ಕಲಬುರಗಿ: ಸುದ್ದಿ ಮಾಧ್ಯಮಗಳ ಮೇಲೆ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸಂಪೂರ್ಣ ನಿಯಂತ್ರಣ ಸಾಧಿಸಿದ್ದು, ಮಹಾರಾಷ್ಟ್ರ ಹಾಗೂ ಹರಿಯಾಣಾ ರಾಜ್ಯಗಳಲ್ಲಿನ ಚುನಾವಣೆ ಕುರಿತು ಸುದ್ದಿ ಮಾಧ್ಯಮಗಳು ಬಿತ್ತರಿಸುತ್ತಿರುವ ಸಮೀಕ್ಷಾ ವರದಿಗಳು ಪೊಳ್ಳಾಗಿವೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಎಐಸಿಸಿಐ ಕಾರ್ಯದರ್ಶಿಗಳೂ ಆಗಿರುವ ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಡಾ. ಮಲ್ಲಿಕಾರ್ಜುನ್ ಖರ್ಗೆಯವರು ಇಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಮಟ್ಟದಿಂದ ಹಿಡಿದು ಸುದ್ದಿ ವಾಹಿನಿಯವರೆಗೆ ಬಿಜೆಪಿಯು ಪರೋಕ್ಷವಾಗಿ ನಿಯಂತ್ರಣ ಸಾಧಿಸಿದೆ ಎಂದು ಗಂಭೀರ ಆರೋಪ ಮಾಡಿದರು.
೪೦ರಿಂದ ೫೦ ಜನ ಉದ್ಯಮಿಗಳ ಮೂಲಕ ರಾಷ್ಟ್ರೀಯ ಸುದ್ದಿ ವಾಹಿನಿಗಳನ್ನು ಬಿಜೆಪಿ ತನ್ನ ನಿಯಂತ್ರಣ ಇಟ್ಟುಕೊಂಡಿದೆ. ಅದೇ ರೀತಿ ಕೇಬಲ್‌ಗಳ ಮೂಲಕ ಜಿಲ್ಲಾ ಮಟ್ಟದಲ್ಲಿಯೂ ಸಹ ಸುದ್ದಿ ಮಾಧ್ಯಮಗಳನ್ನು ಪರೋಕ್ಷವಾಗಿ ನಿಯಂತ್ರಿಸುತ್ತಿವೆ. ಹಾಗಾಗಿ ಸುದ್ದಿ ವಾಹಿನಿಗಳಲ್ಲಿ ಬಂದ ಚುನಾವಣಾ ಸಮೀಕ್ಷೆಗಳು ಪೊಳ್ಳಾಗಲಿವೆ ಎಂದು ಅವರು ಹೇಳಿದರು.
ಮಹಾರಾಷ್ಟ್ರದಲ್ಲಿನ ಸ್ಥಿತಿಯೇ ಈಗ ಬೇರೆಯಾಗಿದೆ. ಮುಂಬಯಿ ಸುತ್ತಮುತ್ತ ಹಾಗೂ ಮಹಾರಾಷ್ಟ್ರದಲ್ಲಿ ಸುಮಾರು ೨೨೦೦ ಉದ್ಯಮಗಳು ಮುಚ್ಚಿ ಹೋಗಿವೆ. ಕಳೆದ ಐದು ವರ್ಷಗಳಲ್ಲಿ ಫಡ್ನವೀಸ್ ನೇತೃತ್ವದ ಬಿಜೆಪಿ ಸರ್ಕಾರವು ಯಾವುದೇ ಸಾಧನೆ ಮಾಡಿಲ್ಲ. ಹೀಗಾಗಿ ಅಲ್ಲಿ ಬಿಜೆಪಿ ಸರ್ಕಾರದ ವಿರೋಧಿ ಅಲೆ ಹೆಚ್ಚಾಗಿದೆ ಎಂದು ಅವರು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ಮಾಡುವ ಸಂದರ್ಭದಲ್ಲಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸದೇ ರಾಷ್ಟ್ರೀಯ ಹಾಗೂ ಅಂತರ್ರಾಷ್ಟ್ರೀಯ ವಿಷಯಗಳನ್ನು ಪ್ರಸ್ತಾಪಿಸುತ್ತಾರೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕಲು ಇಂತಹ ವಿಚಾರಗಳನ್ನು ಮಹಾರಾಷ್ಟ್ರದಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿನ ಜನರ ಹಿತವನ್ನು ಕುರಿತು ಮಾತನಾಡದೇ ಜಮ್ಮು ಮತ್ತು ಕಾಶ್ಮೀರದಲ್ಲಿನ ೩೭೦ ರದ್ದು ವಿಷಯದ ಕುರಿತು ಪ್ರಚಾರ ಮಾಡುತ್ತಾರೆ. ಇದು ಸರಿಯಲ್ಲ. ರಾಷ್ಟ್ರೀಯ ವಿಷಯದ ಮೇಲೆ ರಾಜ್ಯ ವಿಧಾನಸಭಾ ಚುನಾಔಣೆಯನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಅವರು ಪ್ರಧಾನಿ ವಿರುದ್ಧ ಹರಿಹಾಯ್ದರು.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವು ಜಾತ್ಯಾತೀತ ರಾಷ್ಟ್ರೀವಾದಿ ಕಾಂಗ್ರೆಸ್ ಪಕ್ಷ ಹಾಗೂ ಕಮ್ಯುನಿಸ್ಟ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ. ಜನ ವಿರೋಧಿ ಬಿಜೆಪಿ ಸರ್ಕಾರವನ್ನು ಈ ಬಾರಿಯ ಚುನಾವಣೆಯಲ್ಲಿ ಕಿತ್ತುಗೆದು ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರವು ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಹಾದಾಯಿ ನೀರಿನ ಹೋರಾಟದ ಕುರಿತು ರಾಜ್ಯಪಾಲರು ಮನವಿಯನ್ನು ಸ್ವೀಕರಿಸಬೇಕಿತ್ತು ಎಂದು ಹೇಳಿದ ಅವರು, ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ನೀರು ಬಿಡುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ನಾನು ಈಗ ಪ್ರತಿಕ್ರಿಯಿಸುವುದಿಲ್ಲ. ಮಹಾರಾಷ್ಟ್ರ ಹಾಗೂ ಹರಿಯಾಣಾ ರಾಜ್ಯಗಳ ಚುನಾವಣೆಯ ನಂತರ ಕುರಿತು ಪ್ರತಿಕ್ರಿಯಿಸುತ್ತೇನೆ ಎಂದರು.
ವೀರ ಸಾವರ್ಕರ್ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ನೀಡಿದ ಹೇಳಿಕೆಗೂ ಸಹ ಖರ್ಗೆಯವರು ಪ್ರತಿಕ್ರಿಯಿಸಲು ನಿರಾಕರಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…