ಬಿಸಿ ಬಿಸಿ ಸುದ್ದಿ

ವಿಕಲಚೇತನರು ಎಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು: ರಾಯಪ್ಪ ಹುಣಸಗಿ

ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಹೇಳಿದರು.

ಗುರುವಾರದಂದು ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಎಲ್ಲಾ ಸಂಘ/ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಎಂ.ಆರ್.ಡಬ್ಲ್ಯೂ/ಯು.ಆರ್.ಡಬ್ಲ್ಯೂ/ವಿ.ಆರ್.ಡಬ್ಲ್ಯೂ ರವರ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ -2024ರ ಪ್ರಯುಕ್ತ ವಿಕಲಚೇತನರಿಗಾಗಿ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಉದ್ಫಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಪ್ರತಿಯೊಬ್ಬರು ಕ್ರೀಡೆಗಳಲ್ಲಿ ಸಂತೋಷದಿಂದ ಭಾಗವಹಿಸಿ ಗೆಲವು ಸಾಧಿಸಬೇಕು ಅವರು ತಿಳಿಸಿದರು.

ವಿಕಲಚೇತನರು ಯಾವಾಗಲು ಒದುವುದರ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಳ್ಳಬೇಕು ಸರ್ಕಾರದಿಂದ ಸಿಗುವ ಪ್ರತಿಯೊಂದು ಸೌವಲತ್ತುಗಳನ್ನು ಪಡೆದುಕೊಳ್ಳಬೇಕು ಯಾವುದೇ ಕ್ರೀಡೆಯಲ್ಲಿ ಸೋಲು ಗೆಲುವು ಇದ್ದೆ ಇರುತ್ತದೆ ಕ್ರೀಡೆಗಳು ಭಾಗವಹಿಸಿ ಒಳ್ಳೆಯ ಕೀರ್ತಿ ತರಬೇಕೆಂದು ಅವರು ಹೇಳಿದರು.

ವಿಕಲಚೇತನರು ಕ್ರೀಕೆಟ್, ರನ್ನಿಂಗ್, ಶಾರ್ಟಪುಟ್, ಗುಂಡು ಎಸೆತ್, ಮೂಜಿಕಲ್ ಚೇರ, ಉದ್ದ ಜಿಗತ್ ಭಾಗವಹಿಸಿದ್ದರು.

ಕಲಬುರಗಿ ದಕ್ಷಿಣ ಭಾರತ ದಲಿತ ಎಜುಕೇಷನಲ್ ಸೂಸೈಟಿ ಹಾಗೂ ಮಾಜಿ ಮಹಾಪೌರರಾದ ಚಂದ್ರೀಕಾ ಪರಮೇಶ್ವರ ಅವರು ಮಾತನಾಡಿ, ಈ ವಿಶೇಷ ಚೇತನ ಮಕ್ಕಳ ಶಾಲೆಗಳು ನಡೆಸುವುದು ಅಷ್ಟು ಸುಲಭದ ಮಾತ್ರವಲ್ಲ ತುಂಬಾ ಕಷ್ಟದ ಕೆಲಸ ಹಾಗಾಗಿ ಸರ್ಕಾರದಿಂದ ನಮಗೆ ಇನ್ನೂ ಅನೇಕ ರೀತಿಯು ಸೌಲಭ್ಯಗಳು ದೊರೆಯಬೇಕು ಎಂದು ಅವರು ಹೇಳಿದರು.

ಕಲಬುರಗಿ ಹೈದ್ರಾಬಾದ ಕರ್ನಾಟಕ ಕ್ಷೇಮಾಭಿವೃದ್ಧಿ ಸಂಸ್ಥೆಯ ದತ್ತು ಅಗ್ರವಾಲ್ ಅವರು ಮಾತನಾಡಿ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸಾದಿಕ ಹುಸೇನ್ ಖಾನ್ ರವರು ಬಂದ ನಂತರ ಇಲಾಖೆಯ ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತಿವೆ ಎಂದರು.

ಅಂತರಾಷ್ಟ್ರೀಯ ಕ್ರೀಡಾಪಟು ರಮೇಶ ಜಾದವ್ ಮಾತನಾಡಿ, ವಿಕಲಚೇತನರಿಗೆ ಸಿಗಬಹುದಾದ ಅನೇಕ ರೀತಿಯ ಸೌಲಭ್ಯಗಳನ್ನು ನಿಜವಾದ ಅಂಗವಿಕಲರಿಗೆ ಸಿಗುತ್ತಿರುವುದು ತುಂಬಾ ಸಂತೋಷ ವಿಷಯ ಮತ್ತು ವಿವಿಧ ಇಲಾಖೆಯ ಶೇಕಡ 5 ಪ್ರತಿಶತ ಅನುದಾನವನ್ನು ಸದುಪಯೋಗಪಡೆದುಕೊಳ್ಳಲು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ ಕೆ ಕಲಬುರಗಿ ವಿನಾಯಕ ಎಜುಕೇಷನಲ್ ಸೂಸೈಟಿಯ ಶ್ರೀಮಂತ ರೇವೂರ್, ಶ್ರೀಯಾನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಾಜು ಶಾಖಾಪುರ, ಅಂಗವಿಕಲರ ಪುನರ್ವವಸತಿ ಕೇಂದ್ರ ನೋಡಲ್ ಅಧಿಕಾರಿ ಪ್ರಕಾಶ ದ್ಯಾಬೇರಿ,ದೈಹಿಕ ಶಿಕ್ಷಕ ಪ್ರಕಾಶ ಭಜಂತ್ರಿ, ಸರಕಾರಿ ಕಿವಡ ಮಕ್ಕಳ ಶಾಲೆಯ ಅಧೀಕ್ಷಕ ಲೋಕೇಶ, ಎಲ್ಲಾ ತಾಲ್ಲೂಕಿನ ಎಂ.ಆರ್.ಡಬ್ಲ್ಯೂಗಳು ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

25 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago