ಕಲಬುರಗಿ: ಮನುಷ್ಯನ ಹುಟ್ಟು ಆಕಸ್ಮಿಕ ಸಾವು ನಿಶ್ಚಿತ. ಹುಟ್ಟು ಸಾವುಗಳ ನಡುವಿನ ಬದುಕು ಮುಖ್ಯ ಎಂದು ಪತ್ರಕರ್ತ- ಲೇಖಕ ಡಾ. ಶಿವರಂಜನ ಸತ್ಯಂಪೇಟೆ ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿಗಳ ಸಲಹೆಗಾರ ಆಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ ಅವರ 76ನೇ ಹುಟ್ಟು ಹಬ್ಬದ ನಿಮಿತ್ತ ಸಾಸಿರ ನಾಡು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಇಲ್ಲಿನ ಪ್ರಭುದೇವ ನಗರದ ನೀಲಕಂಠೇಶ್ವರ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಾಲಾಮಕ್ಕಳಿಗೆ ಬಸವಣ್ಣನವರ ವಚನ ಸುಧೆ ಕೈಪಿಡಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಲೋಕನಾಯಕ ಜಯಪ್ರಕಾಶ ನಾರಾಯಣ ಅವರ ಸಮಾಜವಾದಿ ಹಿನ್ನಲೆಯ ಪಾಟೀಲರು ಈಗಿನ ಕಾಲದ ಅಪರೂಪದ ರಾಜಕಾರಣಿ ಎಂದರು.
ಬಿ.ಆರ್. ಪಾಟೀಲ ಅವರ ಜನ್ಮದಿನ ನಿಮಿತ್ತ ಶಾಲಾ ಮಕ್ಕಳಿಗೆ ವಚನ ಸಾಹಿತ್ಯದ ಅರಿವು ಮೂಡಿಸಲು ವಚನಸುಧೆ ಕಿರು ಹೊತ್ತಿಗೆ ಕೊಡುವ ಕಾರ್ಯ ಮಾದರಿಯಾಗಿದ್ದು, ಕನ್ನಡಕ್ಕೆ ಸತ್ವ ತಂದುಕೊಟ್ಟ ವಚನ ಸಾಹಿತ್ಯ ವಿಶ್ವದ ಶ್ರೇಷ್ಠ ಸಾಹಿತ್ಯವಾಗಿದೆ ಎಂದು ಹೇಳಿದರು.
ಕಥೆಗಾರ ವಿಶ್ವನಾಥ ಭಕರೆ, ಗುತ್ತಿಗೆದಾರ ಪ್ರಭು ಪಾಣೇಗಾಂವ, ಪ್ರಮುಖರಾದ ನಾಗಣ್ಣ ನೀಲೂರೆ, ಪಂಡಿತರಾವ ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಡಾ. ರಾಜಶೇಖರ ಪಾಟೀಲ ಹೆಬಳಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಶಾಲೆಯ ಆಡಳಿತಾಧಿಕಾರಿ ಷಣ್ಮುಖಯ್ಯ ಸ್ವಾಮಿ ನಿರೂಪಿಸಿದರು. ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಸುಳ್ಳು ದೂರು ಕೊಟ್ಟಲ್ಲಿ 3 ವರ್ಷ ಜೈಲು ಶಿಕ್ಷೆ ಕಲಬುರಗಿ: ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಬೇಕಾದರೆ…
ಕಲಬುರಗಿ: ಕಲಬುರಗಿ ಜಿಲ್ಲೆ ಶರಣರ ಹೆಬ್ಬಾಗಿಲು. ಇಲ್ಲಿ ಅನೇಕ ಶರಣರು, ದಾಸರು ಬಾಳಿ ಬದುಕಿದ ನೆಲ. ಶಿಕ್ಷಣ ಮತ್ತು ದಾಸೋಹ…
ಧಾರವಾಡ: ಉತ್ತರ ಕರ್ನಾಟಕದಾದ್ಯಂತ ನಾಟಕ ಚಟುವಟಿಕೆಗಳನ್ನು ನಿರಂತರ ನಡೆಸಿ ರಂಗಲೋಕವನ್ನು ಜೀವಂತವಾಗಿರಿಸಲು ಬದ್ಧವಾಗಿದ್ದೇನೆಂದು ಖ್ಯಾತ ನಟ, ನಿರ್ದೇಶಕ ರಾಜು ತಾಳಿಕೋಟೆ…
ಕಲಬುರಗಿ : ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುವುದರಿಂದ ಪಾಲಕರು ತಮ್ಮ ಮಕ್ಕಳನ್ನು ಕೇವಲ ಅಂಕದ ಬೆನ್ನ ಹಿಂದೆ…
ಕಲಬುರಗಿ; ನಗರದ ಶ್ರೀ ಶರಣಬಸವೇಶ್ವರ ಪುಣ್ಯಕ್ಷೇತ್ರದ ದಾಸೋಹ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ…
ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್…