ಬಿಸಿ ಬಿಸಿ ಸುದ್ದಿ

ಜನಪದ ಸಂಸ್ಕøತಿಯಿಂದ ಸಾಮಾಜಿಕ ಸಾಮರಸ್ಯ

ಕಲಬುರಗಿ: ಶಿಷ್ಠ ಸಾಹಿತ್ಯಕ್ಕೆ ತಾಯಿಬೇರು, ಭಾರತದ ಭವ್ಯ ಪರಂಪರೆಯನ್ನು ಸಾರುವ ಜನಪದ ಸಂಸ್ಕøತಿ ಭಾರತೀಯರ ಜೀವಾಳ. ಆಧಿನಕರಣಕ್ಕೆ ಒಳಗಾಗಿ ನಮ್ಮತನ ಮರೆಯದೆ, ಜನಪದ ಕಲೆ, ಸಾಹಿತ್ಯ, ಸಂಸ್ಕøತಿ, ಪರಂಪರೆಯನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ಮುಂದಿನ ಜನಾಂಗಕ್ಕೆ ವರ್ಗಾಯಿಸಿದರೆ, ನಮ್ಮ ಬದುಕು ಸುಂದರ ಹಾಗೂ ಸಮೃದ್ಧವಾಗುತ್ತದೆ. ಜನಪದ ಸಂಸ್ಕøತಿಯ ಅಳವಡಿಕೆಯಿಂದ ಎಲ್ಲರೂ ಒಂದೇ ಎಂಬ ಭ್ರಾತೃತ್ವ ಭಾವನೆ ಮೂಡಿ ಸಾಮಾಜಿಕ ಸಾಮರಸ್ಯ ಮೂಡಲು ಸಾಧ್ಯವಿದೆ ಎಂದು ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ ಅಭಿಮತಪಟ್ಟರು.

ಜೇವರ್ಗಿ ಪಟ್ಟಣದ ಶಹಾಪುರ ರಸ್ತೆಯಲ್ಲಿನ ‘ನರೇಂದ್ರ ಪದವಿ ಪೂರ್ವ ಕಾಲೇಜ್’ನಲ್ಲಿ ‘ಕನ್ನಡ ಜಾನಪದ ಪರಿಷತ್’ನ ತಾಲೂಕಾ ಘಟಕದ ವತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ‘ಕನ್ನಡ ಜಾನಪದ ರಾಜ್ಯೋತ್ಸವ’ : ಕನ್ನಡ ಲೇಖಕ, ಉಪನ್ಯಾಸಕ, ಟಾಪರ್, ಜಾನಪದ ಕಲಾವಿದರಿಗೆ ಗೌರವ ಹಾಗೂ ಕಲಾ ಪ್ರದರ್ಶನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿಶೇಷ ಉಪನ್ಯಾಸ ನೀಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಶರಣಪ್ಪ ಸೈದಾಪುರ, ಜಾಗತೀಕರಣದ ಕಾಲಘಟ್ಟದ ಸವಾಲಿನ ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶದ ಮೂಲ ಸಂಸ್ಕøತಿ, ಪರಂಪರೆಯಾದ ಜಾನಪದ ಅಗತ್ಯವಾಗಿದೆ. ‘ಬದುಕಿಗಾಗಿ ಕಲೆ’ ಎಂಬುದು ಜನಪದವಾಗಿದೆ. ಕಟ್ಟಕಡೆಯ ವ್ಯಕ್ತಿ ಭಾವನೆಗಳು ಒಳಗೊಂಡಿದೆ. ಸಾಂಸ್ಕøತಿಕ ರಾಜಕಾರಣದಿಂದ ಜನಪದ ಪರಂಪರೆಗೆ ಧಕ್ಕೆಯಿದೆ ಎಂದು ಇದೇ ಸಂದರ್ಭದಲ್ಲಿ ಎಚ್ಚರಿಸಿದರು.

ಸತ್ಕಾರ ಸ್ವೀಕರಿಸಿ ಮಾತನಾಡಿದ ಲೇಖಕ ಜಗನಾಥ ಕಾವಲೆ, ಮಾನವನ ಉಗಮದೊಂದಿಗೆ ಜನಪದ ಹುಟ್ಟಿದ್ದು, ಅತ್ಯಂತ ಪ್ರಾಚೀನ ಪರಂಪರೆಯಾಗಿದೆ. ಇದು ಅರ್ಥಪೂರ್ಣ ಬದುಕಿಗೆ ಬೇಕಾದ ಎಲ್ಲಾ ಮೌಲ್ಯಗಳನ್ನು ಒಳಗೊಂಡಿದ್ದು, ಅದರ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಜಾಪ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ಬಿ.ಪಾಟೀಲ, ತಾಲೂಕಾಧ್ಯಕ್ಷ ದೇವೀಂದ್ರ ಬಿ.ಗುಡುರ್, ಕಾಲೇಜಿನ ಪ್ರಾಚಾರ್ಯ ದೇವಣಗೌಡ ಪಾಟೀಲ, ಉಪನ್ಯಾಸಕರಾದ ಮಲ್ಲಿಕಾರ್ಜುನ ಭಾಸಗಿ, ಶಿವಾನಂದ ಬಡಿಗೇರ್, ಬಸವರಾಜ ಕೆ.ಪಾಟೀಲ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಜಾನಪದ ಕಲಾವಿದರಾದ ರೇವಣಸಿದ್ದಪ್ಪ ಎಂ.ತಳವಾರ, ಪಂಚಯ್ಯಸ್ವಾಮಿ, ಕನ್ನಡ ಉಪನ್ಯಾಸಕ ರಾಯಣ್ಣ ಕಟ್ಟಿಮನಿ, ಎಸ್ಸೆಸ್ಸೆಲ್ಸಿ ಕನ್ನಡ ಟಾಪರ್ ಉಮಾದೇವಿ ಎಸ್., ಪಿಯುಸಿ ಟಾಪರ್ ಆಕಾಶ್ ಎಸ್. ಅವರಿಗೆ ಸತ್ಕರಿಸಿ, ಗೌರವಿಸಲಾಯಿತು. ನಂತರ ಕಲಾ ಪ್ರದರ್ಶನ ಜರುಗಿತು.

vikram

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago