ಬಿಸಿ ಬಿಸಿ ಸುದ್ದಿ

ಕನಕದಾಸರ ಬದುಕಿನ ಮಜಲುಗಳು ಯುವಸಮುದಾಯಕ್ಕೆ ತಲುಪಲಿ : ಸಾಹಿತಿ ಮಾರ್ತಾಂಡಪ್ಪ ಕತ್ತಿ

ಕಲಬುರಗಿ: ಕನಕದಾಸರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿರಲಿಲ್ಲ. ಜಾತಿ ಭೇದ ದೂರ ಮಾಡಿ ಸಮಾಜದಲ್ಲಿ ಸರ್ವರೂ ಸಮಾನರು ಎಂಬ ಸಂದೇಶ ಜಗತ್ತಿಗೆ ಕೊಟ್ಟ ಮಹಾನ್ ಕೀರ್ತಿನಕಾರ ಕನಕದಾಸರ ಆದರ್ಶ ಯುವ ಪೀಳಿಗೆಗೆ ಮಾದರಿ. ಅವರ ಬದುಕಿನ ಮಜಲುಗಳನ್ನು ಯುವ ಸಮುದಾಯಕ್ಕೆ ತಲುಪಿಸುವ ಕಾರ್ಯ ಆಗಬೇಕು ಎಂದು ಕಸಾಪ ತಾಲೂಕ ಗೌರವ ಕಾರ್ಯದರ್ಶಿ, ಸಾಹಿತಿ ಮಾರ್ತಾಂಡಪ್ಪ ಕತ್ತಿ ಹೇಳಿದರು.

ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಧಾರವಾಡ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಧಾರವಾಡ ಇವರ ಸಹಯೋಗದಲ್ಲಿ ಕನಕ ಜಯಂತಿ ಅಂಗವಾಗಿ ಕಸಾಪ ಸಭಾಭವನದಲ್ಲಿ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಕನಕದಾಸರ ಬದುಕಿನ ಕುರಿತು ಉಪನ್ಯಾಸ ಮಾಡಿ ಮಾತನಾಡುತ್ತಾ ಅಸಮಾನತೆ ತುಂಬಿದ್ದ ಸಮಾಜದಲ್ಲಿ, ‘ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ’ ಎಂದು ಜನರನ್ನು ಎಚ್ಚರಿಸಿದ ಕನಕದಾಸರು ತಮ್ಮ ಜಾಗೃತ ಕೀರ್ತನೆಗಳ ಮೂಲಕ ಸಾಮಾಜಿಕ ಪರಿವರ್ತನೆಗೆ ಕಾರಣರಾದರು. ಭಕ್ತಿ ಮಾರ್ಗದತ್ತ ಜನರನ್ನು ಕೊಂಡೊಯ್ದ ಕನಕದಾಸರ ಮೌಲ್ಯಯುತ ಕೀರ್ತನೆಗಳ ಸಾರವನ್ನು ಎಲ್ಲರೂ ಅರಿಯಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಿ ಮಾತನಾಡಿ ಅಸಮಾನತೆ ವಿರುದ್ಧ ಹೋರಾಡಿದ ದಾರ್ಶನಿಕರ ಪಟ್ಟಿಗೆ ಕನಕದಾಸರು ಸೇರುತ್ತಾರೆ. ಇವರು ಸಮಾನತೆಗಾಗಿ ಇಡೀ ಬದಕನ್ನೆ ಸವೆಸಿದವರು ಅವರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಂಡು ಬದುಕಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ ಜಿನದತ್ತ ಹಡಗಲಿ ಮತ್ತು ಕೆ ಎಸ್ ಕೌಜಲಗಿ, ತಾಲೂಕಾ ಕಸಾಪ ಗೌರವ ಕಾರ್ಯದರ್ಶಿ ಉಮಾ ಬಾಗಲಕೋಟ ಇದ್ದರು. ಗಾಯಕರಾದ ಬಸವರಾಜ ಗೊರವರ,ಪ್ರೇಮಾನಂದ ಶಿಂಧೆ, ಮೇಘಾ ಹುಕ್ಕೇರಿ ಕೀರ್ತನೆಗಳನ್ನು ಪ್ರಸ್ತುತ ಪಡಿಸಿದರು. ತಾಲೂಕಾ ಅಧ್ಯಕ್ಷರಾದ ಮಹಾಂತೇಶ ನರೇಗಲ್ಲ ನಿರೂಪಿಸಿದರು, ಪ್ರಮೀಳಾ ಜಕ್ಕಣ್ಣವರ ಸ್ವಾಗತಿಸಿದರು. ಉಮಾ ಬಾಗಲಕೋಟ ವಂದಿಸಿದರು.

ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಸಂಘಟಕರಾದ ಎಫ್ ಬಿ ಕಣವಿ, ಶಾಂತವೀರ ಬೇಟಗೇರಿ, ಡಾ ಶರಣಮ್ಮಗೋರೆಬಾಳ, ಎಸ್ ಎಮ್ ದಾನಪ್ಪಗೌಡರ ಸುಮಂಗಲಾ ದಂಡಿನ, ಗೀತಾ ಕುಲಕರ್ಣಿ, ಗಂಗಾಧರ ಗಾಡದ, ಉದಯಚಂದ ದಿಂಡವಾರ, ಎಮ್ ಪಿ ಕುಂಬಾರ ,ಸಿದ್ದರಾಮ ಹಿಪ್ಪರಗಿ , ಗೀತಾ ಕುಲಕರ್ಣಿ, ಸುನಂದಾ ಯಡಾಲ್,ಮುಂತಾದವರು ಇದ್ದರು.

vikram

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

14 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago