ಬಿಸಿ ಬಿಸಿ ಸುದ್ದಿ

ರೇಣುಕಾ ಮಾದರ್ ಅತ್ಯಾಚಾರ, ಕೊಲೆ ಪ್ರಕರಣ: ಉಪಮುಖ್ಯಮಂತ್ರಿ ಕಾರಜೋಳ್ ವಜಾಕ್ಕೆ ಆಗ್ರಹ

ಕಲಬುರಗಿ: ತಮ್ಮ ಸ್ವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯೇ ದಲಿತ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಭವಿಸಿದರೂ ಸಹ ಆ ಕುಟುಂಬಕ್ಕೆ ನ್ಯಾಯ ಕೊಡಿಸುವಲ್ಲಿ ವಿಫಲವಾಗಿರುವ ವಿಜಯಪೂರ್ ಜಿಲ್ಲೆಯ ಮುಧೋಳ್ ಕ್ಷೇತ್ರದ ಶಾಸಕರೂ ಹಾಗೂ ರಾಜ್ಯದ ಉಪ ಮುಖ್ಯಮಂತ್ರಿ, ಸಮಾಜ ಕಲ್ಯಾಣ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ್ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ದಶರಥ್ ಎಂ. ಕಲಗುರ್ತಿ ಅವರು ಇಲ್ಲಿ ಒತ್ತಾಯಿಸಿದರು.

ಶನಿವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರಜೋಳ್ ಅವರ ಕ್ಷೇತ್ರದಲ್ಲಿಯೇ ರೇಣುಕಾ ಮಾದರ್ ಎಂಬ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಆಕೆಯನ್ನು ಕೊಲೆ ಮಾಡಲಾಗಿದೆ. ಆ ಕ್ಷೇತ್ರದ ಶಾಸಕರಾಗಿ ಸಂತ್ರಸ್ತ ಕುಟುಂಬವನ್ನೂ ಸಹ ಭೇಟಿ ಮಾಡಿಲ್ಲ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಸಹ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿಳಂಬವಾಗಿ ಕಳೆದ ಶುಕ್ರವಾರ ನಗರಕ್ಕೆ ಆಗಮಿಸಿದ ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ್ ಅವರನ್ನು ಅವರ ಒಪ್ಪಿಗೆಯ ಮೇಲೆಯೇ ನಿಗದಿಪಡಿಸಿದ ಸಮಯಕ್ಕೆ ಭೇಟಿಯಾಗಲು ಹೋದರೆ ಅವರು ಇರಲಿಲ್ಲ. ಖೂಬಾ ಪ್ಲಾಟ್‌ನ ಮನೆಯೊಂದರಲ್ಲಿ ಇರುವ ಕುರಿತು ಮಾಹಿತಿ ಬಂದು ಅಲ್ಲಿಗೆ ಹೋದರೆ ಮನವಿ ಸ್ವೀಕರಿಸದೇ ಪೋಲಿಸರ ಮೂಲಕ ದಬ್ಬಾಳಿಕೆ ನಡೆಸಿದರು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಾರಜೋಳ್ ಅವರು ಸಂಪುಟದಲ್ಲಿ ಮುಂದುವರೆಯಬಾರದು. ಅನ್ಯಾಯಕ್ಕೆ ಒಳಗಾದ ಕುಟುಂಬಕ್ಕೆ ನ್ಯಾಯ ದೊರಕಿಸಲು ರಾಜ್ಯ ಸರ್ಕಾರವು ಕ್ರಮ ಕೈಗೊಳ್ಳಬೇಕು. ಮೃತಳ ಕುಟುಂಬಕ್ಕೆ ೧೦ ಲಕ್ಷ ರೂ.ಗಳ ಪರಿಹಾರ, ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಅವರು ಒತ್ತಾಯಿಸಿದರು.

ಬೇಡಿಕೆಗಳು ಇಡೇರದೇ ಹೋದಲ್ಲಿ ನವೆಂಬರ್ ೧೦ರಂದು ಮುಖ್ಯಮಂತ್ರಿಗಳ ಮನೆಯ ಮುಂದೆ ಪ್ರತಿಭಟನೆ ರೂಪಿಸಲಾಗುವುದು ಎಂದು ಅವರು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಶೀನಾಥ್ ಹಾದಿಮನಿ, ಎಸ್.ಎಂ. ದೊಡ್ಡಮನಿ ಅವರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

5 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

7 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

14 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

14 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

15 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago