ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಹೇಳಿದರು. ಇದಕ್ಕೆ ಮಪುರುಷ ಮತ್ತು ಮಹಿಳೆ ಇಬ್ಬರೂ ಒಟ್ಟಾಗಿ ಕೈ ಜೊಡಿಸಿದಾಗ ಮಾತ್ರ ಭಾರತವು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಮತ್ತು ವಿಶ್ವದ ಸೂಪರ್ ಪವರ್ ದೇಶವಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಪೂಜ್ಯ ಬಸವರಾಜಪ್ಪ ಅಪ್ಪ ಸ್ಮಾರಕಭವನದಲ್ಲಿ ಶರಣಬಸವೇಶ್ವರ ವಿಶ್ವವಿದ್ಯಾಲಯ ಹಾಗೂ ಭಾರತೀಯ ಶಿಕ್ಷಣ ಮಂಡಳಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ “ಸದೃಢ ಭಾರತಕ್ಕಾಗಿ ಸ್ವಾವಲಂಬಿ ಮಹಿಳೆ” ಎಂಬ ವಿಷಯದ ಪ್ರಾದೇಶಿಕ ಮಹಿಳಾ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಅವ್ವಾಜಿಯವರು ಭಾರತದಲ್ಲಿ ಮಹಿಳೆಯರು ಪ್ರಾಚೀನ ಕಾಲದಿಂದ ಆಧುನಿಕ ಕಾಲದವರೆಗಿನ ಎಲ್ಲಾ ಚಟುವಟಿಕೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಮರಾಠಾ ಯೋಧ ಶಿವಾಜಿ ಮಹಾರಾಜ ಅವರ ತಾಯಿ ಜಿಜಾಬಾಯಿಯವರು ಹೇಗೆ ತಮ್ಮ ಮಗನನ್ನು ಬಾಲ್ಯದಿಂದಲೂ ಮಹಾನ್‍ಯೋಧನಾಗಿ ರೂಪಿಸಿದ್ದರು ಎಂದು ಸ್ಮರಿಸಿದರು. ಅದರಂತೆಯೆ ಸಾವಿತ್ರಿಬಾಯಿ ಫುಲೆ, ಮದರ್ ತೆರೆಸಾ, ಇಂದಿರಾ ಗಾಂಧಿ ಮೊದಲಾದ ಮಹಿಳೆಯರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಮಾಜದ ಅಭಿವೃದ್ಧಿಯಲ್ಲಿ ಹೇಗೆ ಕಾರ್ಯ ನಿರ್ವಹಿಸಿದ್ದಾರೆ ಎಂದು ವಿವರಿಸಿದರು. ಭಾರತವು ಅನೇಕ ಶಕ್ತಿವಂತ ಮಹಿಳೆಯರಿಗೆ ಜನ್ಮ ನೀಡಿದೆಯಲ್ಲದೆ ಸಾವಿರಾರು ಮಹಿಳೆಯರ ಭವಿಷ್ಯವನ್ನು ರೂಪಿಸಿದೆ ಎಂದು ತಿಳಿಸಿದರು.
ಮಹಿಳಾ ಸಬಲಿಕರಣ ಕ್ಷೇತ್ರದಲ್ಲಿ ಮಹಿಳೆಯರು ಗಮನಾರ್ಹ ಪ್ರಗತಿ ಸಾಧಿಸಿದ್ದರು ಕೂಡ ಹೆಣ್ಣು ಭ್ರೂಣ ಹತ್ಯೆ, ಮಹಿಳೆಯರ ಕಳ್ಳ ಸಾಗಣೆ, ವೇಶ್ಯಾವಾಟಿಕೆ, ವರದಕ್ಷಿಣೆ ಸಾವುಗಳು ಮತ್ತು ಮಹಿಳೆಯರ ಮೇಲಿನ ಇತರ ಘೋರ ಅಪರಾಧಗಳು ರಾಷ್ಟ್ರವನ್ನು ಕಾಡುತ್ತಲೆ ಇವೆ. ಇವುಗಳಿಗೆ ಕಡಿವಾಣ ಹಾಕಲು ದೊಡ್ಡ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಡಾ. ಅವ್ವಾಜಿ ಹೇಳಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳು ನಿಜವಾದ ಮಹಿಳಾ ಸಬಲೀಕರಣದ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸುತ್ತಿರುವದು ನಮಗೆ ಹೆಮ್ಮೆಯ ವಿಷಯವಾಗಿದೆ. ಈ ಸಂಸ್ಥೆಗಳಲ್ಲಿ ಒಟ್ಟು ವಿದ್ಯಾರ್ಥಿಗಳಲ್ಲಿ ಶೇ 60 ರಷ್ಟು ಮಹಿಳೆಯರಾಗಿದ್ದು, ಶೇ. 60 ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಇರುವದು ಹೆಮ್ಮೆಯ ಸಂಗತಿ ಎಂದರು. ಈ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿ ವರ್ಗದವರು ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜೊತೆಗೆ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ಭಾರತ ದೇಶದ ಪ್ರಾಚಿನ ಸಂಸ್ಕøತಿ ಮತ್ತು ಆಚಾರಗಳನ್ನು ವಿದ್ಯಾರ್ಥಿಗಳಿಗೆ ಕಲಿಸುವ ಮೂಲಕ ಅವರನ್ನು ನೈತಿಕ ನಾಗರಿಕರನ್ನಾಗಿ ರೂಪಿಸುವಲ್ಲಿ ಯಶಸ್ವಿ ಸಾಧಿಸಿದೆ ಎಂದು ಸಂತಸ ವ್ಯಕ್ತ ಪಡಿಸಿದರು.
ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ತುಳಸಿಮಾಲಾ ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಮಾತನಾಡಿ ಭಾರತದ ಒಟ್ಟು ಜನಸಂಖ್ಯೆಯಲ್ಲಿ ಶೇ.50 ರಷ್ಟು ಮಹಿಳೆಯರಿದ್ದು ಅವರು ರಾಜಕೀಯ, ಸಾಂಸ್ಕøತಿಕ, ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದಂತೆ ಇತರ ಎಲ್ಲಾ ಕ್ಷೇತ್ರಗಳಲ್ಲಿ ಉದಯೋನ್ಮುಖ ಸವಾಲುಗಳನ್ನು ಎದುರಿಸಲು ಮಹಿಳೆಯರಿಗೆ ಅನುಕೂಲಕರ ವಾತಾವರಣವನ್ನು ಸೃಷ್ಠಿಸುವದು ಸಮಾಜದ ಕರ್ತವ್ಯವಾಗಿದೆ. ಹಾಗೂ ಮಹಿಳೇಯರ ಸಮಾನ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಊಹಿಸಲು ಸಾಧ್ಯವಿಲ್ಲ ಎಂದರು.
12ನೇ ಶತಮಾನದ ಸಂತ ಮತ್ತು ಕವಿಯಿತ್ರಿ ಅಕ್ಕಮಹಾದೇವಿಯವರು ಆಶಿಸಿದಂತೆ ಮಹಿಳಾ ಸಬಲೀಕರಣದ ಉದ್ದೇಶವು ಕೇವಲ ಅವರ ಪ್ರಜ್ಞಾಪೂರ್ವಕತೆಯೊಂದಿಗೆ ಪೂರ್ಣಗೊಳ್ಳುವದಿಲ್ಲ, ಇದರ ಜೊತೆಗೆ ಮಹಿಳಾ ಕೇಂದ್ರಿತ ಮಾರ್ಕೆಟಿಂಗ್ ಅನ್ನು ಅಭಿವೃದ್ಧಿ ಪಡಿಸಿದಾಗ ಮಾತ್ರ ಅವರು ಆರ್ಥಿಕವಾಗಿ ಸಬಲೀಕರಣ ಹೊಂದುವದು ಸಾಧ್ಯ ಎಂದು ನುಡಿದರು.
ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ಉಪ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಗುಜರಾತ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಅಮಿ ಉಪಾಧ್ಯಾಯ ಅವರು ಮಾತನಾಡಿದರು. ಕರ್ನಾಟಕ ಉತ್ತರ ಪ್ರಾಂತದ ಭಾರತೀಯ ಶಿಕ್ಷಣ ಮಂಡಲದ ಅಧ್ಯಕ್ಷ ಪ್ರೊ. ಬಸವರಾಜ ಅನಾಮಿ ಸ್ವಾಗತಿಸಿದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಭಾರತೀಯ ಶಿಕ್ಷಣ ಮಂಡಳಿಯ ಜಂಟಿ ಕಾರ್ಯದರ್ಶಿ ಪಲ್ಲವಿ ಪಾಟೀಲ್ ಸೇಡಂ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…