ಡಾ. ವೀರೇಂದ್ರ ಹೆಗ್ಗಡೆ ಜನ್ಮದಿನ: ರಕ್ತದಾನಶಿಬಿರ

0
13

ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ 76ನೇ ಜನ್ಮದಿನದ ಅಂಗವಾಗಿ ಕಮಲಾಪುರ ಯೋಜನಾ ಕಚೇರಿಯಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತಮಾಡಿದ ಆಕಾಶವಾಣಿಯ ವಿಶ್ರಾಂತ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ. ಸದಾನಂದ ಪೆರ್ಲ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ತ್ರಿವಿಧ ದಾಸೋಹವನ್ನು ಅನುಷ್ಠಾನಗೊಳಿಸಿದ ಆದರ್ಶ ಪ್ರಾಯರು ಎಂದು ಅಭಿಪ್ರಾಯಪಟ್ಟರು.

Contact Your\'s Advertisement; 9902492681

ಆರೋಗ್ಯ, ಶಿಕ್ಷಣ ಮತ್ತು ಧಾರ್ಮಿಕ ಹೀಗೆ ತ್ರಿವಿಧ ದಾಸೋಹಗಳನ್ನು ಕೈಗೊಂಡು ಸಮಾಜದಲ್ಲಿ ಕ್ರಾಂತಿಕಾರಿ ಪರಿವರ್ತನೆಗೆ ಕಾರಣರಾದ ಹೆಗಡೆಯವರ ಸಮಾಜಮುಖಿ ಬದುಕು ಅತ್ಯಂತ ಶ್ರೇಷ್ಠವಾದದ್ದು. ನಾಡಿನ ಉದ್ದಗಲಕ್ಕೂ ಗ್ರಾಮಾಭಿವೃದ್ಧಿ ಯೋಜನೆಯು ವಿವಿಧ ಸಮಾಜ ಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಮಾನವ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದರು.

ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರರಾದ ಗಣಪತಿ ಮಾಳಂಜಿ ಮಾತನಾಡಿ, ಹೆಗ್ಗಡೆಯವರ ಸಮಾಜಮುಖಿ ಕಾರ್ಯಗಳಿಂದ ಮಹಿಳೆಯರು ಆರ್ಥಿಕ ಸಾಮಾಜಿಕ ಸ್ವಾವಲಂಬನೆಯ ಬದುಕನ್ನು ಕಟ್ಟಿಕೊಡಲು ಶ್ರೀ ಕ್ಷೇತ್ರದ ಕಾರ್ಯಕ್ರಮಗಳು ಸಮಾಜಕ್ಕೆ ಪೂರಕವಾಗಿದೆ ಮತ್ತು ಅದರಿಂದ ಪ್ರಗತಿಯನ್ನು ಕಂಡುಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಜನಜಾಗೃತಿ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಅನಿಲ್‌ ಕುಮಾರ ಡಾಂಗೆ, ರವಿ ಕುಮಾರ ನೀಲೂರ ಜಿಲ್ಲಾ ಜನಜಾಗೃತಿ ಸದಸ್ಯರು ಜಿಮ್ಸ್‌ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಕೌನ್ಸಿಲರ್‌ ಮಲ್ಲಿಕಾರ್ಜುನ, ಶಬ್ಬಿರ್‌ ಕಮಲಾಪುರ, ತಾಲೂಕು ಯೋಜನಾಧಿಕಾರಿ ಕಲ್ಲನಗೌಡ ಎಸ್‌, ರಿಯಾಜ್ ಅತ್ತಾರ್ , ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

30 ಯುನಿಟ್ ರಕ್ತ ಸಂಗ್ರಹ: ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ಒಟ್ಟು 30 ಯುನಿಟ್ ರಕ್ತ ನೀಡಿದ್ದು, ನಗರದ ಜಿಮ್ಸ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರಕ್ಕೆ ನೀಡಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here