ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ ದಿನದ ನಿಮಿತ್ತ ವಿದ್ಯಾರ್ಥಿಗಳಿಗೆ ನೋಟ್‍ಬುಕ್, ಪೆನ್ನು ವಿತರಿಸಿ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಡಾ ಅಧ್ಯಕ್ಷ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ ಮಾತನಾಡಿ, ಪ್ರಗತಿಗಾಗಿ ಪ್ರಿಯಾಂಕ್ ಖರ್ಗೆ ಎಂಬ ಹೆಸರಿನಿಂದಲೇ ಹೆಸರುವಾಸಿಯಾಗಿ, ಅವರು ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿಯಾಗಿ ಬೆಳೆದಿದ್ದಾರೆ, ರಾಜ್ಯ ಮತ್ತು ರಾಷ್ಟ್ರಕ್ಕೆ ಇಂತಹ ಯುವ ನಾಯಕರು ರಾಜಕಾರಣದಲ್ಲಿ ಹೊರ ಹೊಮ್ಮುತ್ತಿರುವದು ಸಂತೋಷದ ವಿಷಯವಾಗಿದೆ, ಚಿತ್ತಾಪುರ ಕ್ಷೇತ್ರದ ಮತದಾರರು ಜಿಲ್ಲೆಯ ಅಭಿವೃದ್ಧಿಗೆ ಚಿಂತಿಸುವವರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಸರಳ ಸಜ್ಜನಿಕೆಯ ಪ್ರಿಯಾಂಕ್ ಖರ್ಗೆ ಅವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಅದು ಅವರಿಗೆ ಇಷ್ಟವೂ ಇಲ್ಲ. ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಅವರ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾರೆ ಎಂದರು.
ಮುಖಂಡ ಮಲ್ಲಿಕಾರ್ಜುನ ಕಟ್ಟಿಮನಿ ಮಾತನಾಡಿ, ನೇರ ನುಡಿಯ ಮತ್ತು ನುಡಿದಂತೆ ನಡೆವ ಪ್ರಬುದ್ಧ ರಾಜಕಾರಣಿ ಎಂದರೆ ಪ್ರಿಯಾಂಕ್ ಖರ್ಗೆ.ಅವರು ಚಿಕ್ಕವಯಸ್ಸಿನಲ್ಲಿಯೇ ಪಕ್ಷದ ಸಂಘಟನೆ ಕೈಗೊಂಡು ಶಾಸಕ, ಸಚಿವರಾಗಿ ಕೆಲಸ ಮಾಡುವ ಸಮಯದ ಒದಗಿ ಬಂದಿದೆ.ಸಚಿವರಾಗಿ ಹತ್ತು ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಸೈ ಎನಿಸಿಕೊಂಡಿದ್ದಾರೆ ಎಂದರು.
ನಂತರ ಕೇಕ್ ಕತ್ತರಿಸಿ ಸಿಹಿಯನ್ನು ಮಕ್ಕಳಿಗೆ ಹಂಚಿ, ನೋಟ್‍ಬುಕ್‍ಗಳನ್ನು ವಿತರಿಸಿದರು.
ಮಾಣಿಕ್ ಪಾಟೀಲ, ಹಾಷಮ್ ಖಾನ್,ಡಾ.ಅಹ್ಮದ್ ಪಟೇಲ್, ಗ್ರಾಪಂ ಸದಸ್ಯ ಫಯಾಜ್, ಸಿದ್ದು ಗೋಳಾ(ಕೆ),
ಮುಖ್ಯಗುರು ಮಹೇಂದ್ರ ದೊಡ್ಡಮನಿ, ಶಿಕ್ಷಕರಾದ ಗಣೇಶ ಜಾಯಿ, ಪ್ರದೀಪ ಕೋಬಾಳಕರ್, ಶರಣು ಧನ್ನೇಕರ್, ಸಾವನ್ ಕಾಂಬಳೆ,ಚಿದಾನಂದ ಕಟ್ಟಿ ಇತರರು ಇದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ತಾಲೂಕಿನ ರಾವೂರ ಗ್ರಾಮದ ಮೋರಾಜಿ ದೇಸಾಯಿ ವಸತಿ ನಿಲಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಎಂ ಖರ್ಗೆಜಿಯವರ 46ನೇ…