ಬಿಸಿ ಬಿಸಿ ಸುದ್ದಿ

ಕಲಬುರಗಿ ಸ್ಮಾರ್ಟ್ ಸಿಟೀ ಎನ್ನುವುದು ಸಿಎಂ ತೋರಿಸುವ ಹಗಲ ನಕ್ಷತ್ರ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ ಕಲಬುರಗಿ ನಗರ ಸ್ಮಾರ್ಟ್ ಸಿಟೀ ಮಾಡಲು 1685 ಕೋಟಿ ರೂ. ಬಿಡುಗಡೆ ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿ ತಿಂಗಳೇ ಕಳೆದು ಹೋಗಿದೆ. ಇದರಿಂದಾಗಿ ಕಲ್ಯಾಣ ಕರ್ನಾಟಕದ ಜನರಿಗೆ ಮಾನ್ಯ ಸಿದ್ದರಾಮಯ್ಯನವರು ಹಗಲಿನಲ್ಲಿ ನಕ್ಷತ್ರ ತೋರಿಸುತ್ತಿದ್ದಾರೆಯೇ ಎಂಬ ಸಂಶಯ ಮೂಡಿತ್ತಿದೆ ಎಂದು ಬಿಜೆಪಿಯ ಕಲಬುರಗಿ ನಗರ ಓಬಿಸಿ ಮೋರ್ಚಾದ ನಗರಾಧ್ಯಕ್ಷ ದೇವಿಂದ್ರ ದೇಸಾಯಿ ಕಲ್ಲೂರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ನಗರದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕೇವಲ ನಾಮಕವಾಸ್ತೆ ಎಂಬಂತೆ ಸಚಿವ ಸಂಪುಟ ಸಭೆ ನಡೆಸಿದರು.

ಸಭೆಯಲ್ಲಿ ಯಾವುದೇ ಗಂಭೀರವಾದ ವಿಷಯಗಳ ಕುರಿತು ಚರ್ಚೆ ಮಾಡಲಿಲ್ಲ ಎನ್ನುವದು ಅವರ ಹೇಳಿಕೆಯಿಂದಲೇ ತಿಳಿಯುತ್ತದೆ. ಇನ್ನೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇವಲ ಸಭೆ ಸಮಾರಂಭಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಒಂದು ದಿನವು ನಗರ ಸಂಚಾರ ಮಾಡಲಿಲ್ಲ. ನಗರದಲ್ಲಿ ರಸ್ತೆಗಳು ಹಾಳಾಗಿ ಕೆಟ್ಟು ಕೆರಹಿಡಿದಿವೆ. ಜಿಲ್ಲಾದ್ಯಂತದ ರಸ್ತೆಗಳ ಗತಿ ಏನು? ಕೇವಲ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಮುಂದೆ ಮಾತ್ರ ದರ್ಪ ಎನ್ನುವಂತಾಗಿದೆ ಅವರದು. ದರ್ಪದಿಂದ ಅಧಿಕಾರ ಮಾಡಿದಂತಯೇ ಅಭಿವೃದ್ಧಿಯನ್ನು ಮಾಡಿ ದರ್ಪ ತೋರಿಸಲಿ ಎನ್ನುವದು ನಮ್ಮ ಸವಾಲಾಗಿದೆ.

ಕಲ್ಯಾಣ ಪಥ ಎಂದು ಮುಖ್ಯಂತ್ರಿಗಳು ಹೇಳಿದ್ದಾರೆ. ಆದರೆ ಕಲ್ಯಾಣ ಕರ್ನಾಟಕದಲ್ಲಿ ಇದುವರೆಗೆ ಯಾವ ಜಿಲ್ಲೆಯಲ್ಲಿ ಕಲ್ಯಾಣ ಪಥದ ಕುರಿತು ಒಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿಲ್ಲ. ಕಲ್ಯಾಣ ಪಥದ ರಥವು ಸಿಎಂ ಕುರ್ಚಿ ಉಳಿಸಿಕೊಳ್ಳುವಲ್ಲಿ ನಿರವಾಗಿದೆಯೇ? ಎನ್ನುವದು ರಾಜ್ಯ ಜನತೆಗೆ ಕಾಣುತ್ತಿದೆ.

ಮಹಾತ್ಮ ಗಾಂಧಿ ವಿಕಾಸ ಯೋಜನೆಯಡಿಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಗೆ 200 ಕೋಟಿ ರೂ. ಒದಗಿಸಲು ಸಿಎಂ ರಿಂದ ಹೇಳಿಕೆ ನೀಡಲಾಗಿದೆ. ಮಹಾನಗರ ಪಾಲಿಕೆಯಲ್ಲಿನ ಅಧಿಕಾರಿಗಳು ಅತ್ಯಂತ ಭ್ರಷ್ಟರು ಎನ್ನವುದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುವ ಮಾತನಾಗಿದೆ. ಬಿಜೆಪಿ ಸರ್ಕಾರವು ಅಧಿಕಾರದಲ್ಲಿರುವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗಿತ್ತು. ಅದರಲ್ಲಿ ಮಹಾನಗರ ಪಾಲಿಕೆಯಿಂದ ರಸ್ತೆ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ನೀಡಲಾಗಿದೆ ಎನ್ನಲಾಗಿದೆ. ಆದರೆ ಭ್ರಷ್ಟ ಅಧಿಕಾರಿಗಳಿಂದಾಗಿ ನಗರದಲ್ಲಿನ ಯಾವ ರಸ್ತೆಗಳು ಕೂಡ ಇಂದೂ ಅಭಿವೃದ್ಧಿಯಾಗಿಲ್ಲ.

ರಸ್ತೆಗಳ ಅಭಿವೃದ್ಧಿಯ ಹೆಸರಲ್ಲಿ ಅಧಿಕಾರಿಗಳು ಕೊಳ್ಳೆ ಹೊಡೆದಿದ್ದಾರೆ ಎಂಬ ಮಾತುಗಳು ಎಲ್ಲರಿಗೂ ತಿಳಿದ ವಿಷಯವಾಗಿದೆ. ಭ್ರಷ್ಟ ಅಧಿಕಾರಿಗಳೊಂದಿಗೆ ಕಾಂಗ್ರೆಸ್‍ನವರು ಕೈಜೋಡಿಸಿದ್ದಾರೆ ಎನ್ನುವ ಸಂಶಯ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಅವರ ತಮ್ಮ ಹೇಳಿಕೆ ಮುಖಾಂತರ ವ್ಯಕ್ತ ಆಕ್ರೋಶ ಪಸಿಡಿದ್ದಾರೆ.

ಕೊಪ್ಪಳದ ಅಂಜನಾದ್ರಿ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಅಭಿವೃದ್ಧಿ ಪಡಿಸಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಕೂಡ ಸಿಎಂ.ಸಿದ್ದರಾಮಯ್ಯ ನವರು ಹೇಳಿ ಅದಕ್ಕಾಗಿ 100 ಕೋಟಿ ರೂ. ಬಿಡುಗಡೆಗೆ ಕ್ರಮಕೈಗೊಳ್ಳಲಾಗುದು ಎಂದು ಹೇಳಿದರು.

ಇದುವರೆಗೂ ನಯಾಪೈಸೆ ಕೂಡ ಬಿಡುಗಡೆ ಮಾಡಲಿಲ್ಲ. ಅಲ್ಲಿ ಅಂಜನಾದ್ರಿ ಬೆಟ್ಟಕ್ಕೆ ಬರವ ಪ್ರವಾಸಿಗರು ತುಂಬ ಕಷ್ಟ ಪಡುತ್ತಿದ್ದಾರೆ. ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿ ಅಭಿವೃದ್ಧಿ ಹೆಸರಲ್ಲಿ ಕಲ್ಯಾಣ ಕರ್ನಾಟಕ ಜನರಿಗೆ ಮಲತಾಯಿ ಧೋರಣೆಯನ್ನು ಸದಾ ಕಾಂಗ್ರೆಸ್ ಪಕ್ಷದವರು ತೋರಿತ್ತಾ ಬಂದಿದ್ದಾರೆ ಎನ್ನುತ್ತಾರೆ.

ಕೂಡಲೇ ಕೊಟ್ಟ ಮಾತಿಗೆ ಬದ್ಧರಾಗಿ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಬಿಜೆಪಿಯ ಬಿಜೆಪಿಯ ಕಲಬುರಗಿ ನಗರ ಓಬಿಸಿ ಮೋರ್ಚಾದ ನಗರಾಧ್ಯಕ್ಷ ದೇವಿಂದ್ರ ದೇಸಾಯಿ ಕಲ್ಲೂರÀ ಒತ್ತಾಯಸಿದಾರೆ.

emedialine

Recent Posts

ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಫಾರೂಕ್ ಮನ್ನೂರ್ ಮಕ್ಕಳೊಂದಿಗೆ ಜನ್ಮದಿನಾಚರಣೆ

ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್…

5 hours ago

ಜಾನಪದದಲ್ಲಿ ಮಾನವೀಯ ಮೌಲ್ಯಗಳು ಒಳಗೊಂಡಿದೆ: ಯಲ್ಲಪ್ಪ ನಾಯ್ಕೋಡಿ

ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…

7 hours ago

ರವಿ ಎನ್ ದೇಗಾಂವ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ

ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…

7 hours ago

ಕಲಬುರಗಿ; 10 ಕೃತಿಗಳಿಗೆ `ಅಮ್ಮ ಪ್ರಶಸ್ತಿ’

ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…

7 hours ago

ವಾಡಿ; ಮಕ್ಕಳ ದಿನಾಚರಣೆ ಸಂಭ್ರಮ

ವಾಡಿ: ಮಾಜಿ ಪ್ರಧಾನಿ ಪಂಡೀತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಪ್ರಯುಕ್ತ ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.…

7 hours ago

ಶಿಶುಪಾಲನಾ ಕೇಂದ್ರ. ಸ್ಥಾಪನೆ ಉದ್ಯೋಗಸ್ಥ ಮಹಿಳೆಯರಿಗೆ ಅನಕೂಲ

ಕಲಬುರಗಿ: ಸರಕಾರದಿಂದ ಸ್ಥಾಪನೆ ಆದ ಶಿಶುಪಾಲನಾ ಕೇಂದ್ರಗಳಿಂದ ಬೇರೆ ಕಡೆ ಕೆಲಸಕ್ಕೆ. ಹೋಗುವ ಮಹಿಳೆಯರಿಗೆ ತಮ್ಮ. ಮಕ್ಕಳನ್ನು. ಬಿಟ್ಟು. ಹೋಗಲು…

7 hours ago