಮಿಜಿಗಳು ಸಂಘಟನೆಗಳು, ಸಾವಿರಾರು ವಿದ್ಯಾರ್ಥಿಗಳು ಹಾಗೂ ಸಿನಿಮಾ ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಸಹ ಪ್ರತಿಭಟನೆಗೆ ಸಾಥ್ ನೀಡಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮಾಣಿಕ ಪ್ರಭು ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತ್ತು.