ಬಿಸಿ ಬಿಸಿ ಸುದ್ದಿ

ಸಚಿವ ಖರ್ಗೆ ಜನ್ಮದಿನ: ನಾಳೆ ನೇತ್ರ ಚಿಕಿತ್ಸೆ, ಕನ್ನಡಕ ವಿತರಣೆ

ಕಲಬುರಗಿ: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿರಾಜ್, ಐಟಿ/ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹುಟ್ಟು ಹಬ್ಬದ ನಿಮಿತ್ಯ ನ.22 ರಂದು ಕಣ್ಮಣಿ ವಿಶೇಷ ಕಾರ್ಯಕ್ರಮದ ಆಯೋಜಿಸಿ ಸರ್ಕಾರಿ ಶಾಲೆಯ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸೆ ಹಾಗೂ ಕನ್ಬಡಕ ವಿತರಣೆ ಮಾಡಲಾಗುವುದು ಎಂದು ಶ್ರಾವಸ್ತಿ ಟ್ರಸ್ಟ್ ಅಧ್ಯಕ್ಷ ಡಾ. ಕಿರಣ್ ದೇಶಮುಖ್ ಅವರು ತಿಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆಯವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ. ಆದಾಗ್ಯೂ, ಜನಸಾಮಾನ್ಯರಿಗೆ ಸಹಾಯಕವಾಗುವಂತಹ ಕಾರ್ಯಕ್ರಮ ಹಮ್ಮಿಕೊಳ್ಳಲು ಅಭಿಮಾನಿಗಳಿಗೆ ಹೇಳಿದ್ದಾರೆ. ಹಾಗಾಗಿ ಅವರ ಹುಟ್ಟುಹಬ್ಬದಂದು ನಾವು ಅವರ ಆಶಯದಂತೆ ಅನೇಕ ಸಮಾಜ ಮುಖಿ ಕೆಲಸಗಳನ್ನು ಮಾಡುತ್ತ ಬಂದಿದ್ದೇವೆ ಎಂದರು.

ಬಡಜನತೆಗೆ ದಿನಸಿ, ಶಾಲಾ ವಿದ್ಯಾರ್ಥಿಗಳಿಗೆ ನೋಟ್‍ಬುಕ್, ಕಳೆದ ವರ್ಷ ಯುವ ಜನತೆಯಲ್ಲಿ ಕ್ರೀಡಾ ಸ್ಫೂರ್ತಿಯನ್ನು ಹೆಚ್ಚಿಸಲು ಬೃಹತ್ ವೇದಿಕೆಯೊಂದಿಗೆ ಕ್ರಿಕೆಟ್ ಪಂದ್ಯಾವಳಿಯನ್ನೂ ಹಮ್ಮಿಕೊಂಡಿದ್ದೆವು. ಈ ವರ್ಷ ನಗರದ ಮಕ್ಕಳ ಕಣ್ಣಿನ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಕಣ್ಮಣಿ ಎಂಬ ಶೀರ್ಷಿಕೆಯಡಿ ಉಚಿತ ಕಣ್ಣಿನ ತಪಾಸಣೆ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಅವರು ಹೇಳಿದರು.

ಈಗಾಗಲೇ ಕಳೆದ ಒಂದು ವಾರದಿಂದ ಬೆಂಗಳೂರು ಹಾಗೂ ಸ್ಥಳೀಯ 15 ನೇತ್ರ ತಜ್ಞರ ತಂಡ ಹಾಗೂ 100ಕ್ಕೂ ಹೆಚ್ಚು ಸ್ವಯಂ ಸೇವಕರಿಂದ ನಗರದ ಹತ್ತು ಸಾವಿರಕ್ಕೂ ಹೆಚ್ಚು ಸರ್ಕಾರಿ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಯ ಮಕ್ಕಳಿಗೆ ಕಣ್ಣಿನ ತಪಾಸಣೆ ಮಾಡಲಾಗಿದೆ. ತಪಾಸಣೆಯಲ್ಲಿ 572 ವಿದ್ಯಾರ್ಥಿಗಳಿಗೆ ಮತ್ತು 22 ಶಿಕ್ಷಕರಿಗೆ ಕಣ್ಣಿನ ದೃಷ್ಟಿ ದೋಷ ಕಂಡುಬಂದಿದ್ದು, ಕನ್ನಡಕದ ಅವಶ್ಯಕತೆ ಇದೆ ಎಂಬುದು ಕಂಡುಬಂದಿದೆ. ಅವರಲ್ಲಿ ಸುಮಾರು 15 ವಿದ್ಯಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದು, ಅವರಿಗೆ ಉಚಿತವಾಗಿ ಚಿಕಿತ್ಸಾ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಜರ್ ಅಲಮ್ ಖಾನ್, ಪ್ರವೀಣ್ ಪಾಟೀಲ್ ಹರವಾಳ್, ಫಾರೂಖ್ ಹುಸೇನ್ ಮನಿಯಾಳ್, ರಾಜೀವ್ ಜಾನೆ, ಡಾ. ಸಿದ್ದಾರ್ಥ ಕೋರವಾರ್ ಮುಂತಾದವರು ಉಪಸ್ಥಿತರಿದ್ದರು.

vikram

Recent Posts

ವಿಶ್ವ ವಿಕಲಚೇತನರ ದಿನಾಚರಣೆ: ವಿಶೇಚೇತನರಿಗೆ ಅನುಕಂಪ ಬೇಡ ಅವಕಾಶ ಕೊಡಿ: ಅಲ್ಲಮಪ್ರಭು ಪಾಟೀಲ

  ಕಲಬುರಗಿ: ಡಿ.3 ವಿಕಲಚೇತನರನ್ನು ಇತರರಂತೆ ಕಾಣಬೇಕು. ಅನುಕಂಪಕ್ಕೆ ಸೀಮಿತವಾಗಿಸದೆ ಅವರಿಗೆ ಅವಕಾಶ ನೀಡಿ ಸಬಲರನ್ನಾಗಿಸುವ ಜವಾಬ್ದಾರಿ ಸಮಾಜದ ಮೇಲಿದೆ…

2 hours ago

ಅಂಗವಿಕಲರಿಗೆ ಅನುಕಂಪ ಬೇಡ ಅವಕಾಶ ನೀಡಿ

ಕಲಬುರಗಿ: ಇಂದು ಪ್ರಗತಿ ಕಾಲೋನಿಯ ಬಸವರಾಜ್ ಮಗಲಿ ಅವರ ಮಗಳು ಕುಮಾರಿ ಸ್ವಾತಿ 20 ವರ್ಷದಿಂದ ಅಂಗವಿಕಲತೆಯಿಂದ ಬಳಲುತ್ತಿದ್ದು ಆಕೆ…

3 hours ago

ರಸ್ತೆ ಅಪಘಾತದಿಂದ ದೇಶದಲ್ಲಿ ಪ್ರತಿ ಐದು ನಿಮಿಷಕ್ಕೊಂದು ಸಾವು; ಸಿದ್ದಪ್ಪ ಕಲ್ಲೇರ ಕಳವಳ

ಕಲಬುರಗಿ: ಇಂದಿನ ಯುಗದಲ್ಲಿ ಎಲ್ಲರೂ ವಾಹನ ಹೊಂದಿದ್ದಾರೆ. ರಸ್ತೆಯಲ್ಲಿ ನಿಧಾನವಾಗಿ, ವಿವೇಕದೊಂದಿಗೆ ವಾಹನ ಚಾಲನೆ ಮಾಡಬೇಕು. ವಾಹನ ಸವಾರರ ತಪ್ಪಿನಿಂದ…

4 hours ago

ದೇಹ – ನೇತ್ರದಾನ ಮಾಡಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೆ ಡಾ.ಪೆರ್ಲ ಅಭಿನಂದನೆ

ಕಲಬುರಗಿ: ಸೇವಾನಿವೃತ್ತಿಯ ದಿನ ತನ್ನ ದೇಹ ಮತ್ತು ನೇತ್ರವನ್ನು ದಾನ ಮಾಡಿದ ಕೆ ಎಸ್ ಆರ್ ಪಿ ಕಲಬುರಗಿ ಘಟಕದ…

7 hours ago

ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ ಪರಿಹರಿಸಲು ಶಾಸಕರಿಗೆ ಮನವಿ

ಕಲಬುರಗಿ; ಇಂದು ಗ್ರಾಮಿಣ ಶಾಸಕರಾದ ಬಸವರಾಜ ಮತ್ತಿಮೂಡ್ ರವರಿಗೆ ಬಗರ್ ಹುಕುಂ ರೈತರ ಸಮಸ್ಯೆಗಳ ಕುರಿತು ಮನವಿಪತ್ರ ವನ್ನು ಸಲ್ಲಿಸಲಾಯಿತು.…

7 hours ago

ಪ್ರೊ. ಜಿ.ಎಸ್ ಅಮೂರ ಜನ್ಮ ದಿನಾಚರಣೆ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್…

1 day ago