ಸಂವಿಧಾನ ದಿನಾಚರಣೆ ಹಿನ್ನೆಲೆ: ಚಿತ್ರಕಲಾ ಮತ್ತು ಟೈಕೋಥಾನ್ ಸ್ಪರ್ಧೇ ಆಯೋಜನೆ

0
13

ಕಲಬುರಗಿ: ನ.22 ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಡಳಿತ, ಸಮಾಜ ಕಲ್ಯಾಣ‌ ಇಲಾಖೆ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ವತಿಯಿಂದ ಇದೇ ನವೆಂಬರ್ 25 ರಂದು ಸಂವಿಧಾನ ವಿಷಯದ ಆಧಾರದ ಮೇಲೆ ಚಿತ್ರಕಲಾ ಮತ್ತು ಟೈಕೋಥಾನ್ ಸ್ಪರ್ಧೇ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ‌ ಭುವನೇಶ ಪಾಟೀಲ ದೇವಿದಾಸ್ ತಿಳಿಸಿದ್ದಾರೆ.

ಸ್ಪರ್ಧೆಯು‌ ಎರಡು ವಿಭಾಗಳಲ್ಲಿ ನಡೆಯಲಿದೆ. 17 ವರ್ಷದೊಳಗಿನ ಮತ್ತು 17 ವರ್ಷ ಮೇಲ್ಪಟ್ಟು ಅಭ್ಯರ್ಥಿಗಳಿಗೆ ಪ್ರತ್ಯೇಕ ಸ್ಪರ್ಧೆ ಇರಲಿದ್ದು, ಶಾಲಾ-ಕಾಲೇಜು ಮಕ್ಕಳು, ಸಾರ್ವಜನಿಕರು ಹೆಚ್ಚಿನ‌ ಸಂಖ್ಯೆಯಲ್ಲಿ ಇದರಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

Contact Your\'s Advertisement; 9902492681

ಟೈಕೋಥಾನ (Toycothon) ಸ್ಪರ್ಧೆಗೆ ಸಾಮಾನ್ಯವಾಗಿ ಮನೆಗಳಲ್ಲಿ ದೊರೆಯುವ ನಿರುಪಯುಕ್ತ ವಸ್ತುಗಳಿಂದ ತಯಾರಿಸಲ್ಪಡುವ ಕಲಾಕೃತಿಗಳನ್ನು ತಯಾರಿಸಿ ನವೆಂಬರ್ 25ರ ಮಧ್ಯಾಹ್ನ 12 ಗಂಟೆ ಒಳಗಾಗಿ ಪಾಲಿಕೆಯ ಇಂದಿರಾ ಸ್ಮಾರಕ ಭವನಕ್ಕೆ ತಂದು ನೀಡುವುದು. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರತ್ಯೇಕ ವಿಭಾಗದಲ್ಲಿ ಮೊದಲನೆಯ ಬಹುಮಾನ 15,000 ರೂ., ದ್ವಿತೀಯ ಬಹುಮಾನ 10,000 ರೂ. ಹಾಗೂ ತೃತೀಯ ಬಹುಮಾನ 5,000 ರೂ. ಗಳನ್ನು ನಗದು ನೀಡಲಾಗುತ್ತದೆ.

ಚಿತ್ರಕಲಾ ಸ್ಪರ್ಧೆಯು ನವೆಂಬರ್ 25 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಇಂದಿರಾ ಸ್ಮಾರಕ ಭವನದ ಆವರಣದಲ್ಲಿ ಏರ್ಪಡಿಸಲಾಗಿರುತ್ತದೆ. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರತ್ಯೇಕ ವಿಭಾಗದಲ್ಲಿ ಮೊದಲನೆಯ ಬಹುಮಾನ 10,000 ರೂ., ದ್ವಿತೀಯ ಬಹುಮಾನ 5,000 ರೂ. ಹಾಗೂ ತೃತೀಯ ಬಹುಮಾನ 3,000 ರೂ. ಗಳನ್ನು ನಗದು ನೀಡಲಾಗುತ್ತದೆ. ಈ ಸ್ಪರ್ಧೆಗೆ ತಗಲುವ ಸಾಮಗ್ರಿಗಳನ್ನು ಅಭ್ಯರ್ಥಿಗಳು ಸ್ವತಃ ತೆಗೆದುಕೊಂಡು ಬರಬೇಕು.

ಇನ್ನು ಎರಡು ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಾಳುಗಳಿಗೆ ಭಾಗವಹಿಸಿದ ಪ್ರಮಾಣ ಪತ್ರ ನೀಡಲಾಗುವುದು ಎಂದು ಭುವನೇಶ ಪಾಟೀಲ‌ ಸ್ಪಷ್ಟಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here