ಸುರಪುರ: ನಗರದಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರಕಾರಿ ನೌಕರರ ಭವನದ ಬಳಿಯಿರುವ ಘಟಕಕ್ಕೆ ಭೇಟಿ ನೀಡಿ ಜಲ ವೀಕ್ಷಣೆ ಮಾಡಿ ನಂತರ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡುತ್ತ ಮಾತನಾಡಿ,ತಾಲ್ಲೂಕಿನಲ್ಲಿ ಯಾವುದೆ ಗ್ರಾಮದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ನಿಗಾವಹಿಸಿ.ಅಲ್ಲದೆ ಅನೇಕ ಗ್ರಾಮಗಳಲ್ಲಿರುವ ಶುಧ್ಧ ಕುಡಿಯುವ ನೀರಿನ ಘಟಕಗಳು ಬಂದಾಗಿರುವ ಬಗ್ಗೆ ದೂರುಗಳಿವೆ ಅವುಗಳನ್ನು ರಿಪೇರಿ ಮಾಡಿಸಿ ಜನತೆಗೆ ಕುಡಿಯಲು ನೀರು ಒದಗಿಸುವಂತೆ ತಿಳಿಸಿದರು.
ನಗರದಲ್ಲಿಯೂ ಕೂಡ ಇರುವ ಯಾವುದೆ ಘಟಕವು ಬಂದಾಗದಂತೆ ನೋಡಿಕೊಳ್ಳಿ.ಜನರು ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುಂಜಾಗ್ರತೆ ಕ್ರಮವಹಿಸಿ.ಶುಧ್ಧ ಕುಡಿಯುವ ನೀರು ಒದಗಿಸಲು ಮೊದಲು ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ತಾಲ್ಲೂಕಿನ ವಾಗಣಗೇರಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತುಂಬಾ ಇದ್ದು ಅಲ್ಲಿಗೂ ಭೇಟಿ ನೀಡಿ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಮನವಿ ಮಾಡಿಕೊಂಡರು.
ನಂತರ ದೇವರಗೋನಾಲ ಮತ್ತು ಕಿರದಹಳ್ಳಿ ಗ್ರಾಮಗಳಲ್ಲಿನ ಶುಧ್ಧ ಕುಡಿಯುವ ನೀರಿನ ಘಟಕಗಳ ಭೇಟಿಗೆ ತೆರಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಇಂಜಿನಿಯರಿಂಗ್ ಉಪ ವಿಭಾಗದ ಕುಡಿಯುವ ನೀರು ಸರಬರಾಜು ಇಲಾಖೆಯ ಹನುಮಂತಪ್ಪ ಅಂಬಲಿ,ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬರೇಶ ಹಾಗು ಇತರೆ ಅಧಿಕಾರಿಗಳಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…