ಕಲಬುರಗಿ: ತಾಲೂಕಿನ ಸೀತನೂರು ಗ್ರಾಮದಲ್ಲಿರುವ ಎರಡು ವಿದ್ಯುತ್ ಕಂಬಗಳು ಹಾಕಿದ್ದು ಅವುಗಳಿಗೆ ಕೂಡಲೇ ತಂತಿಯನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ನಂದಿಕೂರ ಗ್ರಾಮ ಪಂಚಾಯತ್ ಸದಸ್ಯ ಪವನಕುಮಾರ ವಳಕೇರಿ ಅವರ ನೇತೃತ್ವದಲ್ಲಿ ಸೀತನೂರು ಗ್ರಾಮದ ರೈತರು ಜೇಸ್ಕಾಂ ಗ್ರಾಮೀಣ ವಿಭಾಗದ ಕಾರ್ಯನಿರ್ವಹಕ ಅಭಿಯಂತರರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಗ್ರಾಮದ ರೈತರಿಗೆ ವಿದ್ಯುತ್ ಇರದ ಕಾರಣ ಬೆಳೆಗಳು ಬಾಡಿ ಹೋಗುತ್ತಿದ್ದು, ರೈತರು ಲೈನ್ ಮ್ಯಾನ್‌ಗಳಿಗೆ, ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಅನೇಕ ಬಾರಿ ಮೌಖಿಕವಾಗಿ ತಿಳಿಸಿದರೂ ಸಹ ಯಾವದೇ ಪ್ರಯೋಜನ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದ ರೈತರು ಅಲ್ಪ ಸ್ವಲ್ಪ ತರಕಾರಿ, ತೊಗರಿ ಬೆಳೆಗಳಿದ್ದು, ದನ ಕರುಗಳಿಗೆ ಮತ್ತು ಕುಡಿಯುವ ನೀರಿನ ತೊಂದರೆ ಎದುರಿಸುತ್ತಿದ್ದಾರೆ. ಕೂಡಲೇ ಕಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದರೆ ಸೀತನೂರು ಗ್ರಾಮದ ರೈತರಿಗೆ ಜೀವನ ನಿರ್ವಹಣೆ ಮಾಡಲು ಅನುಕೂಲವಾಗುತ್ತದೆ ಮತ್ತು ಸುಮಾರು 6 ತಿಂಗಳು ಕಳೆದರೂ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ ಎನ್ನುವಂತೆ ಪರಿಸ್ಥಿತಿಯಾಗಿದೆ ಎಂದರು.
ನಮ್ಮ ಬೇಡಿಕೆ ಈಡೇರದಿದ್ದರೆ ನ.25 ರಂದು ಬೆಳ್ಳಿಗೆ 11 ಗಂಟೆಗೆ ತಮ್ಮ ಕಚೇರಿ ಎದುರು ಧರಣಿ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಿಯೋಗದಲ್ಲಿ ಹೋರಾಟಗಾರ ಪವನಕುಮಾರ ವಳಕೇರಿ, ಗ್ರಾಮದ ರೈತರಾದ ಚಾಂದ್ ಪಟೇಲ್ ಮಾಲಿ, ರಜಾಕ್ ಜಮಾದಾರ್, ರಸುಲ್ ಸಾಬ್ ಹಡಗಿಲ್, ಯಲ್ಲಾಲಿಂಗ ಪೂಜಾರಿ, ಸಂಗಣ ಗೌಡ, ಮಹದೇವಪ್ಪ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…