ಹೈದರಾಬಾದ್ ಕರ್ನಾಟಕ

ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಪತ್ರಿಕಾ ರಂಗದ ಪಾತ್ರ ಅನನ್ಯ: ಡಾ.ಶಿವರಂಜನ ಸತ್ಯಂಪೇಟೆ

ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಸಾಧಕ-ಬಾಧಕಗಳನ್ನು ನಾಗರಿಕರಿಗೆ ಮುಟ್ಟಿಸುವ ಕಾರ್ಯ ಮಾಡುವ ಪತ್ರಿಕಾ ರಂಗವು ನಾಲ್ಕನೇ ರಂಗವಾಗಿ ಕಾರ್ಯನಿರ್ವಹಿಸುತ್ತಿದ್ದೆ. ನ್ಯಾಯ, ಸಮಾನತೆ, ಸಂವಿಧಾನದ ಆಶಯಗಳನ್ನು ರಕ್ಷಣೆ ಮಾಡುವ ಮೂಲಕ ಸದೃಢ ರಾಷ್ಟ್ರ ನಿರ್ಮಾಣದಲ್ಲಿ ತನ್ನದೇ ಆದ ಅನನ್ಯವಾದ ಪಾತ್ರವನ್ನು ನಿರ್ವಹಿಸುತ್ತಿದೆ ಎಂದು ಹಿರಿಯ ಪತ್ರಕತ, ಶರಣ ಚಿಂತಕ ಡಾ.ಶಿವರಂಜನ ಸತ್ಯಂಪೇಟೆ ಅಭಿಮತಪಟ್ಟರು.

ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‍ನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶನಿವಾರ ಸಂಜೆ ಏರ್ಪಡಿಲಾಗಿದ್ದ ‘ರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಪತ್ರಕರ್ತರಾಗುವುದು, ಪತ್ರಿಕೆ ನಡೆಸುವುದು ಸಾಹಸದ ಕೆಲಸವಾಗಿದೆ. ಬಿಡುವಿಲ್ಲದ ಒತ್ತಡದ ಬದುಕು ಪತ್ರಕರ್ತರದಾಗಿದೆ. ಮೋಬೈಲ್ ಸೇರಿದಂತೆ ಮತ್ತಿತರ ಸಾಧನಗಳನ್ನು ವೀಕ್ಷಣೆ ಮಾಡಿದರು ಕೂಡಾ, ಭೌತಿಕವಾಗಿ ಪತ್ರಿಕೆಗಳನ್ನು ಓದುವುದರಿಂದ ಸಿಗುವ ತೃಪ್ತಿ ಸಿಗುವುದಿಲ್ಲ. ಪತ್ರಿಕೆಗಳನ್ನು ಶಾಶ್ವತ ದಾಖಲೆಯಾಗಿವೆ. ಮತ್ತೆ ಯಾವಾಗ ಬೇಕಾದಾಗ ನಮಗೆ ಅದರಿಂದ ಮಾಹಿತಿ ದೊರೆಯುತ್ತದೆ.

ಎಲ್ಲರು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆಗಳು ನಿಖರ ಮಾಹಿತಿ ಮತ್ತು ಶಾಶ್ವತ ದಾಖಲೆ ಒದಗಿಸುವದರಿಂದ ಎಲೆಕ್ಟ್ರಾನಿಕ್ಸ್ ಮತ್ತು ಸಾಮಾಜಿಕ ಮಾಧ್ಯಮಗಳ ಹಾವಳಿಯಲ್ಲಿಯೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿವೆ ಎಂಬುದಕ್ಕೆ ಓದುಗರ ಸಂಖ್ಯೆ ಕಡಿಮೆಯಾಗದಿರುವುದೇ ಸಾಕ್ಷಿಯಾಗಿದೆ ಎಂದು ಮಾರ್ಮಿಕವಾಗಿ ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ, ಜುಲೈ-1ರಂದು ‘ವಿಶ್ವ ಪತ್ರಿಕಾ ದಿನಾಚರಣೆ’ ಮತ್ತು ‘ನವ್ಹೆಂಬರ್-16ನ್ನು ‘ರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಆಚರಿಸಲಾಗುತ್ತದೆ. 1966ರ ನವ್ಹೆಂಬರ್ 16ರಂದು ಸ್ಥಾಪನೆಯಾದ ‘ಭಾರತೀಯ ಪತ್ರಿಕಾ ಮಂಡಳಿ’ ಸವಿನೆನಪಿಗಾಗಿ ‘ರಾಷ್ಟ್ರೀಯ ಪತ್ರಿಕಾ ದಿನಾಚರಣೆ’ಯನ್ನು ಆಚರಣೆ ಮಾಡಲಾಗುತ್ತದೆ. ಪತ್ರಿಕಾ ರಂಗದ ಕೊಡುಗೆಯನ್ನು ಚಿಂತನ ಮಾಡುವುದು, ಪತ್ರಿಕೆಗಳ ಮಹತ್ವವವನ್ನು ವಿವರಿಸುವುದು ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಹಗಲು-ರಾತ್ರಿಯೆನ್ನದೇ ಸೇವೆ ಸಲ್ಲಿಸುವ ಪತ್ರಕರ್ತರಿಗೆ ಸಮಾಜದ ಪ್ರೋತ್ಸಾಹ, ಸಹಕಾರ ಅಗತ್ಯವಾಗಿದೆ ಎಂದರು.

ವಿದ್ಯಾರ್ಥಿಗಳು ಕೇವಲ ಪಠ್ಯದ ಅಧ್ಯಯನಕ್ಕೆ ಮಾತ್ರ ಸೀಮಿತವಾಗಬಾರದು. ರಾಜಕೀಯ, ಸಾಮಾಜಿಕ, ಧಾರ್ಮಿಕ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ, ಪ್ರಚಲಿತ ಸಂಗತಿಗಳು ಸೇರಿದಂತೆ ಅನೇಕ ವಿಷಯಗಳ ಜ್ಞಾನದ ಕಣಜಗಳಾದ ಪತ್ರಿಕೆಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಅಧ್ಯಯನ ಮಾಡುವುದರಿಂದ ನಿಮ್ಮ ವ್ಯಕ್ತಿತ್ವ ವಿಕಾಸವಾಗಿ ಉನ್ನತವಾದ ಸಾಧನೆ ಮಾಡಲು ಪತ್ರಿಕೆಗಳು ಪೂರಕವಾಗಿ ಕಾರ್ಯನಿರ್ವಹಿಸುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗೆಪ್ಪಾ ಎಸ್.ಬಿರಾದಾರ, ಪತ್ರಕರ್ತ ವಿಠಲ ಚಿಕಣಿ, ಸಮಾಜ ಸೇವಕ ಮೈಲಾರಿ ದೊಡ್ಡಮನಿ, ಶಿಕ್ಷಕರಾದ ನಿಲೊಫರ್ರ ಶೇಖ್, ಐಶ್ವರ್ಯ ಬಿರಾದಾರ, ಪೂಜಾ ಪಂಚಾಳ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

emedialine

Recent Posts

ಕೋವಿಡ್‌ನಿಂದ ಮಂಕಾಗಿದ್ದ ರಂಗ ಚಟುವಟಿಕೆಗಳು ಚೇತರಿಸಿಕೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆ

ರಂಗದಂಗಳದಲ್ಲಿ ಮಾತುಕತೆಯಲ್ಲಿ ರಂಗಕರ್ಮಿ ಸಾಂಬಶಿವ ದಳವಾಯಿ ಹೇಳಿಕೆ ಕಲಬುರಗಿ: ಕೋವಿಡ್‌ನಿಂದ ರಂಗ ಚಟುವಟಿಕೆಗಳು ಮಂಕಾಗಿದ್ದವು. ಇದೀಗ ನಿಧಾನಗತಿಯಲ್ಲಿ ಅವು ಚೇತರಿಕೆ…

2 hours ago

ರಾಸಯೋ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ : ಪ್ರೊ. ಬಾಬಣ್ಣ ಹೂವಿನಬಾವಿ

ಕಲಬುರಗಿ : ಭಾರತ ದೇಶ ಪ್ರಗತಿಯಲ್ಲಿ ಯುವಶಕ್ತಿ ಸಹಭಾಗಿತ್ವ ಬಹಳ ಮುಖ್ಯ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸಾಗಿತ್ತು.…

4 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮ

ಕಲಬುರಗಿ: ನಗರದ ಪತ್ರಿಕಾ ಭವನದಲ್ಲಿ ಜ್ಞಾನದೀಪ ನೃತ್ಯ ಕಲಾ ಸಂಸ್ಥೆ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮದಲ್ಲಿ…

5 hours ago

ಜಾನಪದ ನೃತ್ಯೋತ್ಸವ ಕಾರ್ಯಕ್ರಮ

ಕಲಬುರಗಿ: ನಗರದ ಮಾತಾ ಮಾಣಿಕೇಶ್ವರಿ ಕಾಲೋನಿಯಲ್ಲಿರುವ ಶ್ರೀ ಕೋಕಿಲ ಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ನವಚೇತನ ಸಾಂಸ್ಕøತಿಕ ಕಲಾ ಸಂಸ್ಥೆ ವತಿಯಿಂದ …

5 hours ago

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸಾಹಿತಿ ಡಾ.ಹನುಮಂತರಾವಗೆ ಅಭಿನಂದನ ಸಮಾರಂಭ

ಕಲಬುರಗಿ: ನಮ್ಮ ತಾಲೂಕಿನ ಹೆಮ್ಮೆಯ ಹೋರಾಟಗಾರ,ಕವಿ,ಸಾಹಿತಿಯಾದ ಡಾ.ಹನುಮಂತರಾವ ಅವರಿಗೆ ಪ್ರಶಸ್ತಿ ಲಭಿಸಿದ್ದು ಸಂತೋಷ ತಂದಿದೆ ಅವರಿಗೆ ಪ್ರಶಸ್ತಿ ದೊರಕಿದ್ದು ಸರ…

5 hours ago

ಕಲಬುರಗಿ: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಲಬುರಗಿ: ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಕರ್ನಾಟಕ ಸಂಘಟನಾ ವೇದಿಕೆ (ಕನ್ನಡಿಗರ ಶಕ್ತಿ) ವತಿಯಿಂದ ಕನ್ನಡ ರಾಜ್ಯೋತ್ಸವ ನಿಮಿತ್ಯವಾಗಿ ಕನ್ನಡದ ಹಬ್ಬ…

6 hours ago