ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು, ಅರ್ಹ ಮತದಾರರನ್ನು ಸೇರ್ಪಡೆಗೊಳಿಸುವ ಸಂಬಂಧ ಇದೇ ನವೆಂಬರ್ 23 (ಶನಿವಾರ) ಹಾಗೂ 24 (ಭಾನುವಾರ) ರಂದು ಜಿಲ್ಲೆಯಾದ್ಯಂತ ಮತದಾರರ ನೋಂದಣಿಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಮತದಾರರ ಪರಿಷ್ಕರಣೆ ಸಂಬಂಧ ಈಗಾಗಲೆ ಕಳೆದ ಅಕ್ಟೋಬರ್ 29 ರಂದು ಕರಡು ಮತದಾರರ ಪಟ್ಟಿ ಜಿಲ್ಲೆಯ 9 ವಿಧಾನಸಭಾ ಮತಕ್ಷೇತ್ರಗಳ ನಿಗದಿತ ಸ್ಥಳಗಳಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯ 2,400 ಮತಗಟ್ಟೆ ಕೇಂದ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ನೊಂದಣಿ ಅಭಿಯಾನ ಏರ್ಪಡಿಸಲಾಗಿದ್ದು, ಸದರಿ ಅಭಿಯಾನದಲ್ಲಿ ಯುವ ಮತದಾರರು ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದೇ ಇರುವ ಅರ್ಹ ಮತದಾರರು ತಮ್ಮ ಮತಗಟ್ಟೆ ಕೇಂದ್ರಗಳಿಗೆ ತೆರಳಿ ನಮೂನೆ-6ರಲ್ಲಿ ಅರ್ಜಿ ಭರ್ತಿ ಮಾಡಿ ಅದರೊಂದಿಗೆ ಅಗತ್ಯ ದಾಖಲೆಗಳನ್ನು ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…
ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…
ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…
ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತದ ಡಾ.ಬಿ.ಆರ್. ಅಂಬೇಡ್ಕರ್ ಫಂಕ್ಷನ್ ಹಾಲ್‍ನಲ್ಲಿ ಆಡಿಟ್ ದಿವಸ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ…
ಕಲಬುರಗಿ: ಭಕ್ತರ ಭಾಗ್ಯವನ್ನು ಬದಲಾಯಿಸುವ ಮಹಾ ಮಹಿಮರು ಶ್ರೀಶಿವಚಿದಂಬರ ಗುರುಗಳು, ಚಿದಂಬರರ ಅನೇಕ ಲೀಲೆಗಳಿಂದ ಭಕ್ತ ವೃಂದ ಉದ್ದಾರವಾಗಿದ್ದಾರೆ. ಶಿವ…