ಕಲಬುರಗಿ; ಶರಣಬಸವೇಶ್ವರ ದೇವಾಲಯದಲ್ಲಿ ಹಬ್ಬದ ವಾತಾವರಣ. ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿಯವರ 90ನೇ ಜನ್ಮದಿನಾಚರಣೆ ಅಂಗವಾಗಿ ಗುರುವಾರ ಕಲಬುರಗಿ ನಗರದ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿ ಸಾವಿರಾರು ಭಕ್ತರು ಪೂಜ್ಯ ಡಾ. ಅಪ್ಪಾಜಿಯವರ ಆರೋಗ್ಯ, ಧೀರ್ಘಾಯುಷ್ಯ ಹಾಗೂ ಸುಖ ಸಮೃದ್ಧಿಯ ಜೀವನಕ್ಕಾಗಿ ಶ್ರೀ ಶರಣಬಸವೇಶ್ವರರಿಗೆ “ಲಕ್ಷ ಬಿಲ್ವಾರ್ಚನೆ” ಮಾಡುವ ಮೂಲಕ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿದ್ದರು.
ಡಾ. ಅಪ್ಪಾಜಿಯವರ ಜನ್ಮದಿನಾಚರಣೆಯ ಅಂಗವಾಗಿ ನಸುಕಿನ ಜಾವದಲ್ಲಿ ಭಕ್ತರು ದೇಗುಲದಲ್ಲಿ ಆಯೋಜಿಸಿರುವ “ಲಕ್ಷ ಬಿಲ್ವಾರ್ಚನೆ”ಯಲ್ಲಿ ಪಾಲ್ಗೊಳ್ಳಲು ಆರಂಭಿಸಿದರು.
ನವೆಂಬರ್ 22ರಂದು ತಮ್ಮ 55 ನೇ ಜನ್ಮದಿನವನ್ನು ಆಚರಿಸಿಕೊಳ್ಳಲಿರುವ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಮತ್ತು ನವೆಂಬರ್ 01 ರಂದು ತಮ್ಮ 8ನೇ ಜನ್ಮದಿನವನ್ನು ಆಚರಿಸಿಕೊಂಡ ಸಂಸ್ಥಾನದ 9ನೇ ಪೀಠಾಧಿಪತಿ ಚಿರಂಜೀವಿ ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರು ತಮ್ಮ ಸಹೋದರಿಯರಾದ ಕುಮಾರಿ ಭವಾನಿ ಹಾಗೂ ಕುಮಾರಿ ಶಿವಾನಿಯವರು ಸೇರಿದಂತೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಎಲ್ಲರ ಸುಧೀರ್ಘ ಜೀವನಕ್ಕಾಗಿ ದೇವರಲ್ಲಿ ಪ್ರಾರ್ಥಿಸಲು, ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಲು ದೇಗುಲಕ್ಕೆ ಬೆಳಿಗ್ಗೆಯೇ ಆಗಮಿಸಿದ್ದರು.
ಬೆಳಗುಂಪಿ ಬ್ರಹನ್ಮಠದ ಷ. ಬ್ರ. ಅಭಿನವ ಪರ್ವತೇಶ್ವರ ಶಿವಾಚಾರ್ಯರರ ನೇತೃತ್ವದ ವಿವಿಧ ಧಾರ್ಮಿಕ ಮಠಾಧೀಶರು ಸೇರಿದಂತೆ ಇತರ ಪ್ರಮುಖರು ಲಕ್ಷ ಬಿಲ್ವಾರ್ಚನೆಯಲ್ಲಿ ಪಾಲ್ಗೊಂಡಿದ್ದರು. ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ಅವರು ಷ. ಬ್ರ. ಅಭಿನವ ಪರ್ವತೇಶ್ವರ ಶಿವಾಚಾರ್ಯರಿಗೆ ಪಾದಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು. ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಮತ್ತು ಚಿರಂಜೀವಿ ದೊಡ್ಡಪ್ಪ ಅಪ್ಪಾಜಿಯವರು ಡಾ. ಅಪ್ಪಾಜಿ ಅವರ ಕುಟುಂಬದ ಇತರ ಸದಸ್ಯರೊಂದಿಗೆ ದೇವಾಲಯದ ಸಂಕೀರ್ಣದಲ್ಲಿ ಸುಧೀರ್ಘವಾದ ಸುಮಾರು ಮೂರು ಗಂಟೆಗಳ ಕಾಲ ಲಕ್ಷ ಬಿಲ್ವಾರ್ಚನೆ ನೆರವೇರಿಸಿದರು.
ಪೂಜ್ಯ ಡಾ. ಅಪ್ಪಾಜಿಯವರ ಜನ್ಮದಿನಾಚರಣೆ ಅಂಗವಾಗಿ, ಷ. ಬ್ರ. ಅಭಿನವ ಪರ್ವತೇಶ್ವರ ಶಿವಾಚಾರ್ಯರ ನೇತೃತ್ವದಲ್ಲಿ ಹನ್ನೆರಡು ಮಕ್ಕಳಿಗೆ “ಅಯ್ಯಾಚಾರ” ಮತ್ತು “ಲಿಂಗಧಾರಣೆ” ಕಾರ್ಯಕ್ರಮ ನೆರವೇರಿತು. ನಂತರ ಧಾರ್ಮಿಕ ವಿಧಿವಿಧಾನಗಳ ಅಂಗವಾಗಿ 300ಕ್ಕೂ ಹೆಚ್ಚು ಭಕ್ತರಿಗೆ “ಲಿಂಗದೀಕ್ಷೆ” ನೀಡಲಾಯಿತು. ಕಲಬುರಗಿಯ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಭೇಟಿ ನೀಡಿ ಲಕ್ಷ ಬಿಲ್ವಾರ್ಚನೆಯಲ್ಲಿ ಕೆಲಕಾಲ ಪಾಲ್ಗೊಂಡು ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಹಾಗೂ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿಯವರÀ ಆಶೀರ್ವಾದ ಪಡೆದರು.
ವೀರಶೈವ ಲಿಂಗಾಯತ ಮಹಾ ವೇದಿಕೆ ವತಿಯಿಂದ ಸಂತ ಶರಣಬಸವೇಶ್ವರÀರಿಗೆ ಈ “ಲಕ್ಷ ಬಿಲ್ವಾರ್ಚನೆ” ಕಾರ್ಯಕ್ರಮ ನಡೆಯಿತು. ವೇದಿಕೆಯ ಪದಾಧಿಕಾರಿಗಳು ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ, ಚಿರಂಜೀವಿ ಪೂಜ್ಯ ದೊಡ್ಡಪ್ಪ ಅಪ್ಪಾಜಿ ಹಾಗೂ ಶ್ರೀ ಬಸವರಾಜ ದೇಶಮುಖ ಅವರನ್ನು ಸನ್ಮಾನಿಸಿದರು. ಚಿರಂಜೀವಿ ದೊಡ್ಡಪ್ಪ ಅಪ್ಪಾಜಿಯವರು ತಮ್ಮ ಸಂಕ್ಷಿಪ್ತ ಭಾಷಣದಲ್ಲಿ “ಲಕ್ಷ ಬಿಲ್ವಾರ್ಚನೆ” ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ಆಯೋಜಿಸಿದ್ದಕ್ಕಾಗಿ ಮತ್ತು ಇತರರನ್ನು ಗೌರವಿಸಿದ ವೇದಿಕೆಯ ಎಲ್ಲಾ ಪಧಾಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಧಾರ್ಮಿಕ ವಿಧಿವಿಧಾನಗಳಲ್ಲಿ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪೆÇ್ರ. ಅನಿಲಕುಮಾರ ಬಿಡವೆ, ಕುಲಸಚಿವ ಡಾ. ಎಸ್.ಜಿ.ಡೊಳ್ಳೇಗೌಡರ್, ಡೀನ್ ಡಾ. ಲಕ್ಷ್ಮೀ ಪಾಟೀಲ್ ಮಾಕಾ, ಕುಲಸಚಿವ (ಮೌಲ್ಯಮಾಪನ) ಡಾ. ಎಸ್.ಎಚ್.ಹೊನ್ನಳ್ಳಿ, ಹಣಕಾಸು ಅಧಿಕಾರಿ ಡಾ. ಕಿರಣ ಮಾಕಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್…
ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ…
ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…
ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…
ವಾಡಿ: ಮಾಜಿ ಪ್ರಧಾನಿ ಪಂಡೀತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಪ್ರಯುಕ್ತ ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.…