ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ ಹುಟ್ಟುಹಬ್ಬ ಅಂಗವಾಗಿ ಕಲಬುರಗಿಯಲ್ಲಿ ಬಾಲಕಿಯರ ಕ್ರಿಕೇಟ್ ಪಂದ್ಯ ಏರ್ಪಡಿಸಲಾಗಿತ್ತು.
ಪ್ರೀಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ನಗರದ ಎನ್ ವಿ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕ್ರಿಕೆಟ್ ಪಂದ್ಯದಲ್ಲಿ ವಿವಿಧ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು. ಕೊನೆಯಲ್ಲಿ ಗ್ರೀನ್ ಟೀಮ್ ಗೆಲುವು ಸಾಧಿಸುವ ಮೂಲಕ ಟ್ರೋಪಿ ಬಾಚಿಕೊಂಡಿತ್ತು. ಇನ್ನು ರೆಡ್ ಟೀಮ್ ರನ್ನರಪ್ ಬಹುಮಾನ ಪಡೆದುಕೊಂಡರೆ, ಬ್ಲೂ ಟೀಮ್ ಮೂರನೆ ಸ್ಥಾನ ಪಡೆದುಕೊಂಡಿತ್ತು. ಕ್ರಿಕೆಟ್ ಪಂದ್ಯದಲ್ಲಿ ವಿಜೇತರಾದ ತಂಡಗಳಿಗೆ ಸಮಾರಂಭದಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕರು ಹಾಗೂ ಅತಿಥಿಗಳು ಬಹುಮಾನವನ್ನು ವಿತರಿಸುವ ಮೂಲಕ ಪೆÇ್ರೀತ್ಸಾಹಿಸಿದರು.
ಈ ವೇಳೆ ಮಾತನಾಡಿದ ಕಲಬುರಗಿ ಖ್ಯಾತ ಉದ್ಯಮಿ ಫಾರೂಕ್ ಅವರು, ಪ್ರಿಯಾಂಕ್ ಖರ್ಗೆ ಅವರ ಹುಟ್ಟು ಹಬ್ಬದ ಹಿನ್ನೆಲೆ ಕಲಬುರಗಿ ಜಿಲ್ಲೆಯಾದ್ಯಂತ ವಿವಿಧ ಸಾಮಾಜಿಕ ಕಾರ್ಯಗಳನ್ನು ಮಾಡಲಾಗುತ್ತಿದ್ದು, ಅದರ ಭಾಗವಾಗಿ ಬಾಲಕಿಯರ ಕ್ರಿಕೆಟ್ ಪಂದ್ಯವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಬಳಿಕ ಮಾತನಾಡಿದ ಡಾ.ಜೈಭೀಮ್ ದರ್ಗಿ ಅವರು, ಸಚಿವ ಪ್ರಿಯಾಂಕ ಖರ್ಗೆ ಅವರು ಶಿಕ್ಷಣ ಪ್ರೇಮಿಯಾಗಿದ್ದು ಅನೇಕ ಜನಪರ ಕಾರ್ಯಗಳನ್ನ ಮಾಡುವ ಮೂಲಕ ಮನೆ ಮಾತಾಗಿದ್ದಾರೆ. ದೇವರು ಅವರಿಗೆ ಇನ್ನಷ್ಟು ಆರೋಗ್ಯ, ಆಯಸ್ಸು ನೀಡಿ ಜನ ಸೇವೆಗೆ ಶಕ್ತಿಯನ್ನು ನೀಡಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಜಾರ್ ಆಲಂ ಖಾನ್, ನೂತನ ವಿದ್ಯಾಲಯ ಸಂಸ್ಥೆಯ ಸದಸ್ಯರಾದ ಪಾಂಡುರಂಗ ದೇಶಮುಖ್, ಡಾ.ಸಿದ್ದಾರ್ಥ್ ಕೋರುವಾರ್, ರಾಜಶೇಖರ ಗೋನಾಯಕ್, ಸಂತೋಷ ಕೋಬಾಳ ಸೇರಿದಂತೆ ಇತರರು ಭಾಗವಹಿಸಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…