ಕಲಬುರಗಿ: ನ.20 ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿನ ವಿಶೇಷ ಘಟಕ ಯೋಜನೆ-ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ಕಚೇರಿಗಳಲ್ಲಿ ಕ್ಷೇತ್ರ ಪ್ರಚಾರ ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿನ ಕಾರ್ಯನಿರ್ವಹಣೆ ಕುರಿತು ಒಂದು ವರ್ಷ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿ ನವೆಂಬರ್ 30ರ ರವೆಗೆ ವಿಸ್ತರಿಸಿದೆ ಎಂದು ಕಲಬುರಗಿ ಕಚೇರಿಯ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಅವರು ತಿಳಿಸಿದ್ದಾರೆ.
ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಯ ಓರ್ವ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಓರ್ವ ಅಭ್ಯರ್ಥಿಯನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆಗೆ ಅರ್ಜಿ ಆಹ್ವಾನಿಸಿ ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆ ದಿನಾಂಕವೆಂದು ಈ ಹಿಂದೆ ತಿಳಿಸಲಾಗಿತ್ತು.
ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಬಾರದ ಕಾರಣ ಮತು ಅಭ್ಯರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಕೆ ಅವಧಿ ಇದೀಗ ವಿಸ್ತರಿಸಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೇಲ್ಕಂಡ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.