ಬಿಸಿ ಬಿಸಿ ಸುದ್ದಿ

ಕಲಬುರಗಿ CPI(M) ಜಿಲ್ಲಾ ಸಮ್ಮೇಳನ; ಲೋಗೋ ಬಿಡುಗಡೆ

ಕಲಬುರಗಿ: ಭಾರತ ಕಮ್ಯೂನಿಸ್ಟ್ ಪಕ್ಷ ( ಮಾಕ್ರ್ಸ್ ವಾದಿ)ಯು ನವ್ಹೆಂಬರ್ 24, 25 ರಂದು, ಕಲಬುರಗಿಯಲ್ಲಿ ನಡೆಯಲಿರುವ ತನ್ನ 24 ನೇ CPI(M) ಜಿಲ್ಲಾ ಸಮ್ಮೇಳನದ ಅಂಗವಾಗಿ ಇಂದು ಪಕ್ಷದ ಕಚೇರಿಯಲ್ಲಿ ತನ್ನ ಲೋಗೋ ಬಿಡುಗಡೆ ಮಾಡಿತು.

ಕಮ್ಯೂನಿಸ್ಟ್ ಪಕ್ಷಕ್ಕೆ ಜಗತ್ತಿನಾದ್ಯಂತ ಸುದೀರ್ಘ ಇತಿಹಾಸವಿದೆ. ಕಾಯಕ ಜೀವಿಗಳ ಸಮಗ್ರ ಅಭಿವೃದ್ಧಿ ತನ್ಮೂಲಕ ಇಡೀ ಮಾನವ ಕಲ್ಯಾಣಕ್ಕಾಗಿ ದುಡಿಯುತ್ತಿರುವ ಇದು ಸೈದ್ಧಾಂತಿಕ ಬದ್ಧತೆಯಿಂದ ಮುಂದುವರೆಯುತ್ತಿದೆ. ಇಂದು ವಿಶ್ವದಾದ್ಯಂತ ದುಡಿಯುವ ಜನರ ಪರವಾದ ಕಾಯ್ದೆ ಕಾನೂನುಗಳು ಪಾಸಾಗಿದ್ದರೆ ಅದಕ್ಕೆ ಕಾರಣ ಜಗತ್ತಿನ ತುಂಬ ಬೇರೆ ಬೇರೆ ಹೆಸರಿನಿಂದ ಹರಡಿಕೊಂಡಿರುವ ಕಮ್ಯೂನಿಸ್ಟ್ ಪಕ್ಷಗಳೆ ಆಗಿವೆ ಎಂದು ಲೋಗೋ ಬಿಡುಗಡೆ ಮಾಡಿದ ಕಲಬುರಗಿ ಜಿಲ್ಲಾ ಕಾರ್ಯದರ್ಶಿಗಳಾದ ಕಾಂ ಕೆ ನೀಲಾ ಹೇಳಿದರು.

ಇದೇ ದಿನಾಂಕ 24 ರಂದು ಮುಂಜಾನೆ 11 ಗಂಟೆಯಿಂದ ನಗರೇಶ್ವರ ಶಾಲೆಯಿಂದ ಮೆರವಣಿಗೆ ಹೊರಟು ಜಗತ್ ವೃತ್ತದಲ್ಲಿ ಸಮಾವೇಶಗೊಂಡು ಅಲ್ಲಿಯೆ ಬಹಿರಂಗ ಸಭೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪಕ್ಷದ ಕೇಂದ್ರ ಸಮಿತಿ ಸದಸ್ಯರಾದ ಕಾಂ ರಾಘವಲು ಮತ್ತು ರಾಜ್ಯ ಸಿ ಆಯ್ ಟಿ ಯು ಮುಖಂಡರಾದ ಕಾಂ ವರಲಕ್ಷ್ಮೀ ಆಗಮಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಮೊಹಮ್ಮದ ಹಸನ್ ಖಾನ್ ಸ್ಮಾರಕ ಭವನದಲ್ಲಿ ಎರಡು ದಿನಗಳವರೆಗೆ ಪ್ರತಿನಿಧಿ ಅಧಿವೇಶನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕಾಂ ಎಂ ಬಿ ಸಜ್ಜನ, ಕಾಂ ಶರಣಬಸವ ಮಮಶೆಟ್ಟಿ, ಕಾಂ ಪಾಂಡುರಂಗ ಮಾವಿನಕರ್, ಯುವಜನ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಕಾಂ ಲವಿತ್ರ, ಭಾರತ ವಿದ್ಯಾರ್ಥಿ ಸಂಘಟನೆಯ ರಾಜ್ಯ ಮುಖಂಡರಾದ ಕಾಂ ಸುಜಾತಾ,ಮುಂತಾದವರು ಹಾಜರಿದ್ದು ಸಮ್ಮೇಳನದ ಯಶಸ್ಸಿಗಾಗಿ ಕಾರ್ಯಬದ್ಧರಾದರು.

emedialine

Recent Posts

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

6 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

6 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

7 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

17 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

17 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

17 hours ago