ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರರಾದ ಡಾ. ಸುರೇಶ್ ಶರ್ಮಾ ಅವರು ಸ್ಪರ್ಧಿಸಿದ್ದು ಗುರುವಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.
ನಗರದ ಜಗತ್ ವೃತ್ತದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಳಿಕ ಬೆಂಬಲಿಗರೊಂದಿಗೆ ಕರ್ನಾಟಕ ಸರ್ಕಾರಿ ಭವನಕ್ಕೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರಾದ ಡಾ. ಸುರೇಶ್ ಶರ್ಮಾ ಅವರು ಸರ್ಕಾರಿ ನೌಕರರ ಒತ್ತಾಸೆಯ ಮೇರೆಗೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಜಿಲ್ಲೆಯ ಸರ್ಕಾರಿ ನೌಕರರು ನನ್ನನ್ನ ಆಯ್ಕೆ ಮಾಡುತ್ತಾರೆ ಎಂಬ ಭರವಸೆ ಇದೆ ಎಂದು ಅಭಿಲಾಷೆಯನ್ನು ವ್ಯಕ್ತಪಡಿಸಿದರು.
ಇನ್ನು ಈ ವೇಳೆ ಅನೇಕ ಸರ್ಕಾರಿ ನೌಕರರ ಸಂಘಟನೆಯ ಮುಖಂಡರು ಭಾಗವಹಿಸಿ ಸುರೇಶ ಶರ್ಮಾ ಅವರ ಜನಪರ ಕಾಳಜಿ ಹಾಗೂ ಸೇವೆಗಳನ್ನ ಕೊಂಡಾಡಿದ್ರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ರಾಜು ಲೆಂಗಟಿ, ನಾಗಪ್ಪ ಹೊನ್ನಳ್ಳಿ, ಮಲ್ಲಯ್ಯ ಗುತ್ತೇದಾರ್, ಶಿವಪುತ್ರ ಕಾರಣಿಕ್, ಮಹೇಶ್ ಬಸರಕೋಡ್, ಸುನಿಲ್ ಕುಲಕರ್ಣಿ, ವಿಜಯಕುಮಾರ್ ನಾಗೂರ್, ಶಶಿಕಾಂತ್, ವೆಸ್ಲಿ ವೇದರಾಜ್ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…