ಕಲಬುರಗಿ,ನ.16: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕದ 2024-29 ಅವಧಿಯ ಜಿಲ್ಲಾ ಶಾಖೆಗಳ ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಆಯ್ಕೆಗೆ ಡಿಸೆಂಬರ್ 4 ರಂದು ಚುನಾವಣೆ ನಡೆಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹೆಚ್. ವೀರಭದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೆಂಬರ್ 19 ರಿಂದ 27ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆ ವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ. ನವೆಂಬರ್ 28 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಸಿ ಅಂದೇ ಕ್ರಮಬದ್ಧ ಅರ್ಹ ಅಭ್ಯರ್ಥಿಗಳ ಪ್ರಕಟಣೆ ಹೊರಡಿಸಲಾಗುತ್ತದೆ. ಉಮೇದುವಾರಿಕೆ ವಾಪಸ್ ಪಡೆಯಲು ನವೆಂಬರ್ 29ರ ಸಂಜೆ 4.30 ಗಂಟೆ ವರೆಗೆ ಅವಕಾಶವಿರುತ್ತದೆ. ಉಮೇದುವಾರಿಕೆ ವಾಪಸ್ಸು ಪಡೆದ ನಂತರ ಚುನಾವಣಾ ಕಣದಲ್ಲಿ ಉಳಿದ ಅಭ್ಯರ್ಥಿಗಳ ಹೆಸರುಗಳನ್ನು ಸಂಜೆ 5.30 ಗಂಟೆಯ ನಂತರ ಪ್ರಕಟಿಸಲಾಗುವುದು.
ಚುನಾವಣೆಯ ಮತದಾನವು ಡಿಸೆಂಬರ್ 4 ರಂದು ಬೆಳಿಗ್ಗೆ 9 ರಿಂದ ಸಾಯಂಕಾಲ 4 ಗಂಟೆ ವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಶಾಖೆಯ ಸಭಾಂಗಣದಲ್ಲಿ ನಡೆಯಲಿದೆ. ಮತದಾನ ಮುಕ್ತಾಯದ ನಂತರ ಅಂದೇ ಮತ ಎಣಿಕೆ ಕಾರ್ಯ ನಡೆಸಿ ಫಲಿತಾಂಶ ಘೋಷಿಸಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ: ಕಾವ್ಯ ಅನ್ನುವುದು ಸುಲಭವಾಗಿ ಒಲಿಯುವುದಿಲ್ಲ. ಅದು ತಪಸ್ಸು ಇದ್ದ ಹಾಗೆ. ಕವಿಗಳಿಗೆ ಅಧ್ಯಯನ ಹಾಗೂ ಶಬ್ದ ಭಂಡಾರ ಅಗತ್ಯ…
ಕಲಬುರಗಿ: ನಗರದ ರಂಗಾಯಣದಲ್ಲಿ ಮನಸ್ವಿ ಸಾಂಸ್ಕøತಿಕ ಹಾಗೂ ನಾಟ್ಯ ಕಲಾವಿದರ ಸಂಘದ ವತಿಯಿಂದ ಜನಪದ ನೃತ್ಯೋತ್ಸವ ಕಾರ್ಯಕ್ರಮವನ್ನು ನೃತ್ಯಕಲಾವಿದ ಚಾಂದ…
ಕಲಬುರಗಿ: ನಗರದ ಶಾಹಬಜಾರಲ್ಲಿರುವ ಶುಕ್ಲಾ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಷಾ ಎಜುಕೇಶನಲ್ ಅಂಡ್ ಚಾರಿಟೇಬಲ್…
ಕಲಬುರಗಿ; ನವೆಂಬರ್ 20 ರಂದು ಕರ್ನಾಟಕದಲ್ಲಿ ಮಧ್ಯ ಮಾರಾಟ ಮಳಿಗೆಗಳ ಬಂದ ಕರೆಗೆ ಬೆಂಬಲವಿಲ್ಲ ಎಂದು ಡಾ. ಬಿ.ಆರ್. ಅಂಬೇಡ್ಕರ್…
ಕಲಬುರಗಿ: ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವದಂಗವಾಗಿ ಕವಿಗೋಷ್ಠಿ,…
ವಾಡಿ: ಕಲಬುರಗಿ ಸಾಂಸ್ಕøತಿಕ ಪ್ರತಿಷ್ಠಾನದ ವತಿಯಿಂದ ಕೊಡಲಾಗುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಈ ವರ್ಷ ಕನ್ನಡ ಸಾಹಿತ್ಯ…